ಚಿತ್ರದುರ್ಗ | ಬಾಲಕಿ ಅತ್ಯಾಚಾರ,ಕೊಲೆ; ಆರೋಪಿಗಳಿಗೆ ಗಲ್ಲುಶಿಕ್ಷೆಗೆ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ ಆಗ್ರಹ

Date:

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ  ಬನೋಶಿ ಗ್ರಾಮದ ದಲಿತ ಬಾಲಕಿಯನ್ನು ನಿರಂತರವಾಗಿ 12 ಗಂಟೆಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಕೊಲೆಗೈದಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರು ಹಿರಿಯೂರು ತಾಲೂಕು ತಹಶೀಲ್ದಾರರ ಮೂಲಕ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.‌

- Advertisement -
1002912082

ಈ ವೇಳೆ ಮಾತನಾಡಿದ ಮುಖಂಡರು “ದಲಿತ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರ ಮತ್ತು ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿದರು. ಕೂಡಲೇ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು.‌ ಮಹಿಳೆಯರ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಸುದ್ದಿ ಓದಿದ್ದೀರಾ?  ಚಿತ್ರದುರ್ಗ | ಶಿಕ್ಷಣ ಇಲಾಖೆ ಕಚೇರಿಯಲ್ಲಿ ‘ಎಣ್ಣೆ ಪಾರ್ಟಿ’; ಐವರು ಅಮಾನತು

ಈ ವೇಳೆ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ರಾಮಚಂದ್ರ ಕೆ, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಆರ್, ಜಿಲ್ಲಾಧ್ಯಕ್ಷ ಶಿವರಾಜಕುಮಾರ್ ಆರ್, ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮಣ್ ರಾವ್, ಆಟೋ ಕೆಂಚಪ್ಪ , ಹಿರಿಯೂರು ತಾಲೂಕು ಅಧ್ಯಕ್ಷ  ಓಂಕಾರ್ ಮೂರ್ತಿ (ದೊಡ್ಡಘಟ್ಟ), ತಾಲೂಕು ಕಾರ್ಯಾಧ್ಯಕ್ಷ ಆಟೋ ರಂಗಸ್ವಾಮಿ, ತಾಲೂಕು ಆಟೋ ಘಟಕದ ಅಧ್ಯಕ್ಷ ರಮೇಶ್, ತಾಲೂಕು ಕಾರ್ಯದರ್ಶಿ ಅಶೋಕ (ಹರ್ತಿ ಕೋಟೆ) ಹಾಗೂ ದಲಿತ ಮುಖಂಡರಾದ ರಾಜಪ್ಪ, ಚಂದ್ರಣ್ಣ ಗಾಂಧಿನಗರ, ಹಾಗೂ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು |ರಾಜ್ಯದಲ್ಲಿ ಪ್ರಸ್ತುತ 9,೦೦೦ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ನ್ಯಾ....

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...