ಬಸವನ ಬಾಗೇವಾಡಿ | ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪತ್ರ ಚಳವಳಿ

Date:

ಶಾಸನಬದ್ಧವಾಗಿ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬಹುಹಳ್ಳಿ ಕುಡಿಯುವ ನೀರು ಸರಬರಾಜು ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ಬಸವನ ಬಾಗೇವಾಡಿ ಸಮಿತಿ ವತಿಯಿಂದ ಪತ್ರ ಚಳವಳಿ ನಡೆಸಲಾಯಿತು.

- Advertisement -

ಎಐಯುಟಿಯುಸಿ ಸಂಯೋಜಿತ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪತ್ರ ಚಳವಳಿಯಲ್ಲಿ ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆ ಹಾಗೂ ವಿವಿಧ ವಸತಿ ನಿಲಯಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಪಾಲ್ಗೊಂಡು, ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗೆ ಪತ್ರ ರವಾನಿಸಿದರು.

ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆ ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರು ಅತ್ಯಂತ ಕಡಿಮೆ ವೇತನದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಸರ್ಕಾರ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನೂ ಸಮರ್ಪಕವಾಗಿ ಪಾವತಿಸದಿರುವುದು ಕಾರ್ಮಿಕರನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆ ಎಂದು ಸಂಘಟನೆ ಆರೋಪಿಸಿತು.

ಸರ್ಕಾರ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಯಾವುದೇ ವಿಳಂಬವಿಲ್ಲದೆ ಜಾರಿಗೊಳಿಸಬೇಕು. ಪ್ರತಿ ತಿಂಗಳು ನಿಗದಿತ ದಿನಾಂಕದೊಳಗೆ ವೇತನ ಪಾವತಿಸಬೇಕು. ಕಾರ್ಮಿಕರಿಗೆ ವೇತನ ಚೀಟಿ ನೀಡಬೇಕು. ಪಿಎಫ್, ಇಎಸ್‌ಐ ಸೇರಿದಂತೆ ಕಾರ್ಮಿಕರಿಗೆ ದೊರೆಯಬೇಕಾದ ಎಲ್ಲ ಶಾಸನಬದ್ಧ ಸೌಲಭ್ಯಗಳನ್ನು ಕಡ್ಡಾಯವಾಗಿ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.


ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಪರಿಗಣಿಸಬೇಕು. ಸಂಬಂಧಿಸಿದ ಇಲಾಖೆಗಳು ಹಾಗೂ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಕಾರ್ಮಿಕರ ಸಮಸ್ಯೆ ಪರಿಹರಿಸಬೇಕು ಎಂದು ಸಂಘಟನೆ ಒತ್ತಾಯಿಸಿತು. ಸರ್ಕಾರ ಬೇಡಿಕೆಗಳನ್ನು ನಿರ್ಲಕ್ಷಿಸಿದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.

ಪತ್ರ ಚಳವಳಿಯಲ್ಲಿ ಚಾಂದ್ ಮಮದಾಪೂರ, ಸಿದ್ದು, ಜಗದೀಶ ಶಂಕರ, ಅನಿಲ, ಬಿಮಯ್ಯ, ಬಾಷಾ, ಮಹಾಂತಗೌಡ, ಗೌರಮ್ಮ ಸೇರಿದಂತೆ ವಸತಿ ನಿಲಯ ಕಾರ್ಮಿಕರು, ಬಹುಹಳ್ಳಿ ಕುಡಿಯುವ ನೀರು ಸರಬರಾಜು ನೌಕರರು ಹಾಗೂ ಇತರ ಕಾರ್ಮಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಭೂಮಿ ಹಕ್ಕು ವೇದಿಕೆ ಹೇಳುವುದೇನು?

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA)...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ತಿರುಪತಿ ಲಡ್ಡು ಕಲಬೆರಕೆ ಹಗರಣ: ಪಾಮ್ ಆಯಿಲ್ ಪೂರೈಸುತ್ತಿದ್ದ ಉದ್ಯಮಿ ಇ.ಡಿ ವಶಕ್ಕೆ

ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಭಾರಿ ಪ್ರಮಾಣದ ಕಲಬೆರಕೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...