ಮುದ್ದೇಬಿಹಾಳ | ನಾಗರಬೆಟ್ಟ ಯುವಕನ ಹತ್ಯೆ: ಆರೋಪಿಗಳ ಬಂಧನಕ್ಕೆ ಶವ ಇಟ್ಟು ಪ್ರತಿಭಟನೆ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಯುವಕನನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮೃತ ಯುವಕನ ಶವ ಇಟ್ಟು ನಾಲ್ಕು ಗಂಟೆಗಳ ಕಾಲ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.

- Advertisement -

ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಘೋಷಣೆ ಕೂಗಿದರು. ಸ್ಥಳಕ್ಕೆ ಡಿ ವೈ ಎಸ್ ಪಿ ಬಂದು ಭರವಸೆ ನೀಡುವವರೆಗೂ ಪ್ರತಿಭಟನೆ ಮಾಡುತ್ತೇವೆ ಎಂದು ಪಟ್ಟು ಹಿಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ನಾಗರಬೆಟ್ಟ ಗ್ರಾಮದ ಯುವಕ ರವಿಚಂದ್ರ ಮಾದರ್ ನನ್ನು ಬಾಗೇವಾಡಿ ತಾಲೂಕಿನ ಹಂಗರಗಿ ಹತ್ತಿರ ಹತ್ಯೆ ಮಾಡಿ ನೇಣು ಹಾಕಿದ್ದಾರೆ ಎಂದು ಆರೋಪಿಸಿದರು.

ದಲಿತ ಮುಖಂಡರಾದ ಹರೀಶ್ ನಾಟೆಕಾರ, ಚನ್ನಪ್ಪ ವಿಜಯಕರ,ಪ್ರಕಾಶ ಸರೊರ,ತಿಪ್ಪಣ್ಣ ದೊಡ್ಡಮನಿ, ಬಸವರಾಜ ಪೂಜಾರಿ, ಕೆ ಬಿ ದೊಡ್ಡಮನಿ, ಆನಂದ ಮದೂರ ಮಾತನಾಡಿದರು.

ಪ್ರತಿಭಟನಾ ನಿರತರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿದ ಡಿ ವೈ ಎಸ್ ಪಿ, ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಟ್ಟರು.

ಮುಂಜಾಗ್ರತ ಕ್ರಮವಾಗಿ ಸಿಪಿಐ ಮೊಹಮ್ಮದ್ ಫಸಿಯುದ್ದೀನ,ಪಿಎಸ್ಐ ಸಂಜೆಯ ತಿಪ್ಪಾರೆಡ್ಡಿ, ಅಪರಾಧ ವಿಭಾಗದ ಪಿಎಸ್ಐ ಆರ್ ಎಸ್ ಬಂಗಿ, ಸಿಬ್ಬಂದಿ ಸೂಕ್ತ ಬಂದೋಬಸ್ತ್ ಹಮ್ಮಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...