ತಿಕೋಟಾ ಪಟ್ಟಣದಲ್ಲಿ ಅಗ್ನಿ ಅವಘಡ: ಕೀಟನಾಶಕ, ರಸಗೊಬ್ಬರ ಬೆಂಕಿಗಾಹುತಿ

Date:

ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ ಮಹೇಶ್ ಮೀಸಾಳ ಅವರಿಗೆ ಸೇರಿದ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟ ಅಂಗಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ದಾಸ್ತಾನು ಬೆಂಕಿಗಾಹುತಿಯಾಗಿದೆ.

- Advertisement -

ಅಂಗಡಿಯಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ವ್ಯಾಪಕವಾಗಿ ಹಬ್ಬಿ, ಅಂಗಡಿಯಲ್ಲಿದ್ದ ರಸಗೊಬ್ಬರ ಚೀಲಗಳು, ಕೀಟನಾಶಕ ಔಷಧಿಗಳ ಸಂಗ್ರಹ, ಕೃಷಿ ಸಂಬಂಧಿತ ವಿವಿಧ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಬೆಂಕಿಯ ತೀವ್ರತೆಯಿಂದ ಅಂಗಡಿಯೊಳಗೆ ಸಂಗ್ರಹಿಸಲಾಗಿದ್ದ ಬಹುಪಾಲು ವಸ್ತುಗಳನ್ನು ರಕ್ಷಿಸಲು ಸಾಧ್ಯವಾಗದೆ, ವ್ಯಾಪಾರಸ್ಥರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸ್ಥಳೀಯರು ಸಹ ಬೆಂಕಿ ನಂದಿಸುವ ಕಾರ್ಯಕ್ಕೆ ಸಹಕರಿಸಿದರು. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಷ್ಟದ ಪ್ರಮಾಣದ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಈ ಅವಘಡದಿಂದ ವ್ಯಾಪಾರಿ ಮಹೇಶ್ ಮೀಸಾಳ ಮತ್ತು ಅವರ ಕುಟುಂಬಕ್ಕೆ ತೀವ್ರ ಆಘಾತ ಉಂಟಾಗಿದ್ದು, ಸ್ಥಳೀಯರು ಸಂತಾಪ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...