ಮುದ್ದೇಬಿಹಾಳ | ನಾಡಗೌಡಗೆ ಒಲಿಯದ ಮಂತ್ರಿಗಿರಿ: ಬೆಂಬಲಿಗರಲ್ಲಿ ಅಸಮಾಧಾನ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಿಂದ ಸತತ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿ.ಎಸ್. ನಾಡಗೌಡ ಅವರಿಗೆ ಈ ಬಾರಿಯೂ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದಿರುವುದು ಕ್ಷೇತ್ರದ ಜನರು ಹಾಗೂ ಬೆಂಬಲಿಗರಲ್ಲಿ ತೀವ್ರ ನಿರಾಶೆ ಮೂಡಿಸಿದೆ.

- Advertisement -

ಅನುಭವ, ಹಿರಿತನ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಬಾರಿ ಸಚಿವ ಸ್ಥಾನ ಖಚಿತ ಎಂಬ ನಿರೀಕ್ಷೆ ಕಾರ್ಯಕರ್ತರು ಮತ್ತು ಸಾರ್ವಜನಿಕರಲ್ಲಿ ಇತ್ತು. ಆದರೆ ಸಚಿವ ಸಂಪುಟ ವಿಸ್ತರಣೆಯಲ್ಲಿಯೂ ಅವರ ಹೆಸರು ಕೈಬಿಟ್ಟಿರುವುದು ಬೆಂಬಲಿಗರ ಅಸಮಾಧಾನಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕ ಸಿ.ಎಸ್. ನಾಡಗೌಡ ಪಕ್ಷದ ನಾಯಕರುಗಳ ನಿರ್ಧಾರದ ಕುರಿತು ಅಸಮಾಧಾನಗೊಂಡಿದ್ದು, ತಮ್ಮ ಆಪ್ತರೊಂದಿಗೆ ಸರಣಿ ಚರ್ಚೆಗಳನ್ನು ನಡೆಸುತ್ತಿದ್ದಾರೆ.

ಸರಳ, ಸಜ್ಜನ ಹಾಗೂ ಜನಸ್ನೇಹಿ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಸಿ.ಎಸ್. ನಾಡಗೌಡ, ಕ್ಷೇತ್ರದ ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿದ್ದಾರೆ. ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಿ, ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುವ ನಾಯಕರಾಗಿ ಜನಮನ್ನಣೆ ಗಳಿಸಿದ್ದಾರೆ.

ಇನ್ನೊಂದೆಡೆ, ಮುದ್ದೇಬಿಹಾಳ ಕ್ಷೇತ್ರದ ಕಾರ್ಯಕರ್ತರು ಹಾಗೂ ಬೆಂಬಲಿಗರು, ಸತತ ಏಳು ಬಾರಿ ಗೆಲ್ಲಿಸಿ ಬಂದ ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಕ್ಷೇತ್ರಕ್ಕೆ ಸೂಕ್ತ ಗೌರವ ಸಿಗಲಿಲ್ಲ ಎಂಬ ಬೇಸರವೂ ಕಾರ್ಯಕರ್ತರಲ್ಲಿ ವ್ಯಕ್ತವಾಗುತ್ತಿದೆ.

ಶಾಸಕ ಸಿ.ಎಸ್. ನಾಡಗೌಡ ಅವರ ಮುಂದಿನ ರಾಜಕೀಯ ನಡೆ ಏನಾಗಲಿದೆ ಎಂಬುದರ ಕುರಿತು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿದೆ. ಪಕ್ಷದ ನಾಯಕತ್ವ ಅವರ ಅಸಮಾಧಾನವನ್ನು ಶಮನಗೊಳಿಸಲು ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿಐ ಪಾವತಿಗೆ ಶುಲ್ಕ; ಕೇಂದ್ರ ಸಚಿವರು ಪಿಕ್ ಪಾಕೆಟ್‌ನಲ್ಲಿ ಪಿಎಚ್‌ಡಿ: ಸಿಎಂ ಡಿ ಕೆ ಶಿವಕುಮಾರ್

"ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...