ವಿಜಯಪುರ | ‘ಮಹಾತ್ಮ ಗಾಂಧಿ ಮತ್ತು ಯುವ ಮನಸ್ಸು’ ಉಪನ್ಯಾಸ ಕಾರ್ಯಕ್ರಮ

Date:

ರಾಷ್ಟ್ರಪಿತ ಮಹಾತ್ಮ ಗಾಂಧಿ ಜಗತ್ತಿನ ಹಲವಾರು ನಾಯಕರ ಮೇಲೆ ಪ್ರಭಾವ ಬೀರಿದ್ದಾರೆ. ಗಾಂಧೀಜಿಯವರ ವಿಚಾರಗಳು, ಸಿದ್ಧಾಂತಗಳು ಇಂದಿಗೂ ಪ್ರಸ್ತುತ ಎಂದು ಮಹಾತ್ಮ ಗಾಂಧಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ನೀಲೇಶ್ ಬೆನಾಳ್ ಹೇಳಿದರು.

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರದಲ್ಲಿ ಯೋಜಿಸಿದ್ದ ‘ಮಹಾತ್ಮ ಗಾಂಧಿ ಮತ್ತು ಯುವ ಮನಸ್ಸು’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಗಾಂಧೀಜಿ ಮೂರು ಬಾರಿ ವಿಜಯಪುರಕ್ಕೆ ಬಂದು ಹೋಗಿದ್ದಾರೆ. ಅಸ್ಪೃಶ್ಯತೆ ನಿವಾರಣೆಯ ಕುರಿತು ಜಾಗೃತಿ ಮೂಡಿಸಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿ ಮಾಲಾ, “ಗಾಂಧೀಜಿ ವಿಚಾರಧಾರೆಗಳನ್ನು ಅನುಸರಿಸುವಲ್ಲಿ ಮತ್ತು ಸಮಾನಕ್ಕೆ ತಿಳಿಸುವಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರ ಮೇಲೆ ಹೆಚ್ಚಿನ ಜವಾಬ್ದಾರಿಗಳಿವೆ. ಗಾಂಧೀಜಿಯವರ ವಿಚಾರಗಳು ಆರ್ಥಿಕ ಹಾಗೂ ಸಾಮಾಜಿಕ ನೆಲೆಯಲ್ಲಿ ಪ್ರಸ್ತುತ ಕಾಲಕ್ಕೆ ಅತ್ಯಂತ ಪೂರಕವಾಗಿವೆ” ಎಂದರು.

ಕಾರ್ಯಕ್ರಮದಲ್ಲಿ  ಗಾಂಧಿವಾದಿ ಅಪ್ಪಸಾಹೇಬ ಯರೆನಾಳ್, ಸಿಕ್ಕಾಬ್ ಮಹಿಳಾ ಮಹಾವಿದ್ಯಾಲಯದ ಮುಖ್ಯಸ್ಥ ಡಾ. ರಿಯಾಜ್ ಫಾರೂಕಿ, ಗಾಂಧಿ ಭವನ ನಿರ್ವಹಣಾ ಸಮಿತಿಯ ಸದಸ್ಯರು ಹಾಗೂ ವಿಜಯಪುರದ ಖಾದಿ ಗ್ರಾಮೋದ್ಯೋಗ ಅಧ್ಯಕ್ಷ ಬಾಪು ಗೌಡ್ ಪಾಟೀಲ್, ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ಡಾಕ್ಟರ್ ಅಮರ್ನಾಥ್ ಪ್ರಜಾಪತಿ, ವಿದ್ಯಾರ್ಥಿನಿ ಪಲ್ಲವಿ ಪಥಾಟೆ,ಸಹಾಯಕ ಪ್ರಾಧ್ಯಾಪಕ ಸಂದೀಪ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ...

ಹಾವೇರಿ | ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ

ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ...

ಧಾರವಾಡ | ಕಲ್ಲು ಕ್ವಾರಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಮೊಬೈಲ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ...