ವಿಜಯಪುರ | ಜಿಟಿಸಿಸಿ ತರಬೇತಿ ಕೇಂದ್ರ ಸ್ಥಾಪಿಸಲು ಶಾಸಕ ಯಶಚಂತರಾಯಗೌಡ ಪಾಟೀಲ್ ಒತ್ತಾಯ

Date:

ರಾಜ್ಯದ 31 ಜಿಲ್ಲೆಗಳ ಪೈಕಿ 29 ಜಿಲ್ಲೆಗಳಲ್ಲಿ ಜಿಟಿಸಿಸಿ ಕೇಂದ್ರಗಳಿವೆ. ಆದರೆ ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಾತ್ರ ಇಲ್ಲ. ಹೀಗಾಗಿ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಜಿಟಿಸಿಸಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು ಪ್ರಾರಂಭಿಸಬೇಕು ಎಂದು ಸರ್ಕಾರವನ್ನು ಶಾಸಕ ಯಶವಂತರಾಯಗೌಡ ಪಾಟೀಲ ಒತ್ತಾಯಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರಿಗೆ ಜಿಟಿಸಿಸಿ ಸ್ಥಾಪನೆ ಬಗ್ಗೆ ಪ್ರಶ್ನೆ ಕೇಳಿದರು. “ಜಿಟಿಸಿಸಿ ಕೇಂದ್ರ ಮಂಜೂರು ಮಾಡಲು ಅನುಸರಿಸಬೇಕಾದ ಮಾನದಂಡಗಳು ಇಂಡಿ ತಾಲೂಕಿನಲ್ಲಿವೆ. ಇಂಡಿ ತಾಲೂಕು ಕಂದಾಯ ಉಪ ವಿಭಾಗಾಧಿಕಾರಿ ಕೇಂದ್ರವಾಗಿದೆ.
ಮತ್ತು ಇಂಡಿ ಪಟ್ಟಣದ ವಸಂತ ನಗರದಲ್ಲಿ ಸರ್ವೇ ನಂ.738ರಲ್ಲಿ ಯೋಜನೆಗೆ ಅವಶ್ಯವಿರುವ 19 ಎಕರೆ ಜಮೀನು ಇದೆ” ಎಂದು ತಿಳಿಸಿದರು.

“ಸರ್ಕಾರಕ್ಕೆ ಪ್ರಸ್ತಾವನೆಯಲ್ಲಿ ಕೂಡ ತಿಳಿಸಲಾಗಿದೆ. ಸಂಬಂಧಿತ ಕಡತ ಲಗ್ತಿಸಿದ್ದಲ್ಲದೆ, ಎಐಸಿಟಿ ಈ ಅಖಿಲ ಭಾರತ ತಾಂತ್ರಿಕ ಮಹಾವಿದ್ಯಾಲಯಗಳ ಒಕ್ಕೂಟದ ಮಾರ್ಗ ಸೂಚಿಯಂತೆ ಇಂಡಿ ತಾಲೂಕಿನಲ್ಲಿ 39 ಪ್ರೌಢಶಾಲೆಗಳಿವೆ. ಔದ್ಯೋಗ ತರಬೇತಿ ಕೇಂದ್ರ, ಝಳಕಿಯಲ್ಲಿ ಸರಕಾರಿ ಪಾಲಿಟೆಕ್ನಿಕ್ ಮತ್ತು ಖಾಸಗಿ ಇಂಜಿನಿಯರಿಂಗ್ ಮಹಾ ವಿದ್ಯಾಲಯಗಳಿವೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಪ್ರಸ್ತಾವನೆ ಸರ್ಕಾರದ ಹಂತದಲ್ಲಿದೆ. ಸಾಧಕ ಬಾಧಕ ಪರಿಶೀಲಿಸಿ ಅರ್ಥಿಕ ಇಲಾಖೆಯ ಸಹ ಮತ ಮೇಲೆ ಜಿ.ಟಿ.ಸಿ.ಸಿ. ಕೇಂದ್ರ ಇಂಡಿಯಲ್ಲಿ ಸ್ಥಾಪಿಸಲು ಪರಿಶೀಲಿಸಲಾಗುವುದು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ...

ಗದಗ | ತಾಲೂಕು ಆಡಳಿತದಿಂದ ‘ಮೇವು ಬ್ಯಾಂಕ್’ ಆರಂಭ; ಕೆ.ಜಿಗೆ 2 ರೂ. ದರ ನಿಗದಿ

ಕೊಣ್ಣೂರು : ಜಾನುವಾರುಗಳಿಗೆ ಮೇವು ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವು...