ವಿಜಯಪುರ | ಕುಡಿವ ನೀರಿನ ಸಮಸ್ಯೆ ಪರಿಹರಿಸಲು ಗ್ರಾಮಸ್ಥರ ಆಗ್ರಹ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ರೂಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡಕರ್ಜಗಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದ್ದು, ತಕ್ಷಣ ಪರಿಹಾರ ಕೈಗೊಳ್ಳಲು ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

“ಕುಡಿಯುವ ನೀರಿನ ಸಮಸ್ಯೆ ಕುರಿತು ರೂಡಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಶಾಶ್ವತ ಕ್ರಮ ಕೈಗೊಳ್ಳಲಾಗಿಲ್ಲ. ಅಧಿಕಾರಿಗಳು ಭರವಸೆ ಕೊಡುತ್ತಾರೆಯೇ ವಿನಃ ಪರಿಹಾರ ಕ್ರಮ ಜರುಗಿಸಲಿಲ್ಲ” ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

- Advertisement -

“ಈ ವರ್ಷ ಮಳೆಯ ಕೊರತೆಯಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಮತ್ತಷ್ಟು ಹೆಚ್ಚಾಗಿದೆ. ಗ್ರಾಮಸ್ಥರಲ್ಲಿ ಹೆಚ್ಚಿನವರು ಕೂಲಿ ಕಾರ್ಮಿಕರಾಗಿದ್ದು, ಪ್ರತಿದಿನದ ಜೀವನ ನಿರ್ವಹಣೆಯ ಜೊತೆಗೆ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

“ಕುಡಿಯುವ ನೀರಿನ ಸಮಸ್ಯೆಯನ್ನು ಎರಡು ದಿನಗಳೊಳಗೆ ಬಗೆಹರಿಸಬೇಕು, ಈಗಾಗಲೇ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಖಾಲಿ ಕೊಡಪಾನಗಳನ್ನು ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ನಿಗದಿತ ಅವಧಿಯಲ್ಲಿ ಸಮಸ್ಯೆಗೆ ಪರಿಹಾರ ದೊರೆಯದಿದ್ದಲ್ಲಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಜನರ ಮೂಲಭೂತ ಅಗತ್ಯವಾದ ಕುಡಿಯುವ ನೀರಿನ ಸಮಸ್ಯೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ತಕ್ಷಣ ಅಗತ್ಯ ಕ್ರಮ ಕೈಗೊಂಡು ಗ್ರಾಮಸ್ಥರ ಸಂಕಷ್ಟ ನಿವಾರಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಪ್ರತಿಭಟನೆಯಲ್ಲಿ ಮುದ್ದುರಾಜ, ಸಹನಾ ಚಪ್ಪರಬಂದ್, ಬಸವರಾಜ್ ಛಲವಾದಿ, ಯಲ್ಲವ್ವ ಛಲವಾದಿ, ಶಿವಾನಂದ, ಬಸಲಿಂಗವ್ವ ಬಿರಾದಾರ್, ನಾಗಮ್ಮ ಪೂಜಾರಿ, ಆಲಿಮಾ ಚಪ್ಪರಬಂದ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಪಿಎಲ್‌ಡಿ ಮತ್ತು ಡಿಸಿಸಿ ಬ್ಯಾಂಕ್‌ಗಳ ಪುನಶ್ಚೇತನದಿಂದ ರೈತರಿಗೆ ಹೆಚ್ಚಿನ ಅನುಕೂಲ

ಚಿಂತಾಮಣಿ ತಾಲ್ಲೂಕಿನ ನಂದಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ 2025-26 ನೇ...

ಕೋಲಾರ | ಸಾಲ ಮರುಪಾವತಿಸಿ, ಸಹಕಾರಿ ವ್ಯವಸ್ಥೆ ಉಳಿಸಿ: ಕೊತ್ತೂರು ಮಂಜುನಾಥ್

ರೈತರು ಹಾಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ಮತ್ತೆ ಸಾಲ ಸೌಲಭ್ಯ ಕಲ್ಪಿಸಲು...

ಉತ್ತರ ಕನ್ನಡ | ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ನಾಲ್ವರು ವಶಕ್ಕೆ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಬಿಸಗೋಡ ರಸ್ತೆ ಮಾರ್ಗದಲ್ಲಿರುವ ಸ್ಮಶಾನದ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ ‘ಮೋದಿ ಜಪ’ದ ಸಂಸದರು

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ...