ಇಂಡಿ | ಕಲಿಕಾ ಕೇಂದ್ರದ ವಿದ್ಯಾರ್ಥಿನಿ ಸೈನಿಕ ಶಾಲೆಗೆ ಆಯ್ಕೆ; ʼಒಡಲ ದನಿʼ ಮೆಚ್ಚುಗೆ

Date:

ನಮ್ಮ ಕಲಿಕಾ ಕೇಂದ್ರದ ವಿದ್ಯಾರ್ಥಿನಿ ದೇಶದ ಹೆಮ್ಮೆಯ ಸೈನಿಕ ಶಾಲೆಗೆ ಆಯ್ಕೆಯಾಗಿರುವುದು ಹೆಮ್ಮೆ ತಂದಿದೆ. ಇದು ಕೇವಲ ಒಬ್ಬ ವಿದ್ಯಾರ್ಥಿನಿಯ ಸಾಧನೆಯಲ್ಲ, ಇದು ಜ್ಞಾನ ಮತ್ತು ಹೋರಾಟದ ಹಾದಿಯಲ್ಲಿ ಬೆಳೆಯುತ್ತಿರುವ ಪ್ರತಿಯೊಬ್ಬ ಹೆಣ್ಣುಮಗಳ ಜಯ ಎಂದು ʼಒಡಲ ದನಿʼ ಮಹಿಳಾ ಒಕ್ಕೂಟದ ನಿರ್ದೇಶಕಿ ಡಾ.ಭುವನೇಶ್ವರಿ ಕಾಂಬಳೆ ಮೆಚ್ಚುಗೆ ವ್ಯಕ್ತಪಡಿಸಿದರು.

- Advertisement -

ಸೈನಿಕ ಶಾಲೆಗೆ ಆಯ್ಕೆಯಾಗಿರುವ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಕಲಿಕಾ ಕೇಂದ್ರದ ವಿದ್ಯಾರ್ಥಿನಿ ಅನುಷ್ಕಾ ದುಂಡಪ್ಪ ಬನಸೂಡೆ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಬಲಾದ ಗ್ರಾಮದ ಸರಕಾರಿ ಶಾಲೆಯ ಶಿಕ್ಷಕ ವೃಂದ, ಪಾಲಕರು ಹಾಗೂ ಊರಿನ ಪ್ರಮುಖರು ಅನುಷ್ಕಾಳ ಸಾಧನೆಯನ್ನು ಕೊಂಡಾಡಿದ್ದು, ಮುಂದಿನ ದಿನಗಳಲ್ಲಿ ದೇಶದ ರಕ್ಷಣಾ ಕ್ಷೇತ್ರದಲ್ಲಿ ಉನ್ನತ ಅಧಿಕಾರಿಯಾಗಿ ಹೊರಹೊಮ್ಮಲಿ ಎಂದು ಹಾರೈಸಿದ್ದಾರೆ.

WhatsApp Image 2026 02 27 at 3.04.45 PM 1

ಅನುಷ್ಕಾ ಮೊದಲಿನಿಂದಲೂ ವಿದ್ಯಾಭ್ಯಾಸದಲ್ಲಿ ಅತೀವ ಆಸಕ್ತಿ ಹೊಂದಿದ್ದು, ಜಾಣ ವಿದ್ಯಾರ್ಥಿನಿ, ಶಿಸ್ತು ಮತ್ತು ನಿರಂತರ ಈ ಪರಿಶ್ರಮವೇ ಈ ಉನ್ನತ ಸಾಧನೆಗೆ ಕಾರಣವಾಗಿದೆ. ಕಡು ಬಡತನ ಮತ್ತು ಸೌಲಭ್ಯಗಳ ಕೊರತೆಯ ನಡುವೆಯೂ, ಕಲಿಕೆಯಲ್ಲಿ ಆಕೆ ತೋರಿದ ತನ್ಮಯತೆ ಇಂದು ಸಾರ್ಥಕವಾಗಿದೆ. ವಿದ್ಯಾರ್ಥಿನಿಯ ಈ ಸಾಧನೆಗೆ ‘ಒಡಲ ಧ್ವನಿ ಮಹಿಳಾ ಒಕ್ಕೂಟ’ ಹಾಗೂ ಸಾಮಾಜಿಕ ಹೋರಾಟಗಾರ್ತಿಯರು ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ | ಮಹಿಳೆಯರ ಅವಕಾಶ ವಂಚನೆ ಇಂದಿಗೂ ಮುಂದುವರೆದಿದೆ: ಪ್ರೊ. ಬಿ ಕೆ ರವಿ

ಈ ಸಂದರ್ಭದಲ್ಲಿ ಒಡಲ ಧ್ವನಿ ಮಹಿಳಾ ಒಕ್ಕೂಟದ ಸದಸ್ಯರು ಹಾಗೂ ಊರಿನ ಗುರು ಹಿರಿಯರು ಇದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ವಿಜಯಪುರ | ಅಕ್ಟೋಬರ್ 4ನೇ ವಾರದಲ್ಲಿ ನಶಾ ಮುಕ್ತ ಭಾರತ ಅಭಿಯಾನ: ಜಿಲ್ಲಾಧಿಕಾರಿ ಆನಂದ ಕೆ

ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯುವಜನತೆಯನ್ನು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...