ಮುದ್ದೇಬಿಹಾಳ | ಅನಧಿಕೃತ ಖಾಸಗಿ ಶಾಲೆಗಳ ವಿರುದ್ಧ ದಲಿತ ಸಂಘರ್ಷ ಸಮಿತಿಯಿಂದ ಧರಣಿ ಸತ್ಯಾಗ್ರಹ

Date:

ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ, ಅನಧಿಕೃತ ವಸತಿ ಹಾಗೂ ಶಿಕ್ಷಣ ಕಾಯ್ದೆಯ ನಿಯಮಾವಳಿಗಳ ಉಲ್ಲಂಘನೆ ಆರೋಪಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ತಹಶೀಲ್ದಾರ ಕಚೇರಿ ಎದುರು ದಸಂಸ ಜಿಲ್ಲಾಧ್ಯಕ್ಷ ಬಾಲಚಂದ್ರ ಹುಲ್ಲೂರ ನೇತೃತ್ವದಲ್ಲಿ ಈ ಹೋರಾಟ ನಡೆಯುತ್ತಿದೆ.

- Advertisement -

ಈ ವೇಳೆ ಬಾಲಚಂದ್ರ ಹುಲ್ಲೂರ ಮಾತನಾಡಿ, “ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾಸ್ಫೂರ್ತಿ ಆಂಗ್ಲ ಮಾಧ್ಯಮ ಶಾಲೆ ಸೇರಿದಂತೆ ಹಲವು ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸಂಬಂಧಿಸಿದ ಅಧಿಕಾರಿಗಳು ವಿಫಲರಾಗಿದ್ದಾರೆ. ಎಂಟು ದಿನಗಳಾದರೂ ಸ್ಪಷ್ಟ ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳು ಅಕ್ರಮ ಶಾಲೆಗಳೊಂದಿಗೆ ಶಾಮೀಲಾದ ಶಂಕೆಗೆ ಕಾರಣವಾಗಿದೆ ಎಂದರು. ಧಾರವಾಡದ ಆಯುಕ್ತರು ಖುದ್ದಾಗಿ ಆಗಮಿಸಿ ಮೊದಲು ವಿದ್ಯಾಸ್ಫೂರ್ತಿ ಶಾಲೆಯನ್ನು ಸೀಜ್ ಮಾಡಬೇಕು. ಜೊತೆಗೆ ಈವರೆಗೆ ಕ್ರಮ ಕೈಗೊಳ್ಳದ ಡಿಡಿಪಿಐ ಹಾಗೂ ಬಿಇಒ ಅವರನ್ನು ತಕ್ಷಣ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು. ನ್ಯಾಯ ಸಿಗುವವರೆಗೂ ಹೋರಾಟ ಹಿಂಪಡೆಯುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಹೋರಾಟಗಾರರನ್ನು ಮನವೊಲಿಸಲು ಡಿಡಿಪಿಐ ವೀರಯ್ಯ ಸಾಲಿಮಠ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಬಿ ಎಸ್ ಸಾವಳಗಿ ಸ್ಥಳಕ್ಕೆ ಭೇಟಿ ನೀಡಿ ಪ್ರಯತ್ನಿಸಿದರೂ, ಹೋರಾಟಗಾರರು ತಮ್ಮ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಖಡಕ್ ನಿಲುವು ತಳೆದರು. ಈ ವೇಳೆ ಅಧಿಕಾರಿಗಳು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆಯಿತು. ಕೂಡಲೇ ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟವನ್ನು ಮತ್ತಷ್ಟು ಉಗ್ರಗೊಳಿಸುವುದಾಗಿ ಎಚ್ಚರಿಕೆ ನೀಡಲಾಯಿತು.

ಇದನ್ನೂ ಓದಿ: ವಿಜಯಪುರ | ಪಠ್ಯಕ್ರಮ, ಬೋಧನಾ ವಿಧಾನಗಳಲ್ಲಿ ಅಗತ್ಯ ಸುಧಾರಣೆ ತರುವುದು ಇಂದಿನ ಅಗತ್ಯ: ಪ್ರೊ. ಜಿ. ಬಿ ಸೋನಾರ್

ಹೋರಾಟದ ಏಳನೇ ದಿನ ತಮಟೆ ಚಳವಳಿ ಹಾಗೂ ಕಪ್ಪುಪಟ್ಟಿ ಪ್ರದರ್ಶನ ನಡೆಸಲಾಗಿತ್ತು. ಧರಣಿಯಲ್ಲಿ ಹಿರಿಯ ಹೋರಾಟಗಾರ ಹರೀಶ ನಾಟಿಕಾರ, ರಾಜ್ಯ ಹೋರಾಟಗಾರ ದುರ್ಗಪ್ಪ ದೊಡಮನಿ, ಅಂಬೇಡ್ಕರ್ ಸೇನೆಯ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಕಟ್ಟಿಮನಿ, ತಾಲೂಕು ಅಧ್ಯಕ್ಷ ಗೋಪಾಲ ಕಟ್ಟಿಮನಿ ಸೇರಿದಂತೆ ಪರಶುರಾಮ ಕವಡಿಮಟ್ಟಿ, ಶ್ರೀಶೈಲ ಸುಧಾಕರ, ಶೇಖರ ಹಡಗಿನಾಳ, ಸುರೇಶ ದೊಡಮನಿ, ದಾಳಪ್ಪ ಕೆಳಗೇರಿ, ಶಿವಪ್ಪ ಮಾದರ, ಮೌನೇಶ ಮಾದರ, ಸಂಗಮೇಶ ಢವಳಗಿ, ಪರಶುರಾಮ ಹೊಸಮನಿ, ಮಾರುತಿ ಸಿದ್ದಾಪೂರ, ರಾಘವೇಂದ್ರ ಮಾದರ, ಯಮನೂರಿ ಗುಡಿಹಾಳ, ಬಸವರಾಜ ಮಲಗಲದಿನ್ನಿ, ಶಿವು ದೇವೂರ, ವಿದ್ಯಾನಗರ ನಿವಾಸಿ ಗೌರಮ್ಮ ಹುನಗುಂದ ಹಾಗೂ ಸಾಮಾಜಿಕ ಚಿಂತಕ ಸುನೀಲ ಮನಗೂಳಿ ಸೇರಿದಂತೆ ಹಲವರು ಭಾಗವಹಿಸಿದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ತಾಳಿಕೋಟಿ | ₹2,500 ಬರ ಪರಿಹಾರಕ್ಕೆ ವಿರೋಧ: ಸರ್ಕಾರಕ್ಕೇ ದೇಣಿಗೆ ನೀಡಲು ರೈತ ಸಂಘ ಸಿದ್ಧತೆ

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ...

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...