ಬಸವನ ಬಾಗೇವಾಡಿ | ಗ್ರಾಮ ಪಂಚಾಯಿತಿ ಚುನಾವಣೆ ವಿಳಂಬ: ಅಭಿವೃದ್ಧಿ ಕಾಮಗಾರಿ ಕುಂಠಿತ

Date:

ಗ್ರಾಮ ಪಂಚಾಯಿತಿಗಳ ಅವಧಿ ಮುಕ್ತಾಯಗೊಂಡು ಸಾಕಷ್ಟು ಸಮಯ ಕಳೆದಿದ್ದರೂ, ಚುನಾವಣೆ ನಡೆಸದೆ ಆಡಳಿತವನ್ನು ಮುಂದೂಡುತ್ತಿರುವ ಪರಿಣಾಮ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಹನಮಂತಗೌಡ ಕುಬಕಡ್ಡಿ ತೀವ್ರ ಆತಂಕ ವ್ಯಕ್ತಪಡಿಸಿದರು.

- Advertisement -

ಬಸವನ ಬಾಗೇವಾಡಿ ತಾಲೂಕಿನ ನಾಗರದಿನ್ನಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, “ಗ್ರಾಮ ಪಂಚಾಯಿತಿಗಳು ಗ್ರಾಮೀಣ ಆಡಳಿತದ ಮೂಲ ಘಟಕಗಳು, ಜನರ ದೈನಂದಿನ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಪ್ರಮುಖ ಸ್ಥಳೀಯ ಸಂಸ್ಥೆಗಳಾಗಿವೆ. ಆದರೆ, ಚುನಾಯಿತ ಜನಪ್ರತಿನಿಧಿಗಳ ಅನುಪಸ್ಥಿತಿಯಿಂದ ಗ್ರಾಮಗಳಲ್ಲಿ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ನಿಧಾನಗೊಂಡಿದ್ದು, ಅನೇಕ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಹೊಸ ಯೋಜನೆಗಳಿಗೆ ಅನುಮೋದನೆ ದೊರೆಯುವುದು ವಿಳಂಬವಾಗುತ್ತಿದ್ದು, ಈಗಾಗಲೇ ಮಂಜೂರಾಗಿರುವ ಕಾಮಗಾರಿಗಳ ಮೇಲ್ವಿಚಾರಣೆಯೂ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಮಾಜಿ ಗ್ರಾಮ ಪಂಚಾಯತಿ ಸದಸ್ಯ ಪ್ರದೀಪ್ ಪಾಟೀಲ್ ನಾಗರದಿನ್ನಿ ಮಾತನಾಡಿ, “ಗ್ರಾಮಗಳಲ್ಲಿ ಚರಂಡಿಗಳ ಸ್ವಚ್ಛತೆ ಮತ್ತು ನಿರ್ವಹಣೆ ಕೊರತೆಯಿಂದ ಮಳೆಗಾಲದಲ್ಲಿ ನೀರು ರಸ್ತೆಗಳಲ್ಲಿ ನಿಂತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಕೆಲ ಗ್ರಾಮಗಳಲ್ಲಿ ವಾರಗಟ್ಟಲೆ ನೀರಿನ ಸಮಸ್ಯೆ ಎದುರಾಗುತ್ತಿದೆ. ಗ್ರಾಮೀಣ ರಸ್ತೆಗಳು ಹದಗೆಟ್ಟಿದ್ದರೂ ದುರಸ್ತಿ ಕಾಮಗಾರಿಗಳು ನಡೆಯುತ್ತಿಲ್ಲ” ಎಂದು ಆರೋಪಿಸಿದರು.

