ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

Date:

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯೇ ಅಕ್ರಮ ಸಾಗಾಟದ ಜಾಲಕ್ಕೆ ಸಿಲುಕಿರುವುದು ಆತಂಕಕಾರಿ ಸಂಗತಿಯಾಗಿದೆ.

- Advertisement -

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪಡಿತರ ಅಕ್ಕಿಯ ಅಕ್ರಮ ದಂಧೆ ನಡೆಯುತ್ತಿರುವ ಆರೋಪಗಳ ನಡುವೆಯೇ, ಬಾಗಲಕೋಟೆ ಜಿಲ್ಲೆಯಲ್ಲಿ ಸಕ್ರಿಯವಾಗಿದ್ದ ಎನ್ನಲಾದ ಅಕ್ರಮ ಸಾಗಾಟ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಇಲಕಲ್ಲಿನಿಂದ ಗುಜರಾತ್‌ನ ಅಹಮದಾಬಾದ್‌ಗೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿ, ಸುಮಾರು 34 ಟನ್ ಅಕ್ಕಿ ತುಂಬಿದ್ದ ಲಾರಿಯನ್ನು ಜಪ್ತಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಹೊಸಪೇಟೆ–ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ನಾಗರಹಳ್ಳಿ ಟೋಲ್‌ಗೇಟ್‌ನಲ್ಲಿ ಈ ಕಾರ್ಯಾಚರಣೆ ನಡೆದಿದೆ. ರಾಜಸ್ಥಾನ ರಾಜ್ಯದ ನೋಂದಣಿ ಸಂಖ್ಯೆ RJ37GB7425 ಹೊಂದಿರುವ ಲಾರಿಯಲ್ಲಿ ಪಡಿತರ ಅಕ್ಕಿ ಸಾಗಿಸಲಾಗುತ್ತಿತ್ತು. ಅಕ್ರಮ ಸಾಗಾಟದ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.ಈ ಸಂಬಂಧ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisements

*ಬಡವರ ಅಕ್ಕಿ ಪರರಾಜ್ಯಕ್ಕೆ ಸಾಗಾಟವಾಗುತ್ತಿರುವುದೇಕೆ?
ಅನ್ನಭಾಗ್ಯ ಯೋಜನೆಯಡಿ ಬಡ ಕುಟುಂಬಗಳಿಗೆ ವಿತರಿಸಬೇಕಾದ ಅಕ್ಕಿ ಅಕ್ರಮವಾಗಿ ಸಾಗಾಟವಾಗುತ್ತಿದ್ದರೆ, ಅದರ ಹಿಂದೆ ಯಾರಿದ್ದಾರೆ? ಈ ದಂಧೆಗೆ ಅಕ್ಕಿ ಪೂರೈಕೆಯಾಗುತ್ತಿರುವ ಮೂಲ ಯಾವುದು? ಸಾಗಾಟದ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ? ಎಂಬ ಪ್ರಶ್ನೆಗಳು ಮೂಡಿವೆ.

ಸರ್ಕಾರ ಬಡವರ ಆಹಾರ ಭದ್ರತೆಗಾಗಿ ನೀಡುವ ಪಡಿತರ ಅಕ್ಕಿ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಆದರೆ ಅದೇ ಅಕ್ಕಿ ಅಕ್ರಮ ಮಾರುಕಟ್ಟೆ ಸೇರಿ ಪರರಾಜ್ಯಗಳಿಗೆ ಸಾಗಾಟವಾಗುತ್ತಿದ್ದರೆ, ಇಂತಹ ದಂಧೆಗಳಿಗೆ ಕಡಿವಾಣ ಹಾಕುವುದು ಅತ್ಯಗತ್ಯ.

ಅಧಿಕಾರಿಗಳ ಈ ಕಾರ್ಯಾಚರಣೆ ಅಕ್ರಮ ಪಡಿತರ ಅಕ್ಕಿ ಸಾಗಾಟದ ಜಾಲದ ಕುರಿತು ಮತ್ತಷ್ಟು ತನಿಖೆ ನಡೆಸುವ ಅಗತ್ಯವನ್ನು ಎತ್ತಿತೋರಿಸಿದೆ. ಪ್ರಕರಣದ ಸಂಪೂರ್ಣ ಹಿನ್ನೆಲೆ, ಅಕ್ಕಿಯ ಮೂಲ ಮತ್ತು ಸಾಗಾಟದ ಹಿಂದೆ ಇರುವವರ ಕುರಿತು ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ವಿರುದ್ಧ ಅ.23ರಂದು ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಪ್ರಜಾಪ್ರಭುತ್ವ...

ರಾಯಚೂರು | ದೇವದುರ್ಗ ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಪಿಎಸ್‌ಆರ್‌ ಆಗ್ರಹ

ದೇವದುರ್ಗ ಪಟ್ಟಣದ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುವುದು, ಶೌಚಾಲಯದ ನಿರ್ವಹಣೆ ಸುಧಾರಿಸುವುದು...

ರಾಯಚೂರು | ಪ್ರತಿ ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಸ್ಥಾಪನೆಗೆ ಅಬ್ದುಲ್‌ ರಹಮಾನ್‌ ಆಗ್ರಹ

ಪ್ರತಿಯೊಂದು ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿಗಳನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ...

ಯಾದಗಿರಿ | ದಲಿತ ಐಕ್ಯತಾ ಸಮಾವೇಶಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಚಾಲನೆ: ಕರಪತ್ರ ಬಿಡುಗಡೆ

ದಲಿತ ಸಮುದಾಯದ ಹಕ್ಕುಗಳು, ಸ್ವಾಭಿಮಾನ ಮತ್ತು ಸಾಮಾಜಿಕ ಸಮಾನತೆಯ ಪರವಾದ ಹೋರಾಟವನ್ನು...