ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ವರ್ಕ್‌ಶಾಪ್ ಕ್ಯಾಲ್ಕುಲೇಷನ್ ಅಂಡ್ ಸೈನ್ಸ್ ಹಾಗೂ ಎಲೆಕ್ಟ್ರಿಷಿಯನ್ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬಿ ಇ ಅಥವಾ ಡಿಪ್ಲೊಮಾ(ಎಲೆಕ್ಟ್ರಿಕಲ್/ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ಹಾಗೂ ಸಂಬಂಧಿತ ಕ್ಷೇತ್ರದಲ್ಲಿ ಅನುಭವವಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ನಾಲತವಾಡದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಸುದ್ದಿ ಓದಿದ್ದೀರಾ? ತುಮಕೂರು | ನೀಟ್ ಹಗರಣ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ವಕೀಲರ ಘಟಕ ಪ್ರತಿಭಟನೆ
ಹೆಚ್ಚಿನ ಮಾಹಿತಿಗಾಗಿ 99861 23893, 90086 92270 ಹಾಗೂ 80503 22980 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





