ವಿಜಯಪುರ | ಕ್ಯಾಂಪಸ್‌ಗಳಲ್ಲಿ ಮೋದಿ ಸೆಲ್ಫಿ ಪಾಯಿಂಟ್; ಎಐಡಿಎಸ್‌ಒ ವಿರೋಧ

Date:

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವ ಯುಜಿಸಿ ಸೂಚನೆಯನ್ನು ಎಐಡಿಎಸ್ಒ ಖಂಡಿಸಿದೆ.

- Advertisement -

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ಮುಖಂಡೆ ಕಾವೇರಿ ರಜಪೂತ, “ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಲ್ಫಿ ಪಾಯಿಂಟ್ ಗಳನ್ನು ಸ್ಥಾಪಿಸಲು ಯುಜಿಸಿಯು ಸೂಚನೆ ನೀಡಿದೆ. ಆಡಳಿತ ಪಕ್ಷದ ನಾಯಕರಿಗೆ ಪ್ರಚಾರ ನೀಡುವ ಯುಜಿಸಿ ಸೂಚನೆಯು ಅಪ್ರಜಾತಾಂತ್ರಿಕವಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ದೇಶದ ಶೈಕ್ಷಣಿಕ ವ್ಯವಸ್ಥೆಯು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದರ ಬದಲು, ಒಬ್ಬ ನಾಯಕರ ವ್ಯಕ್ತಿ ಪೂಜೆ, ಒಂದು ವಿಚಾರಧಾರೆ ಸೇರಿದಂತೆ ಏಕಮುಖ ಚಿಂತನೆಯಲ್ಲಿ ದೇಶದ ವಿದ್ಯಾರ್ಥಿ ಯುವಜನತೆಯನ್ನು ಮುಳುಗಿಸುವ ಅಪಾಯಕಾರಿ ಫ್ಯಾಸಿವಾದಿ ನಡೆ ಇದಾಗಿದೆ” ಎಂದು ಅವರು ಹೇಳಿದ್ದಾರೆ.

“ಇಂತಹ ರಾಜಕೀಯದ ಬದಲು ಶಿಕ್ಷಣದ ವ್ಯಾಪಾರಿಕರಣ, ಖಾಸಗಿಕರಣ, ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಮುಚ್ಚುವಿಕೆ ಸೇರಿದಂತೆ ದೇಶದ ಶಿಕ್ಷಣ ವ್ಯವಸ್ಥೆಯು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಕೆಲಸವನ್ನು ಯುಜಿಸಿ ಮಾಡಬೇಕು. ಯಾವುದೋ ಒಬ್ಬ ರಾಜಕೀಯ ನಾಯಕರನ್ನು ಬಿಂಬಿಸುವ ಬದಲಿಗೆ ದೇಶದ ಶಿಕ್ಷಣದ ಏಳಿಗೆಗಾಗಿ ಶ್ರಮಿಸಿದ ನವೋದಯ ಹರಿಕಾರರಾದ ಈಶ್ವರ ಚಂದ್ರ ವಿದ್ಯಾಸಾಗರ್, ರಾಜಾರಾಮ್ ಮೋಹನ ರಾಯ್, ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ ಹಾಗೂ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮುಂತಾದವರ ಚಿಂತನೆಗಳನ್ನು ವಿದ್ಯಾರ್ಥಿಗಳ ಮಧ್ಯ ಹರಡುವ ಪ್ರಯತ್ನ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...