ಮುದ್ದೇಬಿಹಾಳ | ಗ್ರಾ.ಪಂ. ನೌಕರರ ಸಂಘದ ಅಧ್ಯಕ್ಷರಾಗಿ ಎ.ಪಿ. ಕೊಲಕಾರ ಆಯ್ಕೆ

Date:

ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳನ್ನು ಸರ್ಕಾರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸಂಘಟಿತ ಹೋರಾಟಕ್ಕೆ ಆದ್ಯತೆ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ (ಸಿಐಟಿಯು) ಮುದ್ದೇಬಿಹಾಳ ತಾಲೂಕು ಘಟಕದ ನೂತನ ಅಧ್ಯಕ್ಷ ಎ.ಪಿ. ಕೊಲಕಾರ (ಮಡಿಕೇಶ್ವರ) ಹೇಳಿದರು.

- Advertisement -

ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ (ಸಿಐಟಿಯು) ವತಿಯಿಂದ ನಡೆದ ಸದಸ್ಯರ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಗ್ರಾಮ ಪಂಚಾಯಿತಿ ನೌಕರರು ಸೇವೆಯಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳ ಪರಿಹಾರಕ್ಕಾಗಿ ಸರ್ಕಾರದ ಮಟ್ಟದಲ್ಲಿ ನಿರಂತರ ಒತ್ತಡ ತರುವ ಕೆಲಸವನ್ನು ಸಂಘ ಕೈಗೊಳ್ಳಲಿದೆ. ನೌಕರರ ಹಕ್ಕುಗಳ ರಕ್ಷಣೆಗೆ ಎಲ್ಲರೂ ಸಂಘಟಿತರಾಗಿ ಹೋರಾಟ ನಡೆಸಿದರೆ ಮಾತ್ರ ಬೇಡಿಕೆಗಳು ಈಡೇರುತ್ತವೆ. ಆದ್ದರಿಂದ ಸಂಘದ ಪ್ರತಿಯೊಂದು ಚಟುವಟಿಕೆಯಲ್ಲಿ ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕು” ಎಂದು ಕರೆ ನೀಡಿದರು.

ಸಭೆಯಲ್ಲಿ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಅಯ್ಯಣ್ಣ ಬಾಗೇವಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಾಲ್ ಅಹ್ಮದ್ ಹಾಗೂ ಜಿಲ್ಲಾ ಉಪಾಧ್ಯಕ್ಷ ಡಾ. ಎಂ.ಕೆ. ಗುಡಿಮನಿ ಅವರ ನೇತೃತ್ವದಲ್ಲಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಸಂಘದ ಗೌರವಾಧ್ಯಕ್ಷರಾಗಿ ಅಬ್ದುಲ್ ರಜಾಕ್ ತಮದಡ್ಡಿ, ಅಧ್ಯಕ್ಷರಾಗಿ ಎ.ಪಿ. ಕೊಲಕಾರ (ಮಡಿಕೇಶ್ವರ), ಉಪಾಧ್ಯಕ್ಷರಾಗಿ ಬಂದಗಿಸಾಬ ವಾಲಿಕಾರ, ಸಂಗಮ್ಮ ಹೊನ್ನಳ್ಳಿ ಹಾಗೂ ಮಂಜುನಾಥ ಭಜಂತ್ರಿ, ಪ್ರಧಾನ ಕಾರ್ಯದರ್ಶಿಯಾಗಿ ಹುಸೇನಪ್ಪ ಮುಂದಿನಮನಿ, ಸಹಕಾರ್ಯದರ್ಶಿಗಳಾಗಿ ಬಸನಗೌಡ ಪಾಟೀಲ, ಬಸವರಾಜ ಲಮಾಣಿ, ಗುರುನಾಥ ರೂಡಗಿ, ವಿರೂಪಾಕ್ಷ ಗುರಿಕಾರ, ಗಣೇಶ ಸರೂರ, ನಾಗಪ್ಪ ಹರಿಜನ, ಮಂಜುನಾಥ ಮ್ಯಾಗೇರಿ ಮತ್ತು ವಿನೋದ ರಾಠೋಡ ಅವಿರೋಧವಾಗಿ ಆಯ್ಕೆಯಾದರು. ನೂತನ ಪದಾಧಿಕಾರಿಗಳನ್ನು ಸಭೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆನಂದ ಬಿರಾದಾರ, ಆನಂದ ತಳವಾರ, ಮಾಲಪ್ಪ ಎಸ್.ಎಂ. ದ್ಯಾಮಗೊಂಡ, ಬಾಳಪ್ಪ ವಾಲಿಕಾರ, ಡಿಟಿ ಸಂಘದ ಅಧ್ಯಕ್ಷ ವೆಂಕಟೇಶ ಭಜಂತ್ರಿ, ಜಿಲ್ಲಾ ಉಪಾಧ್ಯಕ್ಷ ಡಾ. ಎಂ.ಕೆ. ಗುಡಿಮನಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ನೌಕರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

SIR | ಒಂದೇ ಮತಗಟ್ಟೆಯಲ್ಲಿ ಶೇ. 62ರಷ್ಟು ಮತದಾರರ ಹೆಸರು ಡಿಲೀಟ್: ಚುನಾವಣಾ ಆಯೋಗಕ್ಕೆ ರಮೇಶ್ ಬಾಬು ದೂರು

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)...