ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವೆ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

Date:

ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರ ಆಶೀರ್ವಾದ, ಮಾರ್ಗದರ್ಶನ ಹಾಗೂ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಶ್ರಮಿಸುವ ಸಂಕಲ್ಪ ನಮ್ಮದಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡಲು ಬದ್ಧರಾಗಿರುವುದಾಗಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

- Advertisement -

ವಿಜಯಪುರ ಜಿಲ್ಲೆಯ ಬಿಜ್ಜರಗಿ ಗ್ರಾಮದಲ್ಲಿ ಇಂದು ನಡೆದ ಶ್ರೀ ಹಂಜಗಿ ಸಿದ್ದೇಶ್ವರ ಮತ್ತು ಶ್ರೀ ಹಿರೋಡೇಶ್ವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭದಲ್ಲಿ ಕನಕದಾಸ ಸರ್ಕಲ್ ಉದ್ಘಾಟಿಸಿ, ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

“ಕಾಯಕ, ದಾಸೋಹ ಹಾಗೂ ಸಮಾನತೆಯ ಸಂದೇಶವನ್ನು ಸಾರಿದ ದಾಸ ಸಾಹಿತ್ಯವು ಸಮಾಜದ ಪರಿವರ್ತನೆಗೆ ಮಹತ್ವದ ಕೊಡುಗೆ ನೀಡಿದೆ. ಕನಕದಾಸರಂತಹ ಮಹನೀಯರ ಸಮಾಜಮುಖಿ ಚಿಂತನೆಗಳು ಇಂದಿಗೂ ಎಲ್ಲರಿಗೂ ಮಾರ್ಗದರ್ಶಕವಾಗಿವೆ” ಎಂದು ಹೇಳಿದರು.

“ಸಮಾಜದ ಎಲ್ಲ ವರ್ಗಗಳನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರದ ಪ್ರಯತ್ನಗಳ ಜತೆಗೆ ಜನರ ಸಹಕಾರವೂ ಅತ್ಯಂತ ಅಗತ್ಯವಾಗಿದೆ. ತಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ವಿಜಯಪುರ ಜಿಲ್ಲೆಯ ಜನರು ನೀಡಿದ ಶಕ್ತಿ, ಪ್ರೀತಿ ಹಾಗೂ ಸಹಕಾರವನ್ನು ತಮ್ಮ ಮೇಲೂ ಇರಿಸಿ, ಅಭಿವೃದ್ಧಿಗೆ ಕೈಜೋಡಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗೃಹಲಕ್ಷ್ಮಿ ಫಲಾನುಭವಿಗಳ ಪರಿಶೀಲನೆ: ಮೃತ ಫಲಾನುಭವಿಗಳ ಖಾತೆಗೆ ಜಮೆಯಾಗಿದ್ದ 86 ಲಕ್ಷ ರೂ. ವಶ

ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ ಬಿ ಪಾಟೀಲ್, ಹಾಲುಮತ ಸರೂರ ಮಠದ ಪರಮಪೂಜ್ಯ ರೇವಣ್ಣ ಸಿದ್ದೇಶ್ವರ ಶಾಂತಮಯ ಮಹಾಸ್ವಾಮೀಜಿ, ಶ್ರೀ ಮಾಳಿಂಗರಾಯ ಮಹಾರಾಜರು, ಶ್ರೀ ಮಾಯಣ್ಣ ಪೂಜಾರಿ, ಹೊವಣ್ಣ ಪೂಜಾರಿ ಸೇರಿದಂತೆ ಗಣ್ಯರು, ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ: ಕಾವಡಿ ಸರ್ಕಾರಿ ಪ್ರೌಢಶಾಲೆಗೆ ಪ್ರಥಮ ಬಹುಮಾನ

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ...

ಮತಗಳ್ಳತನದ ವಿರುದ್ಧ ಜಾಗೃತಿ ಮೂಡಿಸಿದ ಗೂಡುದೀಪ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ವಿನೂತನ ಪ್ರಯೋಗ

ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಮತದಾರರಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಜಾಗೃತಿ...

ಅಮೃತಸರ | 100ಕ್ಕೂ ಹೆಚ್ಚು ಸಶಸ್ತ್ರಧಾರಿಗಳಿಂದ ಮನೆ ಮೇಲೆ ಗುಂಡಿನ ದಾಳಿ; ಹಲವರಿಗೆ ಗಂಭೀರ ಗಾಯ

ಪಂಜಾಬ್‌ನ ಅಮೃತಸರ ಜಿಲ್ಲೆಯಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ನೂರಕ್ಕೂ ಹೆಚ್ಚು ಸಶಸ್ತ್ರಧಾರಿಗಳ...

ಹಿಪ್ಪರಗಿ ಬ್ಯಾರೇಜ್‌ಗೆ ಕೊಯ್ನ್ ಜಲಾಶಯದಿಂದ 2 ಟಿಎಂಸಿ ನೀರು ಹರಿಸಿ: ಶಾಸಕ ಸಿದ್ದು ಸವದಿ ಆಗ್ರಹ

ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣಾ ನದಿಯಲ್ಲಿ ಚಳಿಗಾಲದಲ್ಲೇ ನೀರಿನ ಹರಿವು ಕುಸಿಯುತ್ತಿರುವುದು...