ಇಂಡಿ | ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಶಾಸಕ ಯಶವಂತರಾಯಗೌಡ ರಾಜೀನಾಮೆ ಘೋಷಣೆ

Date:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟವನ್ನು ಸೋಮವಾರ ಸಂಜೆ ವಿಸ್ತರಿಸಲಾಗಿದೆ. ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

- Advertisement -

ವಿಜಯಪುರ ಜಿಲ್ಲೆಯ ರಾಜಕೀಯ ವಲಯದಲ್ಲಿ ಈ ರಾಜೀನಾಮೆ ತೀವ್ರ ಚರ್ಚೆಗೆ ಕಾರಣವಾಗಿದ್ದು, ಯಶವಂತರಾಯಗೌಡ ಪಾಟೀಲ್‌, ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಈ ಬಾರಿ ಕಾಂಗ್ರೆಸ್ ಹೈಕಮಾಂಡ್ ಹೊಸ ರಾಜಕೀಯ ಸಮೀಕರಣಗಳ ಆಧಾರದಲ್ಲಿ ಸಚಿವ ಸಂಪುಟವನ್ನು ರಚಿಸಿದೆ. ಯಶವಂತರಾಯಗೌಡ ಪಾಟೀಲ್ ಸೇರಿದಂತೆ ಹಲವು ಹಿರಿಯ ಸಚಿವಾಕಾಂಕ್ಷಿಗಳಿಗೆ ಅವಕಾಶ ದೊರೆಯಲಿಲ್ಲ. ಇದರಿಂದ ಹಲವು ಕಾಂಗ್ರೆಸ್‌ ಶಾಸಕರು ಅಸಮಾಧಾನಗೊಂಡಿದ್ದಾರೆ.

ಕೆಲವು ದಿನಗಳ ಹಿಂದೆ ಯಶವಂತರಾಯಗೌಡ ಪಾಟೀಲ್ ಅವರ ಬೆಂಬಲಿಗರು ಬೆಂಗಳೂರಿನ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆ ನಡೆಸಿ, ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದರು. ಅಲ್ಲದೆ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಸಚಿವ ಸ್ಥಾನ ನೀಡುವುದನ್ನು ವಿರೋಧಿಸುತ್ತಿದ್ದಾರೆ ಎಂಬ ಆರೋಪವನ್ನೂ ಮಾಡಿದ್ದರು.

ಈಗ ಸಚಿವ ಸಂಪುಟ ವಿಸ್ತರಣೆಯಲ್ಲೂ ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ದೊರೆಯದಿರುವುದು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಯಶವಂತರಾಯಗೌಡ ಪಾಟೀಲ್ ಅವರ ಮುಂದಿನ ರಾಜಕೀಯ ನಡೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದರತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

9426986d aa35 4bdb 963f 421e7f48effe
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಫ್ಘಾನ್ ವಿರುದ್ಧ ಭಾರತಕ್ಕೆ ಸರಣಿ ಕ್ಲೀನ್ ಸ್ವೀಪ್: ಶತಕದೊಂದಿಗೆ ಸೂರ್ಯವಂಶಿ ದಾಖಲೆ ಹಿಂದಿಕ್ಕಿದ ಅಭಿಷೇಕ್

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೂರನೇ ಹಾಗೂ ಅಂತಿಮ...

ಉರ್ದು, ಮರಾಠಿ ಶಿಕ್ಷಕರ ಪೂರ್ಣ ನೇಮಕಾತಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಆಗ್ರಹ

ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ...

ಸಿಂಧನೂರು | ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು, ₹56 ಸಾವಿರ ದಂಡ

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ₹56...

ಬೀದರ್‌ | ಶಿಷ್ಟಾಚಾರ ಉಲ್ಲಂಘನೆ : ಡಿಎಚ್‌ಒ ಸೇರಿ ಇಬ್ಬರು ಅಧಿಕಾರಿಗಳು ಅಮಾನತು

ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ...