ಕೊಲ್ಹಾರ | ಐಸಿಟಿಸಿ ಕೇಂದ್ರ ಮರುಸ್ಥಾಪನೆಗೆ ಕರವೇ ಆಗ್ರಹ

Date:

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿದ್ದ ಸಮಗ್ರ ಆಪ್ತ ಸಮಾಲೋಚನೆ ಮತ್ತು ಪರೀಕ್ಷಾ ಕೇಂದ್ರ (ಐಸಿಟಿಸಿ) ಏಕಾಏಕಿ ಸ್ಥಗಿತಗೊಳಿಸಿರುವ ಕ್ರಮವನ್ನು ಖಂಡಿಸಿದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತಾಲೂಕು ಘಟಕ, ಮರುಸ್ಥಾಪನೆಗೆ ಒತ್ತಾಯಿಸಿ ತಹಶೀಲ್ದಾರ್ ಸಂತೋಷ್ ಮ್ಯಾಗೇರಿ ಅವರ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.

- Advertisement -

ಕರವೇ ತಾಲೂಕು ಘಟಕದ ಅಧ್ಯಕ್ಷ ರವಿ ಗೊಳಸಂಗಿ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಕಾರ್ಯಕರ್ತರು, “ಕೊಲ್ಹಾರ ಹೊಸ ತಾಲೂಕು ಕೇಂದ್ರವಾಗಿದ್ದು ಸುಮಾರು 28ರಿಂದ 30 ಸಾವಿರ ಜನಸಂಖ್ಯೆ ಹೊಂದಿದೆ. ಅಲ್ಲದೆ ರೋಣಿಹಾಳ, ತೆಲಗಿ, ಕೂಡಗಿ, ಮುಳವಾಡ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಎಚ್‌ಐವಿ ಪರೀಕ್ಷೆ ಹಾಗೂ ಆಪ್ತ ಸಮಾಲೋಚನೆಗಾಗಿ ಈ ಕೇಂದ್ರವನ್ನೇ ಅವಲಂಬಿಸಿದ್ದರು. ಕೇಂದ್ರ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರು ದೂರದ ಸ್ಥಳಗಳಿಗೆ ತೆರಳುವ ಅನಿವಾರ್ಯತೆ ಎದುರಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಐಸಿಟಿಸಿ ಕೇಂದ್ರದ ಮೂಲಕ ಸಾರ್ವಜನಿಕರಲ್ಲಿ ಎಚ್‌ಐವಿ ಕುರಿತು ಅರಿವು ಮೂಡಿಸುವುದು, ಸಮಯೋಚಿತ ಪರೀಕ್ಷೆ ನಡೆಸುವುದು ಹಾಗೂ ಸೂಕ್ತ ಸಮಾಲೋಚನೆ ನೀಡುವುದು ಸಾಧ್ಯವಾಗುತ್ತಿತ್ತು. ಆದರೆ ಕೇಂದ್ರವನ್ನು ಸ್ಥಗಿತಗೊಳಿಸಿರುವುದರಿಂದ ಆರೋಗ್ಯ ಸೇವೆಗೆ ಹಿನ್ನಡೆಯಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈಗಾಗಲೇ ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದರೂ ಸಿಬ್ಬಂದಿ ಕೊರತೆ ಮುಂದುವರಿದಿದೆ. ಇಂತಹ ಸಂದರ್ಭದಲ್ಲಿ ಐಸಿಟಿಸಿ ಕೇಂದ್ರವನ್ನೂ ಸ್ಥಗಿತಗೊಳಿಸಿರುವುದು ಆರೋಗ್ಯ ಸೇವೆಗಳ ಮೇಲೆ ಮತ್ತಷ್ಟು ಪರಿಣಾಮ ಬೀರಿದೆ ಎಂದು ಕರವೇ ಮುಖಂಡರು ಆರೋಪಿಸಿದರು.

ಬಸವನ ಬಾಗೇವಾಡಿ ಹಾಗೂ ನಿಡಗುಂದಿಯಲ್ಲಿ ಐಸಿಟಿಸಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿರುವಾಗ, ಕೊಲ್ಹಾರ ತಾಲೂಕಿನ ಕೇಂದ್ರವನ್ನು ಮಾತ್ರ ಸ್ಥಗಿತಗೊಳಿಸಿರುವುದು ಸಮಂಜಸವಲ್ಲ. ಆದ್ದರಿಂದ ತಕ್ಷಣವೇ ಕೇಂದ್ರವನ್ನು ಮರುಸ್ಥಾಪಿಸಬೇಕು. ಇಲ್ಲದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ತಾಲೂಕು ಅಧ್ಯಕ್ಷ ರವಿ ಗೊಳಸಂಗಿ ಎಚ್ಚರಿಕೆ ನೀಡಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಸುರೇಶ ಸಾರವಾಡ, ಶಿವನಗೌಡ ಈರಣ್ಣ ಬಿರಾದಾರ, ಶಿವು ವಾಲಿಕಾರ, ಶಾರುಖ್ ಮಮದಾಪುರ, ಗೋಳಸಂಗಿ, ಶಂಕ್ರಪ್ಪ, ಸುಧಾಕರ ದಳವಾಯಿ, ಸುನಿಲ್ ಕೋರಿ ಸೇರಿದಂತೆ ಕರವೇ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...