ಇಂಡಿ | ಬರ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ಯಶವಂತರಾಯಗೌಡ ಪಾಟೀಲ ಸೂಚನೆ

Date:

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಜಾರಿಯಲ್ಲಿರುವ ವಿವಿಧ ಜನಕಲ್ಯಾಣ ಯೋಜನೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಬರದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡದರು.

- Advertisement -

ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಸವಿಸ್ತಾರವಾಗಿ ಪರಿಶೀಲನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಭೆಯಲ್ಲಿ ಕುಡಿಯುವ ನೀರಿನ ಪೂರೈಕೆ, ಗ್ರಾಮೀಣ ರಸ್ತೆಗಳ ದುರಸ್ತಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಯೋಜನೆಗಳ ಅನುಷ್ಠಾನ ಹಾಗೂ ಸಾರ್ವಜನಿಕರಿಂದ ಬಂದ ದೂರುಗಳ ತ್ವರಿತ ವಿಲೇವಾರಿ ಕುರಿತು ಚರ್ಚಿಸಲಾಯಿತು.

ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಕಾಲದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲು ಕೃಷಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಜೂ.28ರಿಂದ ಜು.1ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ

ಈ ಬಾರಿ ಮುಂಗಾರು ಮಳೆ ಕೈಕೊಡುವ ಲಕ್ಷಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಬರದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...