ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

Date:

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ ₹1,000 ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ನಿಗದಿಪಡಿಸಬೇಕು. ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಹೆಚ್ಚಿಸುವುದರ ಜತೆಗೆ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.

- Advertisement -

ಶನಿವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ಮುಖಂಡರು, ಅಕ್ಟೋಬರ್ 12ರಂದು ದೆಹಲಿಯಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ರೈತರ ಬೇಡಿಕೆಗಳ ಕುರಿತು ಲಿಖಿತ ತೀರ್ಮಾನ ಕೈಗೊಂಡು, ಅನುಷ್ಠಾನಕ್ಕೆ ಕಾಲಮಿತಿ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

2026ರ ಸೆಪ್ಟೆಂಬರ್ 29ರಂದು ಹುಬ್ಬಳ್ಳಿಯಲ್ಲಿ ಸುಮಾರು ಮೂರು ಲಕ್ಷ ರೈತರು ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ಬೃಹತ್ ಹೋರಾಟ ನಡೆಸಿದ್ದರು. ಅಕ್ಟೋಬರ್ 12ರಂದು ದೆಹಲಿಯಲ್ಲಿ ಸಭೆ ನಡೆಸುವ ಭರವಸೆ ಹಿನ್ನೆಲೆಯಲ್ಲಿ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿತ್ತು. ಬೇಡಿಕೆಗಳನ್ನು ಈಡೇರಿಸದಿದ್ದರೆ ಅಕ್ಟೋಬರ್ 19ರಿಂದ ಮುಂದಿನ ಹಂತದ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಕಬ್ಬಿನ ಉತ್ಪಾದನಾ ವೆಚ್ಚ, ಕಾರ್ಮಿಕರ ಕೂಲಿ, ರಸಗೊಬ್ಬರ, ನೀರಾವರಿ ಮತ್ತು ಸಾಗಣೆ ವೆಚ್ಚಗಳನ್ನು ಪರಿಗಣಿಸಿ ನ್ಯಾಯಯುತ ಬೆಲೆ ನಿಗದಿಪಡಿಸಬೇಕು. ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಪ್ರತಿ ಕೆ.ಜಿ.ಗೆ ₹46ರಿಂದ ₹60ಕ್ಕೆ ಹೆಚ್ಚಿಸಿ, ಅದರಿಂದ ಸಕ್ಕರೆ ಕಾರ್ಖಾನೆಗಳಿಗೆ ದೊರೆಯುವ ಹೆಚ್ಚುವರಿ ಆದಾಯದಲ್ಲಿ ರೈತರಿಗೂ ನ್ಯಾಯಯುತ ಪಾಲು ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿದರು.

ಸ್ವಾಮಿನಾಥನ್‌ ಆಯೋಗದ ಶಿಫಾರಸಿನಂತೆ ಉತ್ಪಾದನಾ ವೆಚ್ಚದ C2 ಆಧಾರದ ಮೇಲೆ ಶೇ.50ರಷ್ಟು ಲಾಭ ಸೇರಿಸಿ ಬೆಂಬಲ ಬೆಲೆ ನಿಗದಿಪಡಿಸಬೇಕು. ಕರ್ನಾಟಕದಲ್ಲಿ ಉತ್ಪಾದನೆಯಾಗುವ ಅರ್ಹ ಎಥೆನಾಲ್‌ನ ಶೇ.100ರಷ್ಟು ಖರೀದಿಗೆ ಅವಕಾಶ ಕಲ್ಪಿಸಿ, ಖರೀದಿ ದರ ಹಾಗೂ ಸರಬರಾಜಿನ ವಿವರಗಳನ್ನು ಸಾರ್ವಜನಿಕಗೊಳಿಸಬೇಕು ಎಂದು ಒತ್ತಾಯಿಸಿದರು.

ಸಕ್ಕರೆ, ಮೊಲಾಸಿಸ್, ಎಥೆನಾಲ್, ವಿದ್ಯುತ್ ಸೇರಿದಂತೆ ಕಬ್ಬಿನ ಉಪಉತ್ಪನ್ನಗಳಿಂದ ಬರುವ ಪರಿಗಣಿತ ನಿವ್ವಳ ಆದಾಯದಲ್ಲಿ ರೈತರಿಗೆ ಶೇ.75ರಷ್ಟು ಪಾಲು ದೊರೆಯುವಂತೆ ಪಾರದರ್ಶಕ ಆದಾಯ ಹಂಚಿಕೆ ಸೂತ್ರ ಜಾರಿಗೊಳಿಸಬೇಕು. ಕೇಂದ್ರದ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ರೈತರ ಕನಿಷ್ಠ ಕಾನೂನುಬದ್ಧ ರಕ್ಷಣೆಯಾಗಿ ಮುಂದುವರಿಯಬೇಕು ಎಂದರು.

ಅಕ್ಟೋಬರ್ 6ರಂದು ಜಿಲ್ಲಾಧಿಕಾರಿಗಳು ಕರೆದಿದ್ದ ಸಭೆಗೆ ಸಕ್ಕರೆ ಕಾರ್ಖಾನೆಗಳ ಮಾಲೀಕರು ಖುದ್ದಾಗಿ ಹಾಜರಾಗದೆ ಸಿಬ್ಬಂದಿಯನ್ನು ಕಳುಹಿಸಿದ್ದರಿಂದ ರೈತರ ಬೇಡಿಕೆಗಳ ಕುರಿತು ಅಂತಿಮ ತೀರ್ಮಾನ ಸಾಧ್ಯವಾಗಲಿಲ್ಲ. ಇದನ್ನು ವಿರೋಧಿಸಿ ಸಭೆಯನ್ನು ಬಹಿಷ್ಕರಿಸಿದ್ದಾಗಿ ರೈತ ಸಂಘದ ಮುಖಂಡರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ, ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ,ರಾಹುಲ್ ಕುಬಕಡ್ಡಿ ಹಾಗೂ ಜಿಲ್ಲೆಯ ಇತರ ಪ್ರಮುಖ ನಾಯಕರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...