ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

Date:

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ(KSNDMC)ದ ಅಧಿಕೃತ ವೆಬ್‌ಸೈಟ್‌ನಲ್ಲಿ ದಾಖಲಿಸಿದೆ.

- Advertisement -

ಮಧ್ಯರಾತ್ರಿ 12:26:12ರ ಹೊತ್ತಿಗೆ ಭೂಕಂಪನ ಸಂಭವಿಸಿದ್ದು, ಅದರ ಕೇಂದ್ರಬಿಂದುವು ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮ ಪಂಚಾಯಿತಿಯಿಂದ ನೈಋತ್ಯಕ್ಕೆ 1.1 ಕಿ.ಮೀ ದೂರದಲ್ಲಿ ಸಂಧಿಸಿದ್ದು, ಈ ನಿರ್ದಿಷ್ಟ ಸ್ಥಳವು ಅಕ್ಷಾಂಶ 16.650° ಉತ್ತರ ಮತ್ತು ರೇಖಾಂಶ 76.045° ಪೂರ್ವದಲ್ಲಿದೆ. ಭೂಗರ್ಭದಲ್ಲಿ ಅಥವಾ ಸಮುದ್ರದ ಮೇಲ್ಮೈಯಿಂದ ಈ ಸ್ಥಳದ ಆಳವು 10 ಕಿಲೋಮೀಟರ್ ಆಗಿರುವುದಾಗಿ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಕೇಂದ್ರಬಿಂದುವಿನಿಂದ ಇತರ ಪ್ರಮುಖ ಸ್ಥಳಗಳ ದೂರ ಹೀಗಿದೆ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮ ಪಂಚಾಯಿತಿಯಿಂದ ನೈಋತ್ಯಕ್ಕೆ 1.1 ಕಿ.ಮೀ. ಕೇಂದ್ರಬಿಂದುವನ್ನು ಹೊಂದಿರುವ ಈ ಭೂಕಂಪವು ಇಂಗಳೇಶ್ವರ ಗ್ರಾಮ ಪಂಚಾಯಿತಿಯಿಂದ ಪೂರ್ವ-ಆಗ್ನೇಯಕ್ಕೆ 3.0 ಕಿ.ಮೀ., ರಬಿನಾಳ ಗ್ರಾಮದಿಂದ ದಕ್ಷಿಣ-ನೈಋತ್ಯಕ್ಕೆ 5.3 ಕಿ.ಮೀ., ಕಮನ್ಕೇರಿ ಗ್ರಾಮದಿಂದ ಪಶ್ಚಿಮಕ್ಕೆ (W) 5.5 ಕಿ.ಮೀ., ಬಸವನ ಬಾಗೇವಾಡಿ ತಾಲೂಕು ಕೇಂದ್ರದಿಂದ ಈಶಾನ್ಯಕ್ಕೆ 11.5 ಕಿ.ಮೀ. ಹಾಗೂ ವಿಜಯಪುರ ನಗರದಿಂದ ನೈಋತ್ಯಕ್ಕೆ 40.0 ಕಿ.ಮೀ.ವರೆಗೆ ಭೂಕಂಪನ ಕೇಂದ್ರಬಿಂದು ಸಂಧಿಸಿದೆ.

ಭೂಕಂಪ 5

ತೀವ್ರತೆಯ ನಕ್ಷೆಯ ಪ್ರಕಾರ ಗಮನಿಸಲಾದ ತೀವ್ರತೆ ಕಡಿಮೆಯಾಗಿದ್ದು, ಕೇಂದ್ರಬಿಂದುವಿನಿಂದ 50-60 ಕಿ.ಮೀ. ತ್ರಿಜ್ಯದ ವ್ಯಾಪ್ತಿಯವರೆಗೆ ಭೂಕಂಪನ ಅನುಭವ ಉಂಟಾಗಬಹುದು. ತೀವ್ರತೆ ಕಡಿಮೆಯಿರುವುದರಿಂದ ಈ ಭೂಕಂಪ ಸ್ಥಳೀಯವಾಗಿ ಯಾವುದೇ ರೀತಿಯ ಹಾನಿ ಉಂಟುಮಾಡುವುದಿಲ್ಲ. ಆದರೂ ಸ್ಥಳೀಯವಾಗಿ ಭೂಕಂಪನಗಳ ಅನುಭವ ಉಂಟಾಗಬಹುದು. ಕೇಂದ್ರಬಿಂದು ಭೂಕಂಪನ ವಲಯ-III ವ್ಯಾಪ್ತಿಗೆ ಬರುತ್ತದೆ ಮತ್ತು ಟೆಕ್ಟೋನಿಕ್ ನಕ್ಷೆಯ ಪ್ರಕಾರ ಈ ಪ್ರದೇಶದಲ್ಲಿ ಯಾವುದೇ ರಚನಾತ್ಮಕ ಅಸಂಗತತೆಗಳು ಕಂಡುಬಂದಿಲ್ಲ.‌

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

“ದಾಖಲಾದ ಭೂಕಂಪನ ತೀವ್ರತೆ ಮತ್ತು ಪ್ರಮಾಣ ಎರಡೂ ಕಡಿಮೆಯಿರುವುದರಿಂದ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ” ಎಂದು KSNDMC ನಿರ್ದೇಶಕರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...