ವಿಜಯಪುರ | ಪ್ರತಿ ಗ್ರಾಮವೂ ಅನುಭವ ಮಂಟಪವಾಗಲಿ: ಎಂ.ಬಿ ಪಾಟೀಲ

Date:

ಧಾರ್ಮಿಕ ಪರಂಪರೆ, ಆಧ್ಯಾತ್ಮಿಕತೆ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಭಾರತ ದೇಶ ಜಗತ್ತಿನಲ್ಲಿಯೇ ಶ್ರೇಷ್ಠ ಸ್ಥಾನ ಹೊಂದಿದೆ. ಭಕ್ತಿ, ಜ್ಞಾನ ಮತ್ತು ಸಂಸ್ಕೃತಿಯ ಸಂಗಮವಾಗಿರುವ ಧಾರ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಮಾನವೀಯತೆ ಹಾಗೂ ಸಹಬಾಳ್ವೆಯ ಮನೋಭಾವವನ್ನು ಬಲಪಡಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬೆಳ್ಳುಬ್ಬಿ ಗ್ರಾಮದ ಮಳೆ ಮಲ್ಲೇಶ್ವರ ದೇವಸ್ಥಾನದಲ್ಲಿ ಸೋಮವಾರ ನಡೆದ ಅಜಾತ ನಾಗಲಿಂಗ ಮಹಾಸ್ವಾಮಿಗಳ ಮಹಾಪುರಾಣ ಹಾಗೂ ಭಜನಾ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

“ಪುರಾಣ, ಪ್ರವಚನಗಳು ನಮ್ಮ ಹಿಂದಿನ ಇತಿಹಾಸ, ಪರಂಪರೆ ಹಾಗೂ ಸಾಮಾಜಿಕ ಬದುಕಿನ ಹಲವು ಆಯಾಮಗಳನ್ನು ಪರಿಚಯಿಸುತ್ತವೆ. ಇತಿಹಾಸದಲ್ಲಿ ಒಳ್ಳೆಯದೂ ಇದೆ, ಕೆಟ್ಟದ್ದೂ ಇದೆ. ಅವುಗಳಿಂದ ಉತ್ತಮ ವಿಚಾರಗಳನ್ನು ಅಳವಡಿಸಿಕೊಂಡು ಸಮಾಜವನ್ನು ಮುನ್ನಡೆಸುವುದು ನಮ್ಮ ಜವಾಬ್ದಾರಿ” ಎಂದು ಹೇಳಿದರು.

ಶರಣರು ರೂಪಿಸಿದ ಅನುಭವ ಮಂಟಪದ ಪರಿಕಲ್ಪನೆ ಪ್ರತಿ ಗ್ರಾಮದಲ್ಲೂ ಸಾಕಾರಗೊಳ್ಳಬೇಕು. ಪ್ರತಿಯೊಂದು ಗ್ರಾಮವೂ ಒಂದು ಅನುಭವ ಮಂಟಪದಂತಿದ್ದು, ಎಲ್ಲ ಜಾತಿ, ವರ್ಗ ಹಾಗೂ ಸಮುದಾಯದ ಜನರನ್ನು ಒಳಗೊಂಡಿರಬೇಕು. ಧರ್ಮದ ಹೆಸರಿನಲ್ಲಿ ವಿಭಜನೆಯಾಗದೆ ಎಲ್ಲ ಧರ್ಮಗಳ ಜನರು ಪರಸ್ಪರ ಗೌರವದಿಂದ, ಒಗ್ಗಟ್ಟಿನಿಂದ ಬದುಕಬೇಕು ಎಂದು ಕರೆ ನೀಡಿದರು.

“ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹಿಂದೂ–ಮುಸ್ಲಿಂ ಏಕತೆ ಹಾಗೂ ಸಹಬಾಳ್ವೆ ಗಟ್ಟಿಯಾಗಿದ್ದರೆ ಶಾಂತಿ ಮತ್ತು ಸೌಹಾರ್ದತೆ ನೆಲೆಸಲು ಸಾಧ್ಯ. ಇಂತಹ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜವನ್ನು ಒಗ್ಗೂಡಿಸುವ ವೇದಿಕೆಗಳಾಗಬೇಕು” ಎಂದು ಎಂ.ಬಿ. ಪಾಟೀಲ ಹೇಳಿದರು.

ಕಾರ್ಯಕ್ರಮದಲ್ಲಿ ಗಣಲಿಂಗ ದೇವರು ಹಿರೇಮಠ, ಆಸಂಗಿ ಹಿರೇಮಠದ ಶ್ರೀಗಳು ಹಾಗೂ ಚಂದ್ರಶೇಖರ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು.

ನ್ಯಾಯವಾದಿ ಶ್ರೀನಿವಾಸ ಕೊಂಡಗೂಳಿ, ಬಸವರಾಜ ದೇಸಾಯಿ, ರಮೇಶ ಬಶೆಟ್ಟಿ, ಶಿವಾನಂದ ನ್ಯಾಮಗೌಡ, ಬಸವರಾಜ ಜೈನಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮಕ್ಕಳ ಸುರಕ್ಷತೆ ಸಮಾಜದ ಹೊಣೆ: ಪೋಕ್ಸೋ, ಬಾಲ್ಯವಿವಾಹ ತಡೆಗೆ ಕಾನೂನು ಅರಿವು ಅಭಿಯಾನ

ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಸುರಕ್ಷಿತ...

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ...

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...