ಇಂಡಿ ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತರ ಬೃಹತ್ ಪ್ರತಿಭಟನೆ

Date:

ವಿಜಯಪುರ ಜಿಲ್ಲೆಯ ಇಂಡಿ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲೆಯ ಇಂಡಿ ತಾಲೂಕು ಪ್ರಾಂತ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

- Advertisement -

ಹಳೆಯ ತಹಶೀಲ್ದಾರ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಬಸವೇಶ್ವರ ವೃತ್ತದ ಮೂಲಕ ಮಿನಿ ವಿಧಾನಸೌಧದವರೆಗೆ ಸಾಗಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಪ್ರತಿಭಟನಾಕಾರರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಇಂಡಿ ತಾಲೂಕು ಅತಿ ಹಿಂದುಳಿದ ಪ್ರದೇಶವಾಗಿದ್ದು, ಪದೇಪದೆ ಬರಗಾಲಕ್ಕೆ ತುತ್ತಾಗುತ್ತಿದೆ. ಈ ವರ್ಷ ಜೂನ್ ತಿಂಗಳಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಬಿತ್ತನೆ ಮಾಡಿದ ಬೆಳೆಗಳು ಒಣಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಜೆಡಿಎಸ್ ಮುಖಂಡ ಬಿ ಡಿ ಪಾಟೀಲ, “ಭೀಕರ ಬರಗಾಲದಿಂದ ರೈತರು ಚಾತಕ ಪಕ್ಷಿಯಂತೆ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಆದರೆ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿದೆ. ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರಕ್ಕೆ ರೈತರ ಶಾಪ ತಟ್ಟಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಂತ ರೈತ ಸಂಘದ ಅಧ್ಯಕ್ಷ ಭೀಮರಾಯ ಪೂಜಾರಿ ಮಾತನಾಡಿ, “ಬರಗಾಲದಿಂದ ಸಂಕಷ್ಟಕ್ಕೊಳಗಾದ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರಿಗೆ ಸಮರ್ಪಕ ಪರಿಹಾರ ನೀಡಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗದ ದಿನಗಳನ್ನು 200ಕ್ಕೆ ಹೆಚ್ಚಿಸಿ, ದಿನಗೂಲಿಯನ್ನು ₹600ಕ್ಕೆ ಏರಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಸಾಲದ ಹೊರೆ, ಬೆಳೆ ಚಿಂತೆ; ಗದ್ದೆಯಲ್ಲೇ ವಿಷ ಸೇವಿಸಿದ ರೈತ!

ಹಸಿರು ಸೇನೆಯ ಅಧ್ಯಕ್ಷ ಮಾಳಪ್ಪ ಪೂಜಾರಿ ಮಾತನಾಡಿ, “ಬರದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ಜಾನುವಾರುಗಳಿಗಾಗಿ ಮೇವು ಬ್ಯಾಂಕ್ ಸ್ಥಾಪಿಸಬೇಕು. ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಗಳನ್ನು ವಿತರಿಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಶ್ರೀಶೈಲ ಪೈಕಾರ, ಸಿದ್ದರಾಮ ಹಂಜಗಿ, ಮಲಪ್ಪ ಬಗಲಿ, ಮಲ್ಲು ಸಾವಕಾರ, ಶ್ರೀಮಂತ ದಳವಾಯಿ, ನಿಯಾಝ್ ಅಗರಖೇಡ, ಮಲಕಾರಿ ಪೂಜಾರಿ, ಸೈಪನ್ ಶೇಖ್, ಪುಂಡಲಿಕ ಸೇರಿದಂತೆ ರೈತ ಸಂಘದ ಮುಖಂಡರು ಹಾಗೂ ನೂರಾರು ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...