ಮುದ್ದೇಬಿಹಾಳ | ಪ್ರತಿಯೊಬ್ಬರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವುದು ಸೂಕ್ತ: ಅಕ್ಬರ್ ಅಲಿ ಉಡುಪಿ

Date:

ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ ಮೌಲ್ಯಗಳನ್ನು ಸಾರಿದ ಪ್ರವಾದಿ ಮಹಮ್ಮದ್ ಅವರ ಸಂದೇಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವುದು ಸೂಕ್ತ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮಹಮ್ಮದ್ ಸೀರತ್ ಅಭಿಯಾನ’ದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, “ಪ್ರವಾದಿ ಮಹಮ್ಮದ್ ಅವರ ಸಂದೇಶ ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗಿರಲಿಲ್ಲ. ಸಮಾಜದಲ್ಲಿನ ಅಸಮಾನತೆ, ಬಡತನ ಹಾಗೂ ಶೋಷಣೆಯ ವಿರುದ್ಧ ಧ್ವನಿ ಎತ್ತಿ, ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡುವ ಬದುಕಿನ ಮಾರ್ಗವನ್ನು ಅವರು ತೋರಿಸಿಕೊಟ್ಟಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

“ನಾವೆಲ್ಲರೂ ಒಬ್ಬನೇ ದೇವನ ಸೃಷ್ಟಿಯಾಗಿದ್ದು, ಒಂದೇ ತಂದೆ-ತಾಯಿಯ ಮಕ್ಕಳು. ಒಂದು ದೇಶದ ವಾಸಿಗಳು. ನಾವೆಲ್ಲರೂ ಭಾರತೀಯರು” ಎಂದರು .

“ಧರ್ಮವು, ಮನುಷ್ಯ ಹೇಗೆ ಬದುಕಬೇಕು ಎಂಬುದನ್ನು ಕಲಿಸುತ್ತದೆ. ಉತ್ತಮ ಗುಣಗಳನ್ನು ಹೊಂದಿರುವ ವ್ಯಕ್ತಿಗೆ ಜಾತಿ-ಪಂಗಡಗಳ ಎಲ್ಲೆ ಇರುವುದಿಲ್ಲ. ಮನುಷ್ಯರನ್ನು ಮನುಷ್ಯರೊಂದಿಗೆ ಜೋಡಿಸುವ ಕೆಲಸವನ್ನು ಪ್ರವಾದಿ ಮಹಮ್ಮದ್ ಮಾಡಿದರು” ಎಂದರು.

“ಮನುಷ್ಯನ ಜೀವನ ಒಂದು ಪರೀಕ್ಷೆಯಾಗಿದೆ, ಎಲ್ಲರನ್ನೂ ಸಮಾನ ದೃಷ್ಟಿಯಿಂದ ಕಾಣಬೇಕು. ಮನುಷ್ಯನ ಹುಟ್ಟು ಈ ಮಣ್ಣಿನಿಂದಲೇ ಆಗಿದೆ. ಆದ್ದರಿಂದ ಜಾತಿ, ಧರ್ಮದ ಆಧಾರದ ಮೇಲೆ ಭೇದ ಮಾಡದೆ ಎಲ್ಲರನ್ನೂ ಸಮಾನವಾಗಿ ಕಾಣಬೇಕೆಂದರು. ಎಲ್ಲ ಧರ್ಮಗಳ ಸಾರವೂ ಅಂತಿಮವಾಗಿ ಮಾನವೀಯತೆ, ಪ್ರೀತಿ, ಶಾಂತಿ ಹಾಗೂ ಸಹಬಾಳ್ವೆಯನ್ನೇ ಸಾರುತ್ತದೆ” ಎಂದು ಹೇಳಿದರು.

ಓಂ ಶಾಂತಿ ರೇಣುಕಾ ಮಾತನಾಡಿ, “ಪ್ರವಾದಿ ಮಹಮ್ಮದ್ ಅವರು ಜಾತಿ-ಧರ್ಮದ ಭೇದಗಳನ್ನು ಮೀರಿ ಪ್ರೀತಿ, ತ್ಯಾಗ ಹಾಗೂ ಮಾನವೀಯತೆಯ ಸಂದೇಶ ಸಾರಿದ್ದಾರೆ. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಪರಿವರ್ತನೆ ತಂದುಕೊಂಡು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಮತ್ತು ಸಹಬಾಳ್ವೆ ಬೆಳೆಸುವ ನಿಟ್ಟಿನಲ್ಲಿ ಅವರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ” ಎಂದರು.

ಫಾದರ್ ಸುನಿಲ್ ಮಾತನಾಡಿ, “ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ. ಸರ್ವಧರ್ಮ ಸಮನ್ವಯದ ಆಶಯವನ್ನು ಅರ್ಥಮಾಡಿಕೊಂಡು ಸಮಾಜದಲ್ಲಿ ಪರಸ್ಪರ ಗೌರವ, ಪ್ರೀತಿ ಹಾಗೂ ಸಹೋದರತ್ವ ಬೆಳೆಸಿಕೊಳ್ಳಬೇಕು” ಎಂದು ಹೇಳಿದರು.