“ಬೀದಿದೀಪಗಳ ನಿರ್ವಹಣೆಯ ಕೊರತೆಯಿಂದ ರಾತ್ರಿ ವೇಳೆ ಗ್ರಾಮಸ್ಥರು ಸಂಚಾರಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಘನ ತ್ಯಾಜ್ಯ ವಿಲೇವಾರಿ, ಸ್ವಚ್ಛತಾ ಕಾರ್ಯ, ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ, ಉದ್ಯಾನಗಳು ಹಾಗೂ ಸಾರ್ವಜನಿಕ ಸ್ಥಳಗಳ ಸಂರಕ್ಷಣೆ ಸೇರಿದಂತೆ ಅನೇಕ ಮೂಲಭೂತ ಸೇವೆಗಳ ಮೇಲೂ ಪ್ರತಿಕೂಲ ಪರಿಣಾಮ ಬೀರಿದೆ” ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಜನಪ್ರತಿನಿಧಿಗಳಿಲ್ಲದ ಕಾರಣ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಯಾರ ಮುಂದೆ ಮಂಡಿಸಬೇಕು ಎಂಬ ಗೊಂದಲದಲ್ಲಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧ್ಯಕ್ಷರು ಇದ್ದಾಗ ಜನರ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ತ್ವರಿತವಾಗಿ ಪರಿಹರಿಸುವ ವ್ಯವಸ್ಥೆ ಇತ್ತು. ಈಗ ಆಡಳಿತಾಧಿಕಾರಿಗಳ ಮೂಲಕ ಮಾತ್ರ ಕಾರ್ಯನಿರ್ವಹಣೆ ನಡೆಯುತ್ತಿರುವುದರಿಂದ ಸಾರ್ವಜನಿಕರ ಅಹವಾಲುಗಳಿಗೆ ಅಗತ್ಯ ಆದ್ಯತೆ ಸಿಗುತ್ತಿಲ್ಲ ಎನ್ನುವುದು ಗ್ರಾಮಸ್ಥರ ಆರೋಪವಾಗಿದೆ.

“ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್‌ಆರ್‌ಇಜಿಎ), 15ನೇ ಹಣಕಾಸು ಆಯೋಗದ ಅನುದಾನ, ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೂ ಚುನಾಯಿತ ಆಡಳಿತದ ವಿಳಂಬದಿಂದ ಅಡ್ಡಿಯುಂಟಾಗಿದೆ” ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟರು.

“ಗ್ರಾಮೀಣ ಅಭಿವೃದ್ಧಿಗೆ ಸ್ಥಳೀಯ ಸ್ವರಾಜ್ಯ ಸಂಸ್ಥೆಗಳು ಅತ್ಯಂತ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಯಾವುದೇ ವಿಳಂಬ ಮಾಡದೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಬೇಕು. ಚುನಾಯಿತ ಪ್ರತಿನಿಧಿಗಳ ಆಡಳಿತವನ್ನು ಪುನಃ ಸ್ಥಾಪಿಸಿ, ಗ್ರಾಮಗಳ ಅಭಿವೃದ್ಧಿಗೆ ವೇಗ ನೀಡುವ ಜೊತೆಗೆ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು” ಎಂದು ಸಾರ್ವಜನಿಕರು ಸರ್ಕಾರವನ್ನು ಒತ್ತಾಯಿಸಿದರು.

ಈ ವೇಳೆ ಹನಮಂತಗೌಡ ಹಿರೇಗೌಡ್ರ, ಚಂದ್ರಶೇಖರ ಬಿರಾದಾರ, ಅಲ್ಲಾಭಕ್ಷಿ ಕಲ್ಲಾಗೋರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಸಂಶೋಧಕನಿಗೆ ತಾಳ್ಮೆ, ಅಧ್ಯಯನ, ಕ್ಷೇತ್ರ ಕಾರ್ಯ ಮುಖ್ಯ: ಶಿವಕುಮಾರ ಮಹಾಸ್ವಾಮಿಗಳು

"ಸಂಶೋಧನೆ ಎಂಬುದು ಒಂದು ತಪಸ್ಸು ಇದ್ದಂತೆ. ಅನೇಕ ಸಮಸ್ಯೆ, ಅನಾನುಕೂಲತೆಗಳನ್ನು ಎದುರಿಸಿ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...