ಆಲಮಟ್ಟಿ | ಕನ್ನೂರಿಗೆ ನೀರಾವರಿ ಸೌಲಭ್ಯ ಕಲ್ಪಿಸುವಂತೆ ರೈತರ ಪ್ರತಿಭಟನೆ

Date:

ಇಂಡಿ ತಾಲ್ಲೂಕಿನ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯ ವ್ಯಾಪ್ತಿಯಲ್ಲಿ ನಾಗಠಾಣ ಮತಕ್ಷೇತ್ರದ ಕನ್ನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಕೃಷಿ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ರೈತರು ಆಲಮಟ್ಟಿಯಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಗ್ರಾಮ ಪಂಚಾಯತಿ ಮಾಜಿ ಸದಸ್ಯ ಎಂ ಎಸ್ ಪಠಾನ್ ಮಾತನಾಡಿ, “ಇಂಡಿ ಹಾಗೂ ಚಡಚಣ ತಾಲ್ಲೂಕಿನ ನೀರಾವರಿ ವಂಚಿತ ಪ್ರದೇಶಗಳಿಗೆ ನೀರು ಪೂರೈಸುವ ಉದ್ದೇಶದಿಂದ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಆರಂಭಗೊಂಡಿದ್ದರೂ, ಯೋಜನೆಯ ಪ್ರಸ್ತುತ ನೀಲನಕ್ಷೆಯಲ್ಲಿ ಕನ್ನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹುತೇಕ ಜಮೀನುಗಳನ್ನು ಹೊರಗಿಡಲಾಗಿದೆ. ಇದರಿಂದ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಎಂ ಎಸ್ ಅಥಣಿ ಮಾತನಾಡಿ, “ಯೋಜನೆಯ ಪ್ರಮುಖ ಕಾಲುವೆಗಳು ಮತ್ತು ಪೈಪ್‌ಲೈನ್‌ಗಳು ಕನ್ನೂರ ಗ್ರಾಮದ ಮೂಲಕವೇ ಹಾದು ಹೋಗುತ್ತಿವೆ. ಆದರೆ, ಇದೇ ಗ್ರಾಮದ ರೈತರಿಗೆ ಯೋಜನೆಯ ಪ್ರಯೋಜನ ದೊರೆಯದಿರುವುದು ಅನ್ಯಾಯ. ಭೀಮಾ ನದಿ ತೀರದಲ್ಲಿ ಈಗಾಗಲೇ ನೀರಾವರಿ ಸೌಲಭ್ಯ ಹೊಂದಿರುವ ಕೆಲವು ಪ್ರದೇಶಗಳನ್ನು ಮತ್ತೊಮ್ಮೆ ಯೋಜನೆಗೆ ಸೇರಿಸಿರುವುದರಿಂದ ನಿಜವಾದ ನೀರಾವರಿ ವಂಚಿತ ಪ್ರದೇಶಗಳಿಗೆ ಅನ್ಯಾಯವಾಗುತ್ತಿದೆ” ಎಂದು ದೂರಿದರು.

ಯೋಜನೆಯ ಹಾಲಿ ನೀಲನಕ್ಷೆಯನ್ನು ರದ್ದುಪಡಿಸಿ, ಹೊಸದಾಗಿ ವೈಜ್ಞಾನಿಕ ಹಾಗೂ ಸಮಗ್ರ ನೀಲನಕ್ಷೆ ಸಿದ್ಧಪಡಿಸಬೇಕು. ಹೊಸ ನಕ್ಷೆಯಲ್ಲಿ ಕನ್ನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಜಮೀನುಗಳನ್ನು ಸೇರಿಸಿ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ರೈತರು ಒತ್ತಾಯಿಸಿದರು.

ಇದೇ ವೇಳೆ, “ಪೈಪ್‌ಲೈನ್ ಮತ್ತು ಕಾಲುವೆ ಕಾಮಗಾರಿಗಳಿಗಾಗಿ ಕಲ್ಲು ಸೀಳುವ ಸಂದರ್ಭದಲ್ಲಿ ನಿಯಂತ್ರಣವಿಲ್ಲದ ಬ್ಲಾಸ್ಟಿಂಗ್ ನಡೆಸಲಾಗುತ್ತಿದ್ದು, ಇದರಿಂದ ಸುತ್ತಮುತ್ತಲಿನ ಪ್ರದೇಶಗಳಿಗೆ ಹಾನಿಯಾಗುವ ಸಾಧ್ಯತೆ ಇದೆ” ಎಂದು ಆತಂಕ ವ್ಯಕ್ತಪಡಿಸಿದರು.

ಆದ್ದರಿಂದ ಸರ್ಕಾರದ ನಿಯಮಾವಳಿಗಳ ಪ್ರಕಾರ ನಿಯಂತ್ರಿತ ಬ್ಲಾಸ್ಟಿಂಗ್ ತಂತ್ರಜ್ಞಾನವನ್ನಷ್ಟೇ ಬಳಸುವಂತೆ ಆಗ್ರಹಿಸಿದರು.

ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯ ಎಂಜಿನಿಯರ್ ಡಿ. ಬಸವರಾಜ ಅವರು ರೈತರಿಂದ ಮನವಿ ಪತ್ರ ಸ್ವೀಕರಿಸಿದರು. ರೈತರ ಬೇಡಿಕೆಗಳನ್ನು ಪರಿಶೀಲಿಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಶಂಕರಗೌಡ ಪಾಟೀಲ, ಕಾಳಪ್ಪ ಬೇವಿನಗಿಡದ, ಮಾಳಪ್ಪ ಇನ್ನೂರ, ಎಸ್.ಎಂ. ಯಾಳವಾರ, ಎಂ.ಡಿ. ಹಿರೇಮಠ, ಎಸ್.ಎನ್. ಮದಭಾವಿ, ಎ.ಟಿ. ನಾಗಠಾಣ, ಎಸ್.ಎಸ್. ತಳವಾರ, ರಾಜುಗೌಡ, ಅಶೋಕ ಸೇರಿದಂತೆ ಅನೇಕ ರೈತ ಮುಖಂಡರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯ

ಹಟ್ಟಿ ಚಿನ್ನದ ಗಣಿ ಕಾರ್ಮಿಕರ ದೀರ್ಘಾವಧಿಯ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ...

ಹಾಸನ | ಅ. 29ರಿಂದ ನ. 11ರವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ

ಹಾಸನ ಜಿಲ್ಲೆಯಲ್ಲಿ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನ ಶುರುವಾಗಲಿದೆ. ಅಕ್ಟೋಬರ್...

ಚಿಕ್ಕಮಗಳೂರು | ಭೀಕರ ರಸ್ತೆ ಅಪಘಾತ: ಸವಾರ ಸ್ಥಳದಲ್ಲೇ ಸಾವು 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ...

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...