ಪ್ರೋ.ಆರ್ ಎಚ್ ಸಜ್ಜನ್ ಮಾತನಾಡಿ, ಇಸ್ಲಾಮಿನ ಐದು ಅರಾಧನಾ ಕರ್ಮಗಳಾದ ವಿಶ್ವಾಸ, ನಮಾಝ್, ಉಪವಾಸ, ಝಕಾತ್, ಹಜ್‌ಗಳಲ್ಲಿ ಮಾನವೀಯ ಮೌಲ್ಯಗಳು ಹೇಗೆ ಅಡಕವಾಗಿವೆ ಎಂಬುದನ್ನು ವಿವರಿಸಿದರು.

ಮುದ್ದೇಬಿಹಾಳ ಘಟಕದ ನೂರ ನಬಿ ನದಾಫ್ ಪ್ರಾಸ್ತಾವಿಕವಾಗಿ ಮಾತನಾಡಿ, “ಪ್ರವಾದಿ ಮಹಮ್ಮದ್ ಅವರು ಅಸಮಾನತೆಯ ವಿರುದ್ಧ ಹೋರಾಡಿ, ಬಡವರು ಹಾಗೂ ಗುಲಾಮರಂತಿದ್ದವರ ಉದ್ಧಾರಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಹಸಿವಿನ ನೋವು ಮತ್ತು ಮಹತ್ವವನ್ನು ಅರಿತಿದ್ದ ಅವರು, ಸಂಕಷ್ಟದಲ್ಲಿರುವವರ ಬದುಕನ್ನು ಅರ್ಥಮಾಡಿಕೊಳ್ಳುವಂತೆ ಸಮಾಜಕ್ಕೆ ಸಂದೇಶ ನೀಡಿದರು. ಸಂಕುಚಿತ ಮನೋಭಾವವನ್ನು ತೊರೆದು, ‘ನನ್ನ ಜತೆಗೆ ಇತರರೂ ಬದುಕಬೇಕು’ ಎಂಬ ಮಾನವೀಯ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕು” ಎಂದು ಹೇಳಿದರು.

ಇದನ್ನೂ ಮೈಸೂರು | CAPED ಇಂಡಿಯಾದಿಂದ ಎರಡು ದಿನ ಸ್ತನ ಕ್ಯಾನ್ಸರ್ ತಪಾಸಣಾ ಕಾರ್ಯಕ್ರಮ

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಂಚಾಲಕ ನಾಸಿರ್ ಹುಸೇನ್ ಮಾತನಾಡಿ, “ಪ್ರವಾದಿ ಮುಹಮ್ಮದರು ಮಾನವೀಯ ಮೌಲ್ಯಗಳನ್ನು ಜಾರಿಗೆ ತಂದ ಮಹಾನ್ ಕ್ರಾಂತಿಕಾರಿ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಧರ್ಮಗಳ ಮುಖಂಡರು, ಗಣ್ಯರು, ಸಂಘಟನೆಯ ಪದಾಧಿಕಾರಿಗಳು ಹಾಗೂ ಸಾವಿರಾರು ಮಂದಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೂ ಮಾಫಿಯಾ, ಬೆದರಿಕೆ ಆರೋಪ: ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟು ಜಾರ್ಖಂಡ್ ಬುಡಕಟ್ಟು ನಾಯಕಿ ಆತ್ಮಹತ್ಯೆ

ಜಾರ್ಖಂಡ್‌ನ ರಾಂಚಿಯಲ್ಲಿ ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ ಮತ್ತು ನಾಯಕಿ ನಿಶಾ ಕುಮಾರಿ...

ದೇಶದ ಭದ್ರತೆಗೆ ಧಕ್ಕೆಯಾದ ಅಗ್ನಿಪಥ್ ಯೋಜನೆ ತಕ್ಷಣವೇ ರದ್ದುಗೊಳಿಸಿ: ಕಾಂಗ್ರೆಸ್ ಆಗ್ರಹ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಶಸ್ತ್ರ ಪಡೆಗಳ 'ಅಗ್ನಿಪಥ್' ನೇಮಕಾತಿ ಯೋಜನೆಯನ್ನು...

ಸರ್ಕಾರಿ ಶಾಲೆ ಮುಚ್ಚುವುದು, ಖಾಸಗೀಕರಣ ಎರಡೂ ಅಪಾಯದ ಸೂಚನೆ; ಅವುಗಳನ್ನು ಉಳಿಸಿ, ಉನ್ನತೀಕರಿಸಬೇಕು! ಏಕೆಂದರೆ…

ಒಂದು ಸರ್ಕಾರಿ ಶಾಲೆ ಮುಚ್ಚಿದಾಗ ಆ ಪ್ರದೇಶದ ಮಕ್ಕಳಿಗೆ ಹತ್ತಿರದಲ್ಲೇ ದೊರೆಯುತ್ತಿದ್ದ...