ವಿಜಯಪುರ | ಪೊಲೀಸರ ವಿರುದ್ಧ ವಕೀಲರ ಪ್ರತಿಭಟನೆ

Date:

ಚಿಕ್ಕಮಗಳೂರಿನ ವಕೀಲ ಪ್ರೀತಮ್ ಎನ್.ಟಿ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ಪಿಎಸ್ಐ ಸೇರಿ ಆರು ಮಂದಿ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಮಂಗಳವಾರ ನ್ಯಾಯಾಲಯದಲ್ಲಿ ಕಲಾಪಗಳನ್ನು ಬಹಿಷ್ಕರಿಸಿ ವಕೀಲರು ಪ್ರತಿಭಟನೆ ನಡೆಸಿದ್ದು, ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಕಾನೂನುಗಳನ್ನು ಗೌರವಿಸುವುದು, ರಕ್ಷಣೆ ಮಾಡುವುದು ಮತ್ತು ಅವುಗಳನ್ನು ಕಾಪಾಡುವ ಜವಾಬ್ದಾರಿ ಪೊಲೀಸರಿಗಿದೆ. ಅದು ಬಿಟ್ಟು ಕಾನೂನು ಕೈಗೆ ತೆಗೆದುಕೊಳ್ಳುವ ಯಾವ ಅಧಿಕಾರವೂ ಪೊಲೀಸರಿಗಿಲ್ಲ. ಚಿಕ್ಕಮಗಳೂರು ವಕೀಲನ ಮೇಲೆ ಅವಾಚ ಶಬ್ದಗಳಿಂದ ನಿಂದಿಸಿರುವ ಪೊಲೀಸರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಸರ್ಕಾರ ಈ ವಿಷಯದಲ್ಲಿ ಸಿಐಡಿ ತನಿಖೆ ಪ್ರಕರಣವಹಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ ತನಿಕಾ ಸಂಸ್ಥೆಯವರು ಆರೋಪಿಗಳು ಪೊಲೀಸರು, ಅಧಿಕಾರಿ ಎಂದು ನೋಡದೆ ನಿಷ್ಪಪಕ್ಷಪಾತವಾಗಿ ತನಿಖೆ ಮಾಡಿ ವಕೀಲರ ಸಂಘಕ್ಕೆ ನ್ಯಾಯ ಕೊಡಿಸಬೇಕು. ಪೊಲೀಸರ ವಿರುದ್ಧ ತನಿಖೆಗೆ ವಿಳಂಬ ಮಾಡಿದ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ದವು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ವಕೀಲರ ಸಂಘದ ಪದಾಧಿಕಾರಿಗಳಾದ ಎಚ್ ಜೆ ನಾಡಗೌಡ, ಪಿ ಬಿ ಗೌಡರ, ಬಿ ಪಿ ಮ್ಯಾಗೇರಿ, ಹಿರಿಯ ವಕೀಲರಾದ ಎಂ ಹೆಚ್ ಹಾಲಣ್ಣವರ್, ಜೆ ಎ ಚಿನಿವಾರ,ಆರ್ ಬಿ ಪಾಟೀಲ, ಬಿ ಆರ್ ನಾಡಗೌಡ, ಎಂ ಎ ಮುದ್ದೇಬಿಹಾಳ, ಎಂ ಎಸ್ ನಾವದಗಿ, ಎಸ್ ಎಂ ಗುಡಿದಿನ್ನಿ, ಬಿ ಎಂ ಮುಂದಿನಮನಿ, ಎಚ್ ವೈ ಪಾಟೀಲ, ಎನ್ ಬಿ ಮುದ್ನಾಳ್, ಎನ್ ಜಿ ಕುಲಕರ್ಣಿ, ಎಂ ಬಿ ಹುಡೆದ, ಎಸ್ ಎಂ ಕಿಣಗಿ, ಎನ್, ಆರ್, ಮೊಕಾಶಿ, ಎಸ್ ಎಂ ಚೇಲ್ಲಳಶೆಟ್ಟರ, ಎಸ್ ಎಂ ಬಾಗಲಕೋಟೆ, ಚೇತನ ಶಿವಶಿಂಪಿ, ಪಿ ಎಂ ಪಾಟೀಲ, ಮಹಾಂತಗೌಡ ಬಿರಾದಾರ, ಕೆ ಬಿ ದೊಡ್ಡಮನಿ, ಹಸೀನಾ ಅನಂತಪುರ, ರಶ್ಮಿ ಕುಲಕರ್ಣಿ, ಆರ್ ಬಿ ಪಾಟೀಲ, ಸಂತೋಷ ಎಚ್ ಎಂ, ಎಚ್ ಎಲ್ ಸರೋರ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...