ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

Date:

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ ದೇವಮ್ಮ ಮಾನಪ್ಪ, ತಮ್ಮ ಕ್ರೀಡಾ ಸಾಧನೆಗೆ ನೆರವಾದ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರನ್ನು ಸೋಮವಾರ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.

- Advertisement -

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಿಪುರ ಗ್ರಾಮದ ಬಡ ಕುಟುಂಬದ ದೇವಮ್ಮ ಅವರು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಬಿಲ್ಲುಗಾರಿಕೆಯಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ. ಆದರೆ, ಕ್ರೀಡೆಯಲ್ಲಿ ಮುಂದುವರಿಯಲು ಅಗತ್ಯವಾದ ಬಿಲ್ಲು, ಬಾಣ ಸೇರಿದಂತೆ ಕ್ರೀಡಾ ಪರಿಕರಗಳನ್ನು ಖರೀದಿಸಲು ಆರ್ಥಿಕ ಸಮಸ್ಯೆ ಎದುರಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಈ ವಿಚಾರವನ್ನು ತಿಳಿದ ಸಚಿವ ಎಂ.ಬಿ. ಪಾಟೀಲ, ಕಳೆದ ವರ್ಷ ತಮ್ಮ ಸಿಎಸ್‌ಆರ್ ನಿಧಿಯ ಮೂಲಕ ₹3.50 ಲಕ್ಷ ಆರ್ಥಿಕ ನೆರವು ಒದಗಿಸಿ, ಬಿಲ್ಲುಗಾರಿಕೆ ಕಿಟ್ ಖರೀದಿಸಲು ಸಹಕರಿಸಿದ್ದರು. ಸಚಿವರ ನೆರವಿನಿಂದ ಅಗತ್ಯ ಕ್ರೀಡಾ ಪರಿಕರಗಳನ್ನು ಪಡೆದ ದೇವಮ್ಮ ಅವರು, ಆತ್ಮವಿಶ್ವಾಸದಿಂದ ತಮ್ಮ ಗುರಿಯತ್ತ ಮುನ್ನಡೆದು ಮೈಸೂರು ದಸರಾದ ಸಿಎಂ ಕಪ್ ಬಿಲ್ಲುಗಾರಿಕೆ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮೆರೆದಿದ್ದಾರೆ. ಇತರ ಸ್ಪರ್ಧೆಗಳಲ್ಲಿಯೂ ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

Advertisements

ಇದಲ್ಲದೆ, ಗೋವಾ, ಉಡುಪಿ ಸೇರಿದಂತೆ ವಿವಿಧೆಡೆ ನಡೆದ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಹಲವು ಪದಕಗಳನ್ನು ಗೆದ್ದಿದ್ದಾರೆ. ತಮ್ಮ ಸಾಧನೆಯ ಸಂತಸವನ್ನು ಹಂಚಿಕೊಳ್ಳಲು ದೇವಮ್ಮ ಅವರು ಸಹೋದರನೊಂದಿಗೆ ಸುರಪುರದಿಂದ ವಿಜಯಪುರಕ್ಕೆ ಆಗಮಿಸಿ ಸಚಿವ ಎಂ.ಬಿ. ಪಾಟೀಲ ಅವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಗೆದ್ದ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಸಚಿವರಿಗೆ ತೋರಿಸಿ ಸಂತಸ ವ್ಯಕ್ತಪಡಿಸಿದರು. ತಮ್ಮ ಕ್ರೀಡಾ ಬದುಕಿಗೆ ಸಚಿವರು ನೀಡಿದ ನೆರವು ಮಹತ್ವದ ತಿರುವು ನೀಡಿದೆ ಎಂದು ಕೃತಜ್ಞತೆ ಸಲ್ಲಿಸಿದರು.

ದೇವಮ್ಮ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಎಂ.ಬಿ. ಪಾಟೀಲ, “ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಸೂಕ್ತ ಪ್ರೋತ್ಸಾಹ ಮತ್ತು ನೆರವು ದೊರೆತರೆ ಅವರು ಉನ್ನತ ಮಟ್ಟದ ಸಾಧನೆ ಮಾಡಲು ಸಾಧ್ಯ ಎಂಬುದಕ್ಕೆ ದೇವಮ್ಮ ಅವರ ಯಶಸ್ಸು ಉತ್ತಮ ಉದಾಹರಣೆಯಾಗಿದೆ” ಎಂದರು.

