ಬಸವನ ಬಾಗೇವಾಡಿ ತಾಲ್ಲೂಕಿನ ಟಕ್ಕಳಿಕಿ ಸರ್ಕಾರಿ ಪಾಲಿಟೆಕ್ಟಿಕ್ ಸಂಸ್ಥೆಯ 2026- 2027 ನೇ ಸಾಲಿನ ಡಿಪ್ಲೋಮಾ ಪ್ರವೇಶಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ನಟರಾಜ್ ಕುಂಟೋಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸ್‌ಗಳಿಗೆ ಮೆರಿಟ್ ಹಾಗೂ ರೋಸ್ಟರ್ ನಿಯಮದಂತೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 30ರವರೆಗೆ ಅವಕಾಶ ಕಲ್ಪಿಸಲಾಗಿದೆ. ಐಟಿಐ ಅಥವಾ ದ್ವಿತೀಯ ಪಿಯುಸಿ ( ವಿಜ್ಞಾನ/ ತಾಂತ್ರಿಕ ವಿಭಾಗ) ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳು ಲ್ಯಾಟರಲ್ ಎಂಟ್ರಿ ಸ್ಕೀಮ್ ಮೂಲಕ ನೇರವಾಗಿ ಎರಡನೇ ವರ್ಷದ ( 3ನೇ ಸೆಮಿಸ್ಟರ್ ) ಡಿಪ್ಲೋಮಾ ಕೋರ್ಸ್ ಗಳಿಗೆ ಜೂನ್ ಮೂರರಿಂದ ಜುಲೈ 10ರವರೆಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಟಕ್ಕಳಿಕೆ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ 9480338253 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.





