ಬಂಟ್ವಾಳ ಯುವತಿ ಹತ್ಯೆ ಪ್ರಕರಣ: ಆರೋಪಿ ವಿರುದ್ಧ ಕಠಿಣ ಶಿಕ್ಷೆಗೆ ಎಐಎಂಎಸ್‌ಎಸ್ ಆಗ್ರಹ

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸಾರ್ವಜನಿಕರ ಎದುರೇ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಗೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(AIMSS) ವಿಜಯಪುರ ಜಿಲ್ಲಾ ಸಮಿತಿಯು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದೆ.

- Advertisement -

ಈ ಕುರಿತು ಸಂಘಟನೆಯು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ” ಬಂಟ್ವಾಳ ಯುವತಿ ಹತ್ಯೆ ಕುರಿತು ಮಾಧ್ಯಮಗಳಲ್ಲಿ ವರದಿಯಾದ ಮಾಹಿತಿಯಂತೆ ಯುವತಿ ಆರೋಪಿಯ ಪ್ರೀತಿಯನ್ನು ನಿರಾಕರಿಸಿದ್ದರೂ ಆತ ನಿರಂತರವಾಗಿ ಕಿರುಕುಳ ನೀಡುತ್ತಿದ್ದನು. ಕೊನೆಗೆ ಆಕೆಯನ್ನು ಸಾರ್ವಜನಿಕರ ಎದುರೇ ಹತ್ಯೆ ಮಾಡಿರುವುದು ಅತ್ಯಂತ ಅಮಾನವೀಯ ಹಾಗೂ ಖಂಡನೀಯ ಕೃತ್ಯ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಮಹಿಳೆಯರ ಮೇಲಿನ ಇಂತಹ ಕ್ರೂರ ಹಿಂಸಾಚಾರಗಳು ಸಮಾಜದಲ್ಲಿ ಬೆಳೆಯುತ್ತಿರುವ ಅಸಹಿಷ್ಣುತೆ, ಗಂಡಾಳಿಕೆ ಮನೋಭಾವ ಹಾಗೂ ಮಾನವೀಯ ಮೌಲ್ಯಗಳ ಕುಸಿತವನ್ನು ಪ್ರತಿಬಿಂಬಿಸುತ್ತಿವೆ” ಎಂದು ಕಳವಳ ವ್ಯಕ್ತಪಡಿಸಿದೆ.

“ಸಾಮಾಜಿಕ ಜಾಲತಾಣಗಳು ಹಾಗೂ ಕೆಲವು ಸಿನಿಮಾಗಳಲ್ಲಿ ಹಿಂಸೆ, ದ್ವೇಷ, ಕ್ರೌರ್ಯ, ಅನೈತಿಕ ಸಂಬಂಧಗಳನ್ನು ವೈಭವೀಕರಿಸಲಾಗುತ್ತಿದ್ದು, ಇವು ಯುವಜನರ ಮನೋಭಾವದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿವೆ. ಪ್ರೀತಿಯ ನಿರಾಕರಣೆಯನ್ನು ಹಿಂಸೆ ಮತ್ತು ಕೊಲೆಯಲ್ಲಿ ಅಂತ್ಯಗೊಳಿಸುವ ದೃಶ್ಯಗಳನ್ನು ವೈಭವೀಕರಿಸುವ ಪ್ರವೃತ್ತಿಗೆ ಕಡಿವಾಣ ಹಾಕುವ ಅಗತ್ಯವಿದೆ” ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಇದನ್ನೂ ಓದಿದ್ದೀರಾ? ‌ತಬ್ಬಲಿ ಹಸುಗೂಸುಗಳ ಚೀತ್ಕಾರ: ಸಮಾಜದ ಆತ್ಮಸಾಕ್ಷಿಗೆ ಪ್ರಶ್ನೆ

“ಪ್ರಕರಣದ ಸಮಗ್ರ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವುದರ ಜತೆಗೆ ಮಹಿಳೆಯರ ಸುರಕ್ಷತೆಗೆ ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಸಮಾಜದಲ್ಲಿ ಮಹಿಳೆಯರನ್ನು ಸಮಾನತೆಯಿಂದ ಗೌರವಿಸುವ ಮನೋಭಾವ ಬೆಳೆಸಲು ಜಾಗೃತಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. ಮಹಿಳೆಯರಿಗೆ ಅಗೌರವ ತೋರುವುದು, ಅವರ ಮೇಲೆ ಕ್ರೌರ್ಯ ಹಾಗೂ ಅಶ್ಲೀಲತೆಯನ್ನು ಉತ್ತೇಜಿಸುವ ಸಿನಿಮಾಗಳ ಮೇಲೆ ಸೆನ್ಸಾರ್ ನಿಯಂತ್ರಣ ಬಿಗಿಗೊಳಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಅಶ್ಲೀಲ ಮತ್ತು ಹಿಂಸಾತ್ಮಕ ವಿಷಯಗಳಿಗೆ ಸರ್ಕಾರ ಕಟ್ಟುನಿಟ್ಟಿನ ನಿಯಂತ್ರಣ ಹೇರಬೇಕು” ಎಂದು ಎಐಎಂಎಸ್‌ಎಸ್ ವಿಜಯಪುರ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಶಿವಬಾಳಮ್ಮ ಕೊಂಡಗೂಳಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...