“ತಂದೆಯನ್ನು ಕಳೆದುಕೊಂಡು ಸೀಮಿತ ಆರ್ಥಿಕ ಸೌಲಭ್ಯಗಳ ನಡುವೆಯೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುತ್ತಿರುವ ದೇವಮ್ಮ ಅವರ ಪರಿಶ್ರಮ ಮತ್ತು ಛಲಕ್ಕೆ ಮನಸೋತಿದ್ದೇನೆ. ಅವರ ಕ್ರೀಡಾ ಕನಸುಗಳಿಗೆ ಬೆಂಬಲವಾಗಿ ನಿಲ್ಲುವುದು ನಮ್ಮ ಕರ್ತವ್ಯವಾಗಿದೆ. ಮುಂದಿನ ದಿನಗಳಲ್ಲಿ ಒಲಿಂಪಿಕ್ಸ್ ಮಟ್ಟದ ತರಬೇತಿ ಹಾಗೂ ಅಗತ್ಯ ಕ್ರೀಡಾ ಪರಿಕರಗಳನ್ನು ಒದಗಿಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು” ಎಂದು ಭರವಸೆ ನೀಡಿದರು.

ಪ್ರತಿಭೆಗೆ ಪ್ರೋತ್ಸಾಹ ಮತ್ತು ಪರಿಶ್ರಮಕ್ಕೆ ಬೆಂಬಲ ದೊರೆತರೆ ಗ್ರಾಮೀಣ ಕ್ರೀಡಾಪಟುಗಳೂ ಜಾಗತಿಕ ಮಟ್ಟದಲ್ಲಿ ಮಿಂಚಲು ಸಾಧ್ಯ. ಕಲ್ಯಾಣ ಕರ್ನಾಟಕದ ಬಿಲ್ಲುಗಾರ್ತಿ ದೇವಮ್ಮ ಅವರು ಒಲಿಂಪಿಕ್ಸ್‌ನಲ್ಲಿ ಭಾರತದ ಪರ ಪದಕ ಗೆಲ್ಲುವ ಮಟ್ಟಕ್ಕೆ ಬೆಳೆಯಲಿ ಎಂದು ಸಚಿವರು ಶುಭ ಹಾರೈಸಿದರು.

ಬಡತನದ ಸವಾಲುಗಳನ್ನು ಮೀರಿ ಬಿಲ್ಲುಗಾರಿಕೆಯಲ್ಲಿ ಸಾಧನೆ ಮಾಡುತ್ತಿರುವ ದೇವಮ್ಮ ಅವರ ಯಶೋಗಾಥೆ, ಗ್ರಾಮೀಣ ಪ್ರತಿಭೆಗಳಿಗೆ ಸೂಕ್ತ ಅವಕಾಶ ಮತ್ತು ಪ್ರೋತ್ಸಾಹ ದೊರೆತಾಗ ಅವರು ಸಾಧನೆಯ ಶಿಖರ ಏರಬಲ್ಲರು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು...

ಏನಿದು ʼಮಶೀನ್‌ ರೀಡಬಲ್‌ʼ ಮತದಾರರ ಪಟ್ಟಿ? ಅದನ್ನು ಹಂಚಿಕೊಳ್ಳದೆ ಯಾಕೆ ಪ್ರತಿಪಕ್ಷಗಳ ವಂಚಿಸಿತ್ತು ಮೋಶಾ ಸರ್ಕಾರ?

17 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಚುನಾವಣಾ...

ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ತುರ್ತು ಮಧ್ಯಪ್ರವೇಶಿಸಲು ಪ್ರಧಾನಿಗೆ ಸಿಎಂ ಡಿ ಕೆ ಶಿವಕುಮಾರ್ ಮನವಿ

ಸದ್ಯದಲ್ಲೇ ಕಬ್ಬು ಅರೆಯುವ ಋತು ಆರಂಭವಾಗಲಿದ್ದು, ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ...

ಮಣಿಪುರ | ಉಗ್ರರ ದಾಳಿಗೆ ಮೂವರು ಬಲಿ; ಸಿಎಂ ನಿವಾಸದ ಮುಂದೆ ಮೃತದೇಹಗಳನ್ನಿಟ್ಟು ಆಕ್ರೋಶ

ಮಣಿಪುರದ ಅರಣ್ಯ ಪ್ರದೇಶದಲ್ಲಿ ಕಟ್ಟಿಗೆ ಸಂಗ್ರಹಿಸಲು ತೆರಳಿದ್ದ ಮೂವರನ್ನು ಸೋಮವಾರ ಉಗ್ರರು...