ಬಸವನ ಬಾಗೇವಾಡಿ | ವಿದ್ಯಾರ್ಥಿನಿ ಮೇಲೆ ಹಲ್ಲೆ: ಅಡುಗೆ ಸಹಾಯಕಿ ಅಮಾನತು, ವಾರ್ಡನ್ ವರ್ಗಾವಣೆ

Date:

ಬಸವನ ಬಾಗೇವಾಡಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಮೇಲೆ ಮುಖ್ಯ ಅಡುಗೆ ಸಹಾಯಕಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಖಂಡಿಸಿ ವಿದ್ಯಾರ್ಥಿನಿಯರು ಭಾನುವಾರ ವಸತಿ ನಿಲಯದ ಎದುರು ತೀವ್ರ ಪ್ರತಿಭಟನೆ ನಡೆಸಿದರು. ಘಟನೆ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ತುರ್ತು ಕ್ರಮ ಕೈಗೊಂಡಿದ್ದು, ಆರೋಪಿಗಳಾದ ಮುಖ್ಯ ಅಡುಗೆ ಸಹಾಯಕಿಯನ್ನು ಅಮಾನತುಗೊಳಿಸಿದ್ದು, ವಾರ್ಡನ್ ವರ್ಗಾವಣೆ ಮಾಡಲಾಗಿದೆ.

- Advertisement -

ಶನಿವಾರ ರಾತ್ರಿ ವಸತಿ ನಿಲಯದ ಗ್ರಂಥಾಲಯದಲ್ಲಿ ವಿದ್ಯಾರ್ಥಿನಿಯರು ಓದುತ್ತಿದ್ದ ವೇಳೆ ರಾತ್ರಿ 10 ಗಂಟೆಯ ಬಳಿಕ ಗ್ರಂಥಾಲಯದಲ್ಲಿ ಓದಲು ಅವಕಾಶವಿಲ್ಲ, ತಮ್ಮ ಕೊಠಡಿಗಳಲ್ಲೇ ಓದಬೇಕು ಎಂದು ಮುಖ್ಯ ಅಡುಗೆ ಸಹಾಯಕಿ ಗೀತಾ ಸೂಚನೆ ನೀಡಿದ್ದರು. ಈ ವೇಳೆ ಮಾತಿನ ಚಕಮಕಿ ನಡೆದು, ವಿದ್ಯಾರ್ಥಿನಿಯೊಬ್ಬಳಿಗೆ ಕಪಾಳಮೋಕ್ಷ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯರು ಭಾನುವಾರ ಬೆಳಿಗ್ಗೆ ವಸತಿ ನಿಲಯದ ಎದುರು ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಇದೇ ವೇಳೆ ಹಾಸ್ಟೆಲ್‌ನಲ್ಲಿ ಅಡುಗೆಯ ಕಳಪೆ ಗುಣಮಟ್ಟ, ಮೂಲ ಸೌಕರ್ಯಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳನ್ನೂ ಮುಂದಿಟ್ಟರು.

ವಿದ್ಯಾರ್ಥಿನಿಯರ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ), ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಸೇರಿದಂತೆ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಮಹೇಶ ಪೋದ್ಧಾರ ಅವರು ವಿದ್ಯಾರ್ಥಿನಿಯರ ಅಹವಾಲುಗಳನ್ನು ಆಲಿಸಿ ತಕ್ಷಣವೇ ಇಲಾಖಾ ಕ್ರಮ ಘೋಷಿಸಿದರು.

ಈದಿನ.ಕಾಮ್‌ಗೆ ಪ್ರತಿಕ್ರಿಯಿಸಿದ ಮಹೇಶ ಪೋದ್ಧಾರ, “ಹಲ್ಲೆ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಅಡುಗೆ ಸಹಾಯಕಿ ಗೀತಾ ಅವರನ್ನು ಅಮಾನತುಗೊಳಿಸಲಾಗಿದೆ. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪದ ಮೇರೆಗೆ ಹಾಸ್ಟೆಲ್ ವಾರ್ಡನ್ ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಅಡುಗೆ ಸಹಾಯಕರು ಸೇರಿದಂತೆ ಒಟ್ಟು ಆರು ಹೊರಗುತ್ತಿಗೆ ಸಿಬ್ಬಂದಿಯನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ” ಎಂದು ತಿಳಿಸಿದರು.

“ಸೋಮವಾರ ಸಂಜೆಯೊಳಗೆ ನೂತನ ವಾರ್ಡನ್, ಮುಖ್ಯ ಅಡುಗೆ ಸಹಾಯಕಿ ಹಾಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ವಿದ್ಯಾರ್ಥಿನಿಯರ ಎಲ್ಲ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಲಾಗುವುದು” ಎಂದು ಭರವಸೆ ನೀಡಿದ ಅವರು, ಪ್ರತಿಭಟನೆಯನ್ನು ಹಿಂಪಡೆಯುವಂತೆ ಮನವಿ ಮಾಡಿದರು.

ವಿದ್ಯಾರ್ಥಿನಿಯರ ಭದ್ರತೆ ಹಾಗೂ ವಸತಿ ನಿಲಯದ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿರುವ ಈ ಘಟನೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಕೈಗೊಂಡಿರುವ ಕ್ರಮದ ಬಳಿಕ ಪರಿಸ್ಥಿತಿ ಸಹಜವಾಗುವ ನಿರೀಕ್ಷೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬು ಬೆಳೆಗಾರರಿಂದ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಬಂದ್

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಹಾಲು, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪಕ್ಕೆ ವಿರೋಧ; ವಿಜಯಪುರದಲ್ಲಿ ಎಸ್‌ಯುಸಿಐಸಿ ಪ್ರತಿಭಟನೆ

ನವೆಂಬರ್ 1ರಿಂದ ಜಾರಿಗೆ ಬರುವಂತೆ ಜಾರಿಗೊಳಿಸಿರುವ, ಪ್ರತಿ ಲೀಟರ್‌ ಹಾಲಿಗೆ ₹8...

ಗ್ಯಾನೇಶ್ ವಿರುದ್ಧ ‘ಇಂಡಿಯಾ’ ಒಕ್ಕೂಟದ ಸಾಂಕೇತಿಕ ‘ಮಹಾಭಿಯೋಗ’: ಮುಂದುವರಿದ ವಾಗ್ದಾಳಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ 'ಇಂಡಿಯಾ'...