ಕಾಂಗ್ರೆಸ್‌ಗೆ ಸವನಳ್ಳಿ, ಗೊಣಸಗಿ ಗ್ರಾಮದ ಮುಖಂಡರ ಸೇರ್ಪಡೆ; ಗ್ರಾಮಗಳ ಅಭಿವೃದ್ಧಿಗೆ ಎಂ.ಬಿ ಪಾಟೀಲ ಕರೆ

Date:

ಹೊಸ ಹಾಗೂ ಹಿರಿಯ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ಹೇಳಿದರು. ವಿಜಯಪುರ ನಗರದಲ್ಲಿ ಭಾನುವಾರ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಸವನಳ್ಳಿ ಹಾಗೂ ಗೊಣಸಗಿ ಗ್ರಾಮದ ಹಲವು ಮುಖಂಡರು, ಪ್ರಮುಖರು ಹಾಗೂ ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು.

- Advertisement -

ಸವನಳ್ಳಿಯಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಾಬಾಯಿ ಮಮದಾಪುರ ಅವರ ನೇತೃತ್ವದಲ್ಲಿ ಹಲವು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವುದು, ತಮ್ಮ ಮೇಲಿನ ವಿಶ್ವಾಸ ಹಾಗೂ ಕ್ಷೇತ್ರದ ಅಭಿವೃದ್ಧಿಯ ನಿರೀಕ್ಷೆಗೆ ಸಾಕ್ಷಿಯಾಗಿದೆ ಎಂದು ಎಂ.ಬಿ ಪಾಟೀಲ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಗೊಣಸಗಿ ಗ್ರಾಮದ 17 ಕುಟುಂಬಗಳು ಒಟ್ಟಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸಂತಸ ತಂದಿದೆ. ಇನ್ನೂ ಹಲವು ಕುಟುಂಬಗಳು ಪಕ್ಷದೊಂದಿಗೆ ಕೈಜೋಡಿಸುವ ವಿಶ್ವಾಸ ವ್ಯಕ್ತಪಡಿಸಿರುವುದು ಗಮನಾರ್ಹವಾಗಿದೆ. ಪಕ್ಷಕ್ಕೆ ಸೇರ್ಪಡೆಗೊಂಡ ಎಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಹೊಸ ಹಾಗೂ ಹಿರಿಯ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸೋಣ ಎಂದು ಹೇಳಿದರು.

ಸವನಳ್ಳಿ ಗ್ರಾಮದ ನೆರೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಅಗತ್ಯ ನೀರಿನ ಸೌಲಭ್ಯ ಒದಗಿಸುವುದು ಹಾಗೂ ಗೊಣಸಗಿ ಸೇರಿದಂತೆ ಬಬಲೇಶ್ವರ ಕ್ಷೇತ್ರದ ಗ್ರಾಮಗಳಿಗೆ ಹೆಚ್ಚಿನ ನೀರು ಹರಿಸಿ ಜನರ ಸಮಸ್ಯೆಗಳನ್ನು ಪರಿಹರಿಸುವುದು ತಮ್ಮ ಆದ್ಯತೆಯಾಗಿದೆ ಎಂದು ಸಚಿವರು ಹೇಳಿದರು.

ಅಭಿವೃದ್ಧಿಯ ಪಥದಲ್ಲಿ ಬಬಲೇಶ್ವರ ಕ್ಷೇತ್ರ ಮತ್ತಷ್ಟು ಮುನ್ನಡೆಯಬೇಕು. ಇದಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಎಂ.ಬಿ ಪಾಟೀಲ ಕರೆ ನೀಡಿದರು.

ಸವನಳ್ಳಿಯ ಎಲ್ಲ ಸಮಾಜದವರೂ ಸಚಿವ ಎಂ.ಬಿ. ಪಾಟೀಲ ಅವರು ಕ್ಷೇತ್ರದ ಅಭಿವೃದ್ಧಿ ಕುರಿತು ಹೊಂದಿರುವ ವಿಶೇಷ ಕಾಳಜಿ ಹಾಗೂ ಗ್ರಾಮದ ಪ್ರಗತಿಯ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇವೆ ಎಂದು ಮಾಜಿ ಗ್ರಾಪಂ ಅಧ್ಯಕ್ಷೆ ಶಾಂತಾಬಾಯಿ ಮಮದಾಪುರ ಹೇಳಿದರು.

ಈ ಸಂದರ್ಭದಲ್ಲಿ ಸವನಳ್ಳಿಯ ಸಾಹೇಬಗೌಡ ಬಗಲಿ, ಮಲ್ಲಪ್ಪ ಹಂಡಿ, ಶಿವಾನಂದ ಪಟ್ಟದ, ಸಿದ್ದು ಹಂಡಿ, ಶ್ರೀಶೈಲ ಗಾಣಿಗೇರ, ರಾಜು ಹಂಡಿ, ಸುನಿಲ ಮಮದಾಪುರ ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಗೊಣಸಗಿಯ ಮಲ್ಲಿಕಾರ್ಜುನ ಬಿಜ್ಜರಗಿ, ಶಂಕರ ಮಾಳಿ, ಕಾಶೀನಾಥ ಮುಚ್ಚಂಡಿ, ಹಣಮಂತ ಜಂಬಗಿ, ಲಿಂಗಪ್ಪ ಮಾಳಿ, ಪರಶುರಾಮ ದೊಡ್ಡಮನಿ, ರಾಜಕುಮಾರ ದೊಡ್ಡಮನಿ, ಅಮಸಿದ್ಧ, ಬಸವರಾಜ, ನಿಂಗಪ್ಪ ಹೊನವಾಡ, ಸಿದ್ದು ಜಮಖಂಡಿ, ಪ್ರವೀಣ ದೊಡ್ಡಮನಿ, ಸೋಮಲಿಂಗ ಬಾರಿಗಿಡದ, ಶೀತಲ್ ಬಾಣಿ, ಹಣಮಂತ ಜುಳಜುಳಿ, ಹಣಮಂತ ಮಾಳಿ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡಣ್ಣವರ್, ಹಿರಿಯ ಮುಖಂಡ ಹಮೀದ್ ಮುಶ್ರಿಫ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದು SIR ಅಲ್ಲ, ‘ವಿಶೇಷ ಡಿಲಿಟೇಷನ್’ ಕಾರ್ಯಾಚರಣೆ: ಇಸಿ ನೋಟಿಸ್‌ಗೆ ಕಪಿಲ್ ಸಿಬಲ್ ಆಕ್ರೋಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ನಡೆಸುತ್ತಿರುವ ‘ಮತದಾರರ ಪಟ್ಟಿ ವಿಶೇಷ ತೀವ್ರ...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ...

ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಮಾಸ್ಕೋ ಗುರಿಯಾಗಿಸಿ 1,000ಕ್ಕೂ ಹೆಚ್ಚು ಡ್ರೋನ್‌ಗಳ ಸುರಿಮಳೆ

ಉಕ್ರೇನ್ ಹಾಗೂ ರಷ್ಯಾ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉಕ್ರೇನ್...