ನ್ಯಾ.ಬ್ರಿಜೇಶ್ ಕುಮಾರ ನೇತೃತ್ವದ 2ನೇ ನ್ಯಾಯಾಧಿಕರಣದ ತೀರ್ಪಿನನ್ವಯ ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರೀ ಜಲಾಶಯದ ನೀರಿನ ಮಟ್ಟವನ್ನು 519.60ಮೀನಿಂದ 524.256ಮೀ.ಗೆ ನೀರು ಸಂಗ್ರಹಿಸಲು ಗೇಟ್ ಅಳವಡಿಸುವಂತೆ ಅಧಿಸೂಚನೆ ಹೊರಡಿಸಲು, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಿನ ಹೋರಾಟದ ರೂಪುರೇಷೆ ತಯಾರಿಸುವುದು ಮತ್ತು ಹೋರಾಟ ಸಮಿತಿ ರಚಿಸುವುದರ ಕುರಿತು ಜೂನ್ 16ರ ಬೆಳಿಗ್ಗೆ ವಿಜಯಪುರದ ಡಾ. ಬಿ ಆರ್ ಅಂಬೇಡ್ಕರ್ ಸಭಾಭವನದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಸಭೆಗೆ ನೀರಾವರಿ ತಜ್ಞ ಡಾ.ಕೃಷ್ಣ ಕೋಲಾರ ಕುಲಕರ್ಣಿ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಅಧ್ಯಾಪಕ ಡಾ.ರಾಜೇಂದ್ರ ಪೋದ್ದಾರ, ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಬಿ ವಿ ಬಿರಾದಾರ, ಹೋರಾಟಗಾರ ಪಂಚಪ್ಪ ಕಲಬುರ್ಗಿ, ಚಾಣಕ್ಯ ಕರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ನಿಂಗನಗೌಡ ಬಿ ವಿ ಬಿರಾದಾರ ಸೇರಿದಂತೆ ಇತರ ತಜ್ಞರು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿದ್ದೀರಾ? ರಾಯಚೂರು | ಜೋಳ ಖರೀದಿ ಹಣ ಪಾವತಿಗೆ ಆಗ್ರಹಿಸಿ ರಸ್ತೆ ತಡೆದು ರೈತರು ಪ್ರತಿಭಟನೆ
“ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆಯ ಎಲ್ಲ ರೈತಪರ ಸಂಘಟನೆಗಳ ಮುಖಂಡರು, ದಲಿತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿ ಎಲ್ಲ ಪ್ರಗತಿಪರ ಸಂಘಟನೆಗಳ ಮುಖಂಡರು ಪೂರ್ವಭಾವಿ ಸಭೆಗೆ ಆಗಮಿಸಿ ಮುಂದಿನ ಹೋರಾಟದ ರೂಪರೇಷೆ ಸಿದ್ದಪಡಿಸುವುದು ಹಾಗೂ ಕೇಂದ್ರ ಸರ್ಕಾರದ ಮೇಲೆ ಅಧಿಸೂಚನೆ ಹೊರಡಿಸಲು ಒತ್ತಾಯಿಸುವ ಸಲುವಾಗಿ ಸಭೆ ಕರೆಯಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತ ಬಾಂಧವರು ಆಗಮಿಸಬೇಕು ಎಂದು” ರೈತ ಮುಖಂಡ ಅರವಿಂದ ಕುಲಕರ್ಣಿ ಮನವಿ ಮಾಡಿದರು.




