ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

Date:

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ ಅಹವಾಲು ಹೊತ್ತುಬಂದ ಜನರಿಗೆ ನಿರಾಸೆ ಉಂಟಾಗಿದ್ದು, ಅಧಿಕಾರಿಗಳಿಂದ ಪರಿಹಾರದ ಭರವಸೆ ದೊರೆತಿದೆ.

- Advertisement -

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಿ, ವಿವಿಧ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹಮ್ಮಿಕೊಂಡಿರ ಪ್ರಜಾಸೇವಾ ಆಂದೋಲನವನ್ನು ಪಟ್ಟಣದ ವಾರ್ಡ್ ನಂ.12ರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ನಡೆದ ಹೋಬಳಿ ಮಟ್ಟದ ಆಂದೋಲನದಲ್ಲಿ ವಿವಿಧ ಗ್ರಾಮಗಳಿಂದ ಸಾರ್ವಜನಿಕರು ಆಗಮಿಸಿ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಮುಂದಿಟ್ಟರು.

ರಸ್ತೆ ದುರಸ್ತಿ, ಒಳಚರಂಡಿ ವ್ಯವಸ್ಥೆ, ಮಾಶಾಸನ, ವಿವಿಧ ಇಲಾಖೆಗಳ ಸೇವೆ, ತಾಲೂಕು ಮಟ್ಟದ ಕಚೇರಿಗಳ ಆರಂಭ ಸೇರಿದಂತೆ ಹಲವು ಬೇಡಿಕೆಗಳ ಕುರಿತು ಸಾರ್ವಜನಿಕರು ಮನವಿ ಸಲ್ಲಿಸಿದರು. ರೈತರ ಸಮಸ್ಯೆಗಳಿಗೂ ಅಧಿಕಾರಿಗಳು ಸ್ಪಂದಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ತಹಶೀಲ್ದಾರ್ ಸಂತೋಷ್ ಮ್ಯಾಗೇರಿ, “ಸಾರ್ವಜನಿಕರು ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದು ಪ್ರಜಾಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು, ತಮ್ಮ ಇಲಾಖೆಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

ಆದರೆ, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಕ್ಕೆ ಶಾಸಕ ಶಿವಾನಂದ ಪಾಟೀಲರು ಗೈರಾಗಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಯಿತು. ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರ ಮುಂದಿಟ್ಟು ಪರಿಹಾರ ಕೇಳುವ ನಿರೀಕ್ಷೆಯಿಂದ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಜನರಿಗೆ ಶಾಸಕರ ಅನುಪಸ್ಥಿತಿ ನಿರಾಸೆ ಮೂಡಿಸಿತು.

“ಪ್ರಜಾಸೌಧ ಹಾಗೂ ತಾಲೂಕು ಮಟ್ಟದ ಸರ್ಕಾರಿ ಕಚೇರಿಗಳನ್ನು ಆರಂಭಿಸುವುದು ಸೇರಿದಂತೆ ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕೋರಿ ಶಾಸಕರಿಗೆ ಮನವಿ ಸಲ್ಲಿಸಲು ಬಂದಿದ್ದೇವೆ. ಆದರೆ ಜನರ ಸಮಸ್ಯೆಗಳನ್ನು ಆಲಿಸಬೇಕಾದ ಶಾಸಕರೇ ಕಾರ್ಯಕ್ರಮಕ್ಕೆ ಗೈರಾಗಿರುವುದು ಜನಪ್ರತಿನಿಧಿತ್ವದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಜನರ ನೋವು-ನಲಿವುಗಳಿಗೆ ಸ್ಪಂದಿಸಬೇಕಾದವರು ಕಾರ್ಯಕ್ರಮಕ್ಕೇ ಬಾರದಿರುವುದು ಅತ್ಯಂತ ಬೇಸರದ ಸಂಗತಿ. ಜನರ ಸಮಸ್ಯೆಗಳಿಗೆ ಕಿವಿಗೊಡದಿದ್ದರೆ ಶಾಸಕರನ್ನು ಜನರ ಪ್ರತಿನಿಧಿ ಎನ್ನುವುದಾದರೂ ಹೇಗೆ?” ಎಂದು ಗ್ರಾಮ ಸ್ವರಾಜ್ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಪ್ರದೀಪ್ ಪಾಟೀಲ(ನಾಗರದಿನ್ನಿ) ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

“ಜನರ ಅಹವಾಲುಗಳನ್ನು ಸ್ವೀಕರಿಸುವ ಕಾರ್ಯಕ್ರಮಗಳು ಕೇವಲ ಅಧಿಕಾರಿಗಳ ಮಟ್ಟಕ್ಕೆ ಸೀಮಿತವಾಗದೆ, ಜನಪ್ರತಿನಿಧಿಗಳೂ ನೇರವಾಗಿ ಭಾಗವಹಿಸಿ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು” ಎಂಬ ಅಭಿಪ್ರಾಯವೂ ಸಾರ್ವಜನಿಕರಿಂದ ವ್ಯಕ್ತವಾಯಿತು.

ಇದನ್ನೂ ಓದಿದ್ದೀರಾ? ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಮುದ್ದೀನ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೀರೇಶ ಹಟ್ಟಿ, ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಸಂತೋಷ್ ಗಣಾಚಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...

ರಾಯಚೂರು | ಗಣೇಶ ಮೆರವಣಿಗೆಯಲ್ಲಿ ಮಿತಿ ಮೀರಿ ಡಿಜೆ ಸದ್ದು, 8 ಪ್ರಕರಣ ದಾಖಲು: ಎಸ್ ಪಿ

ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ನಿಗದಿತ ಮಿತಿಗಿಂತ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...