ಬಿಜೆಪಿ ಪಾದಯಾತ್ರೆ ಜನರ ಹಿತಕ್ಕಾಗಿ ಅಲ್ಲ, ಪಕ್ಷದ ಅಸ್ತಿತ್ವಕ್ಕಾಗಿ: ಸಚಿವ ಕಾಶಪ್ಪನವರ ಟೀಕೆ

Date:

ಬಿಜೆಪಿಯ ಪಾದಯಾತ್ರೆ ಜನರ ಹಿತಕ್ಕಾಗಿ ನಡೆಯುತ್ತಿಲ್ಲ. ಪಕ್ಷದ ಅಸ್ತಿತ್ವ ಉಳಿಸಿಕೊಳ್ಳುವ ಉದ್ದೇಶದಿಂದ ನಡೆಯುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರ ನಡೆ-ನುಡಿಗಳಿಂದ ಬಿಜೆಪಿ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದೆ. ಜನರು ಈಗಾಗಲೇ ಅವರನ್ನು ತಿರಸ್ಕರಿಸಿದ್ದಾರೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಟೀಕಿಸಿದರು.

- Advertisement -

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶ್ರೀರಾಮುಲು ಅವರನ್ನು ಬಿಜೆಪಿ ಜೋಕರ್‌ನಂತೆ ಮಾಡಿದೆ. ಟೀ-ಶರ್ಟ್ ಹಾಕಿಕೊಂಡು ರಾಹುಲ್ ಗಾಂಧಿಯಂತೆ ಕಾಣುತ್ತಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ. ರಾಹುಲ್ ಗಾಂಧಿ ಎಲ್ಲಿದ್ದಾರೆ, ಶ್ರೀರಾಮುಲು ಎಲ್ಲಿದ್ದಾರೆ ಎಂದು ಪ್ರಶ್ನಿಸಿದ ಕಾಶಪ್ಪನವರ, ಸಿದ್ಧಾಂತ ಹಾಗೂ ತತ್ವಗಳ ಆಧಾರದ ಮೇಲೆ ಮುನ್ನಡೆಯುತ್ತಿರುವ ರಾಹುಲ್ ಗಾಂಧಿ ಮುಂದೊಂದು ದಿನ ಪ್ರಧಾನಿಯಾಗಲಿದ್ದಾರೆ. ಅವರು ಶ್ರೀರಾಮುಲು ಅವರನ್ನು ನೋಡಿ ಕಲಿಯುವ ಅಗತ್ಯವಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನರು ಕಾಂಗ್ರೆಸ್ ಸರ್ಕಾರಕ್ಕೆ ಐದು ವರ್ಷಗಳ ಕಾಲ ಆಡಳಿತ ನಡೆಸಲು ಅವಕಾಶ ನೀಡಿದ್ದಾರೆ. ಬಿಜೆಪಿಗೆ ದಮ್ಮು, ತಾಕತ್ತು ಇದ್ದರೆ 2028ರ ಚುನಾವಣೆಯವರೆಗೆ ಕಾಯಲಿ. ಆಗ ಜನರೇ ತೀರ್ಮಾನ ನೀಡಲಿದ್ದಾರೆ ಎಂದು ಸವಾಲು ಹಾಕಿದರು.

ಕೆಪಿಎಸ್‌ಸಿಯಲ್ಲಿ ನಡೆದಿರುವ ಅಕ್ರಮದ ಕುರಿತು ತನಿಖೆ ನಡೆಯುತ್ತಿದೆ. ಈ ವಿಚಾರದಲ್ಲಿ ಧರ್ಮದ ಆಧಾರದ ಮೇಲೆ ಆರೋಪ-ಪ್ರತ್ಯಾರೋಪ ಮಾಡುವ ಬದಲು ರೈತರು ಹಾಗೂ ಯುವಕರ ಸಮಸ್ಯೆಗಳ ಬಗ್ಗೆ ಬಿಜೆಪಿ ನಾಯಕರು ಕಾಳಜಿ ವಹಿಸಬೇಕು. ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆಯೇ? ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಲಾಗಿದೆಯೇ? ಈ ಬಗ್ಗೆ ಬಿಜೆಪಿ ನಾಯಕರು ಒಮ್ಮೆಯಾದರೂ ಕೇಂದ್ರವನ್ನು ಪ್ರಶ್ನಿಸಿದ್ದಾರೆಯೇ ಎಂದು ಕಾಶಪ್ಪನವರ ಪ್ರಶ್ನಿಸಿದರು.

ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಅಧಿವೇಶನ ಕರೆದಾಗ ಸದನದ ಸಮಯವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಬದಲು ಬಿಜೆಪಿ ನಾಯಕರು ಗದ್ದಲ ಮಾಡುವ ಮೂಲಕ ಸಮಯ ವ್ಯರ್ಥ ಮಾಡಿದರು. ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಕೆಲಸ ಮಾಡಲಿ ಎಂದು ಹೇಳಿದರು.

ಸಕ್ಕರೆ ಕಾರ್ಖಾನೆಗಳಿಂದ ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ ₹50 ಪಾವತಿಯಾಗಿಲ್ಲ ಎಂಬ ದೂರುಗಳು ಬಂದಿವೆ. ಕೆಲವು ಕಾರ್ಖಾನೆಗಳು ರೈತರಿಗೆ ಹಣ ಪಾವತಿಸಿಲ್ಲ ಎಂಬುದು ಗಮನಕ್ಕೆ ಬಂದಿದೆ. ರೈತರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಬಾಕಿ ಹಣವನ್ನು ಶೀಘ್ರವಾಗಿ ಪಾವತಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯ ಸರ್ಕಾರ ಈಗಾಗಲೇ ಹಲವು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಉಳಿದ ತಾಲ್ಲೂಕುಗಳನ್ನೂ ಎರಡನೇ ಹಂತದಲ್ಲಿ ಬರಪೀಡಿತ ಎಂದು ಘೋಷಿಸಲಾಗುವುದು. ರೈತರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದ್ದು, ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ ಎಂದು ಸಚಿವ ವಿಜಯಾನಂದ ಕಾಶಪ್ಪನವರ ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ...

ಮೈಸೂರು | ಕಲಾ ಜಾತ್ರೆ ಯಶಸ್ವಿ: ಕಲಾವಿದರಿಗೆ ಶಾಶ್ವತ ಕಲಾ ಕೇಂದ್ರ ಸ್ಥಾಪಿಸಲು ಅರುಣ್ ಯೋಗಿರಾಜ್ ಸಲಹೆ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಲಲಿತಕಲೆ ಮತ್ತು ಕರಕುಶಲಕಲೆ ಹಾಗೂ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...