ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) ಸಿಎಸ್‌ಆರ್ ನಿಧಿಯಡಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರಕ್ಕೆ ಎರಡು ಸುಸಜ್ಜಿತ ಅಂಬ್ಯುಲೆನ್ಸ್‌ಗಳನ್ನು ಒದಗಿಸಲಾಗಿದ್ದು, ಶಾಸಕ ಸಿ ಎಸ್ ನಾಡಗೌಡ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ ಎಸ್ ನಾಡಗೌಡ,ಕ್ಷೇತ್ರದ ಜನರಿಗೆ ತುರ್ತು ಸಂದರ್ಭದಲ್ಲಿ ತ್ವರಿತ ವೈದ್ಯಕೀಯ ನೆರವು ದೊರೆಯುವಂತೆ ಈ ಎರಡೂ ಅಂಬ್ಯುಲೆನ್ಸ್‌ಗಳು 24×7 ನಿರಂತರ ಸೇವೆ ಒದಗಿಸಲಿವೆ. ಇದರಿಂದ ಕ್ಷೇತ್ರದ ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ತುರ್ತು ಆರೋಗ್ಯ ಸೇವೆ ಪಡೆಯಲು ಹೆಚ್ಚಿನ ಅನುಕೂಲವಾಗಲಿದೆ ಎಂದರು.
“ಮತಕ್ಷೇತ್ರದ ಜನರ ಆರೋಗ್ಯ ಕಾಪಾಡುವುದು ನನ್ನ ಜವಾಬ್ದಾರಿ. ಅದರಂತೆ ಅಗತ್ಯವಿರುವ ಆರೋಗ್ಯ ಸೌಲಭ್ಯಗಳನ್ನು ಹಂತಹಂತವಾಗಿ ಕಲ್ಪಿಸಲಾಗುತ್ತಿದೆ. ಆರೋಗ್ಯ ಸೇವೆಯ ವಿಷಯದಲ್ಲಿ ಸಾಧ್ಯವಾದಷ್ಟು ಹೆಚ್ಚಿನ ಮುತುವರ್ಜಿ ವಹಿಸಲಾಗುತ್ತಿದೆ” ಎಂದು ಹೇಳಿದರು.
ತುರ್ತು ಆರೋಗ್ಯ ಸೇವೆ ಅಗತ್ಯವಿರುವ ಸಂದರ್ಭದಲ್ಲಿ ಜನರಿಗೆ ತಕ್ಷಣ ಅಂಬ್ಯುಲೆನ್ಸ್ ಸೇವೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದ್ದು, ಎರಡು ಅಂಬ್ಯುಲೆನ್ಸ್‌ಗಳ ಸೇವೆಯಿಂದ ಕ್ಷೇತ್ರದ ಆರೋಗ್ಯ ಸೇವೆಗೆ ಮತ್ತಷ್ಟು ಬಲ ದೊರೆಯಲಿದೆ.
ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹಿತೈಷಿಗಳು ಉಪಸ್ಥಿತರಿದ್ದರು.





