ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಬಬಲಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹1 ಕೋಟಿ 67 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ, ಅಗತ್ಯ ಮೂಲಸೌಕರ್ಯಗಳ ಬಲವರ್ಧನೆ ಹಾಗೂ ಗ್ರಾಮಸ್ಥರ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ವಿವಿಧ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ರಸ್ತೆ, ಕುಡಿಯುವ ನೀರು, ಸಾರ್ವಜನಿಕ ಸೌಲಭ್ಯಗಳು ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳು ಗ್ರಾಮಗಳ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲಿದ್ದು, ಗ್ರಾಮೀಣ ಪ್ರದೇಶಗಳ ಪ್ರಗತಿಗೆ ಹೊಸ ದಿಕ್ಕು ನೀಡಲಿವೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪೂಜ್ಯ ಶ್ರೀಗಳು, ಸ್ಥಳೀಯ ಮುಖಂಡರು, ಗ್ರಾಮದ ಹಿರಿಯರು, ಅಧಿಕಾರಿಗಳು, ಕಾರ್ಯಕರ್ತರು ಹಾಗೂ ಬಬಲಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಗ್ರಾಮಸ್ಥರು ಉಪಸ್ಥಿತರಿದ್ದರು.




