ಮಮದಾಪುರ ಕೆರೆ ಮುಳುಗಡೆ ಪ್ರದೇಶ ಭೂಸ್ವಾಧೀನಕ್ಕೆ ಗ್ರೀನ್ ಸಿಗ್ನಲ್

Date:

ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಮಮದಾಪುರ ಕೆರೆಯಲ್ಲಿ ನೀರು ತುಂಬಿದಾಗ ಮುಳುಗಡೆಯಾಗುವ 178 ಎಕರೆ ಜಮೀನನ್ನು ರೈತರ ಕೋರಿಕೆಯಂತೆ ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಸಕಾರಾತ್ಮಕ ಸ್ಪಂದನೆ ನೀಡಿದೆ. ಈ ಕುರಿತು ಸಚಿವ ಸಂಪುಟದ ಮುಂದೆ ವಿಷಯ ಮಂಡಿಸುವಂತೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಗುರುವಾರ ವಿಧಾನಸೌಧದಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ನೇತೃತ್ವದಲ್ಲಿ ಸಣ್ಣ ನೀರಾವರಿ ಇಲಾಖೆ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಮುಳುಗಡೆ ಪ್ರದೇಶದ ರೈತರಿಗೆ ಉಂಟಾಗುತ್ತಿರುವ ತೊಂದರೆ, ನಷ್ಟ ಹಾಗೂ ಭೂಸ್ವಾಧೀನದ ಅಗತ್ಯತೆ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಭೆಯ ಬಳಿಕ ಮಾತನಾಡಿದ ಸಚಿವರು, “ಮುಳುಗಡೆ ಪ್ರದೇಶದ ರೈತರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಭೂಸ್ವಾಧೀನ ಪ್ರಸ್ತಾವವನ್ನು ಶೀಘ್ರವೇ ಸಚಿವ ಸಂಪುಟದ ಮುಂದೆ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಬಬಲೇಶ್ವರ ಕ್ಷೇತ್ರದ ಶಾಸಕರೂ ಆದ ಸಚಿವ ಎಂ.ಬಿ. ಪಾಟೀಲ, “16ನೇ ಶತಮಾನದಲ್ಲಿ ಆದಿಲ್ ಶಾಹಿಗಳು ನಿರ್ಮಿಸಿದ್ದ ಮಮದಾಪುರ ಕೆರೆ ಸುಮಾರು 1,200 ಎಕರೆ ವಿಸ್ತೀರ್ಣ ಹೊಂದಿದ್ದು, 15 ಗ್ರಾಮಗಳಿಗೆ ಜೀವನಾಡಿಯಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಕೆರೆಗೆ ನೀರು ತುಂಬಿಸಿದಾಗ 42 ರೈತರಿಗೆ ಸೇರಿದ 178 ಎಕರೆ ಜಮೀನು ಮುಳುಗಡೆಯಾಗುತ್ತಿದ್ದು, ರೈತರು ಯಾವುದೇ ಕೃಷಿ ಚಟುವಟಿಕೆ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ವಿವರಿಸಿದರು.

ಈ ಹಿನ್ನೆಲೆಯಲ್ಲಿ ರೈತರ ಬೇಡಿಕೆಯಂತೆ 178 ಎಕರೆ ಜಮೀನನ್ನು ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಭೂಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಲಾಗಿದ್ದು, ಇದಕ್ಕೆ ಅಂದಾಜು ₹42 ಕೋಟಿ ವೆಚ್ಚವಾಗಲಿದೆ. ಅಗತ್ಯ ಅನುದಾನ ಬಿಡುಗಡೆಗಾಗಿ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳುವ ಉದ್ದೇಶದಿಂದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಸಚಿವ ಪಾಟೀಲ ಹೇಳಿದರು.

ಜಲಸಂಪನ್ಮೂಲ ಸಚಿವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೃಷ್ಣಾ ಭಾಗ್ಯ ಜಲ ನಿಗಮದ ಪ್ರಧಾನ ವ್ಯವಸ್ಥಾಪಕ ಬಿ.ಎಂ. ಕುಲಕರ್ಣಿ, ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಬಿ.ಕೆ. ಪವಿತ್ರಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...