5 ವರ್ಷ ಕಷ್ಟ ಪಟ್ಟಿದ್ದು ನಾನು, 4 ತಿಂಗಳ ಹಿಂದೆ ಬಂದವರು ಸಿಎಂ ಆದರು: ಹುದ್ದೆ ಕೈತಪ್ಪಿದ ಬಗ್ಗೆ ಖರ್ಗೆ ಮಾತು

Date:

ರಾಜ್ಯದಲ್ಲಿ 1999ರಲ್ಲಿ ವಿರೋಧ ಪಕ್ಷದ ನಾಯಕನಾಗಿ 5 ವರ್ಷ ಹೋರಾಟ ಮಾಡಿದೆ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದೆ. ಆದರೆ, ಚುನಾವಣೆಗೂ ಮುನ್ನ ನಾಲ್ಕು ತಿಂಗಳ ಹಿಂದೆ ಕೆಪಿಸಿಸಿ ಅಧ್ಯಕ್ಷರಾದ ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾದರು. ರಾಜಕೀಯವಾಗಿ ಅವಕಾಶ ತಪ್ಪಿರುವ ಬಗ್ಗೆ ಬೇಸರವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

- Advertisement -

ವಿಜಯಪುರ ನಗರದ ಬಿಎಲ್‌ಡಿಇ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಫ.ಗು.ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಬಿ.ಎಂ.ಪಾಟೀಲ ಮತ್ತು ಬಂಗಾರಮ್ಮ ಸಜ್ಜನ ಸ್ಮರಣೆ ಕಾರ್ಯಕ್ರಮದಲ್ಲಿ ಭಾನುವಾರ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಎಲ್ಲ ಪ್ರಯತ್ನಗಳು ವ್ಯರ್ಥವಾದಂತೆ ಭಾಸವಾಯಿತು. ನಾನು ಐದು ವರ್ಷಗಳ ಕಾಲ ಅವಿಶ್ರಾಂತವಾಗಿ ಕೆಲಸ ಮಾಡಿದ್ದೆ. ಅವರು (ಕೃಷ್ಣ) ಕೇವಲ ನಾಲ್ಕು ತಿಂಗಳ ಮೊದಲು ಅಧ್ಯಕ್ಷರಾಗಿ ಬಂದು ಮುಖ್ಯಮಂತ್ರಿಯಾದರು. ಇಂತಹ ಹಲವು ನಿದರ್ಶನಗಳಿದ್ದು, ಅವುಗಳೆಲ್ಲದರ ಬಗ್ಗೆ ಒಮ್ಮೆಲೇ ಮಾತನಾಡುವುದು ಸೂಕ್ತವಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣು ಮಕ್ಕಳ ಸುರಕ್ಷತೆಗೆ ‘ಶಕ್ತಿಶ್ರೀ’ ಸಾಕೇ?

‘ನಾನು ಎಂದೂ ಅಧಿಕಾರದ ಹಿಂದೆ ಹೋಗಿಲ್ಲ, ನನ್ನ ಪ್ರಯತ್ನಗಳ ಫಲವಾಗಿ ಅಧಿಕಾರ ಪಡೆದುಕೊಂಡಿದ್ದೇನೆ. ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಿಂದ ಎಐಸಿಸಿ ಹುದ್ದೆವರೆಗೂ ಬಂದಿರುವೆ. ಮನಸ್ಸಿನಲ್ಲಿ ದುರಾಸೆ ಇಟ್ಟುಕೊಂಡು ಮಾಡುವ ಕೆಲಸಗಳಿಂದ ಏನೂ ಮಾಡಲು ಸಾಧ್ಯವಿಲ್ಲ’ ಎಂದರು.

‘ಆರು ವರ್ಷದ ಬಾಲಕನಾಗಿದ್ದಾಗ ರಜಾಕರ ಹಾವಳಿಯಲ್ಲಿ ನನ್ನ ತಾಯಿ, ಸಹೋದರಿಯನ್ನು ಕಳೆದುಕೊಂಡೆ, ತಂದೆಯ ಆಸರೆಯಲ್ಲಿ ಬೆಳೆದೆ’ ಎಂದು ಖರ್ಗೆ ಅವರು ತಮ್ಮ ಜೀವನದ ಅನೇಕ ಘಟನೆಗಳನ್ನು ನೆನಪಿಸಿಕೊಂಡು ಕ್ಷಣಹೊತ್ತು ಭಾವುಕರಾದರು.

1999ರ ಕರ್ನಾಟಕ ವಿಧಾನಸಭಾ ಚುನಾವಣೆ. ಆಗ ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕರಾಗಿದ್ದರು. ರಾಜ್ಯದ ಮೂಲೆಮೂಲೆ ಸುತ್ತಿ, ಪಕ್ಷವನ್ನು ಅಧಿಕಾರಕ್ಕೆ ತರಲು ಐದು ವರ್ಷಗಳ ಕಾಲ ಅವಿಶ್ರಾಂತ ದುಡಿದಿದ್ದರು. ಅವರ ಪರಿಶ್ರಮಕ್ಕೆ ಫಲವೂ ಸಿಕ್ಕಿತ್ತು. ಕಾಂಗ್ರೆಸ್ 224 ಸ್ಥಾನಗಳ ಪೈಕಿ 132 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಏರಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...