ವಿಜಯಪುರ ತಾಲೂಕು ಮಟ್ಟದ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಸಲ್ಲಿಕೆಗೆ ಜೂ.20 ಕೊನೆಯ ದಿನ

Date:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ ಮಾಧ್ಯಮ ಸಂಸ್ಥೆಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

- Advertisement -

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ ನಿಂಬಾಳ್ಕರ್ ಪ್ರಕಟಣೆ ಹರಡಿಸಿದ್ದು, ಪತ್ರಕರ್ತರು ಕಾರ್ಯನಿರ್ವತ್ತಿರುವ ಸಂಸ್ಥೆಗಳಲ್ಲಿ ಪೂರ್ಣಾವಧಿ/ ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ ಮಾತುಗಳಿಂದ ಹಾಲಕ್ಕಿಗಳ ಮತ ದೋಚಿ ಗೆದ್ದವರು ಕೃತಘ್ನರಾಗಿದ್ದಾರೆ. ಎಸ್ಟಿ ಮೀಸಲಾತಿ ಸೌಲಭ್ಯ ಅಷ್ಟು ಸುಲಭಕ್ಕೆ ಹಾಕ್ಕಿಗಳಿಗೆ ದಕ್ಕಲು ಪ್ರಬಲ ಮೇಲ್ವರ್ಗದ...

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ...

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ, ಗ್ರಾಮೀಣ ರಾಜಕಾರಣದಲ್ಲಿ ಮಾತ್ರ ಈಗಾಗಲೇ ಚುನಾವಣೆಯ ಕಾವು ಏರತೊಡಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ...

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ...

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ ಹಣಕಾಸಿನ ಕುರಿತ ಹೇಳಿಕೆಗಳು ಮತ್ತು ಸರ್ಕಾರದ ತನಿಖೆಯ ಭರವಸೆ—ಇವೆಲ್ಲವೂ ಪ್ರಕರಣದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತವೆ. ಆದರೆ ಇವುಗಳಲ್ಲಿ ಯಾವುದೂ ಸ್ವತಃ...

2025 ಸೆಪ್ಟೆಂಬರ್ 12ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಶರತ್ತನ್ನು ಸಡಿಲಿಸಿ, ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ತಾನಿಕ ಸಂಪಾದಕರ / ಮುಖ್ಯಸ್ಥರ ಸಿಪಾರಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕೊಡಗು | ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ನಡ ನಾಡಿನ ಅಭಿವೃದ್ಧಿಯ ಶಿಲ್ಪಿ: ಎಂ.ಪಿ. ಕೇಶವ ಕಾಮತ್

ಆನ್‌ಲೈನ್‌ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವಿಕೃತ ಅರ್ಜಿಗಳನ್ನು ಆಯ್ಕೆ ಸಮಿತಿ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ತಾಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಅನುಕೂಲ ಕಲ್ಪಿಸಲು ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್ ಪಾಸ್‌ಗಳನ್ನು ನೀಡುತ್ತಿದೆ.

ರಾಜ್ಯದ ಎಲ್ಲ ತಾಲೂಕುಗಳ ಅರ್ಹ ಪತ್ರಕರ್ತರು ಕೂಡಲೇ ಸೇವಾ ಸಿಂಧು ಪೋರ್ಟಲ್ ಮೂಲಕ ಜೂನ್ 20ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕನ್ನರಿಗೆ ಉದ್ಯೋಗ ವಂಚನೆ: ಕ್ಲೌಡೆರಾ ಕಂಪನಿಗೆ ಭಾರಿ ದಂಡ, ಗ್ರೀನ್ ಕಾರ್ಡ್ ಪ್ರೋಗ್ರಾಂನಿಂದ ನಿಷೇಧ

ಅಮೆರಿಕ ಸರ್ಕಾರವು ಸ್ಥಳೀಯ ಕಾರ್ಮಿಕರಿಗೆ ತಾರತಮ್ಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ 'ಕ್ಲೌಡೆರಾ'...

ಶಿರಾಳಕೊಪ್ಪ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಮತಗಳ್ಳತನದ ರೂವಾರಿ, ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಯುಪಿ ಚುನಾವಣೆಗೆ ಕಾಂಗ್ರೆಸ್ ಪ್ಲ್ಯಾನ್: ಎಸ್‌ಪಿ ಮುಂದೆ 125+ ಸೀಟುಗಳ ಬೇಡಿಕೆ ಇಡಲು ಪ್ರಿಯಾಂಕಾ ಸಜ್ಜು!

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷಗಳಾದ...

SIR | 14 ಕೋಟಿ ‘ಮತದಾರರು ಕಣ್ಮರೆ’; ಬೆಚ್ಚಿಬೀಳಿಸುವ ಅಂಕಿಅಂಶ!

ಎಸ್‌ಐಆರ್ ವಿವಾದದ ಚರ್ಚೆಗಳಲ್ಲಿ ಎರಡು ವಾದಗಳಿವೆ; ಒಂದು - ಮತಪಟ್ಟಿಯಿಂದ 13.3...