ನಿಡಗುಂದಿ | ಶಾಲೆ ಮುಂಭಾಗ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಎಸ್‌ಡಿಎಂಸಿ ಆಗ್ರಹ: ತಹಶೀಲ್ದಾರರಿಗೆ ಮನವಿ

Date:

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಪಿಎಂಶ್ರೀ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ ಮುಂಭಾಗದಲ್ಲಿ ನೂತನ ಕಟ್ಟಡ ನಿರ್ಮಾಣ ಕೈಗೊಂಡಿರುವುದನ್ನು ವಿರೋಧಿಸಿ ಎಸ್‌ಡಿಎಂಸಿ ಸದಸ್ಯರು ನಿಡಗುಂದಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

- Advertisement -

ಎಸ್‌ಡಿಎಂಸಿ ಸದಸ್ಯರಾದ ತಿರುಪತಿ ನರಸಪ್ಪ ಬಂಡಿವಡ್ಡರ, ಭೀಮಸಿ ಗುಂಡಿನಮನಿ ಮಾತನಾಡಿ, “ಶಾಲೆಯ ಮುಖ್ಯೋಪಧ್ಯಾಯ ಎಸ್ ಜಿ ಜೋಶಿಯವರು ಎಸ್‌ಡಿಎಂಸಿ, ಸ್ಥಳೀಯ ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ಊರಿನ ಮುಖಂಡರ ಗಮನಕ್ಕೆ ತರದೆ ಏಕಪಕ್ಷೀಯವಾಗಿ ಶಾಲೆಯ ಮುಂಭಾಗದಲ್ಲಿ ಗ್ರಂಥಾಲಯ ಕಟ್ಟಡ ಕಾಮಗಾರಿ ಆರಂಭಿಸಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಮುಂಭಾಗದಲ್ಲಿ ಕಟ್ಟಡ ನಿರ್ಮಿಸಿದರೆ ಹಳೆಯ ಶಾಲೆಯ ಸೌಂದರ್ಯಕ್ಕೆ ಧಕ್ಕೆಯಾಗುತ್ತದೆ. ಜತೆಗೆ ಹಿಂಭಾಗದ ತರಗತಿಗಳು ಮರೆಯಾಗುವ ಸಾಧ್ಯತೆ ಇದ್ದು, ಅಕ್ರಮ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ರಾಜ್ಯದ ಹಲವು ಸರ್ಕಾರಿ ಶಾಲೆಗಳ ಆವರಣದಲ್ಲಿ ಮದ್ಯದ ಬಾಟಲಿಗಳು, ಕಾಂಡೋಮ್‌ ಹಾಗೂ ಇಸ್ಪೀಟ್ ಕಾರ್ಡುಗಳು ಪತ್ತೆಯಾದ ಉದಾಹರಣೆಗಳಿವೆ. ಆದ್ದರಿಂದ ಶಾಲೆಯ ಮುಂಭಾಗದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | 623 ಅಂಕ ಗಳಿಸಿ ರಾಜ್ಯಕ್ಕೆ ಮೂರನೇ ರ‍್ಯಾಂಕ್  ಪಡೆದ ರೈತನ ಮಗಳು

“ಶಾಲೆಯ ಹಿಂಭಾಗದಲ್ಲಿ ಅಥವಾ ಶಾಲಾ ಆವರಣದಲ್ಲಿಯೇ ಬೇರೆ ಸೂಕ್ತ ಸ್ಥಳ ನಿಗದಿಪಡಿಸಿ ಹೊಸ ಕಟ್ಟಡ ನಿರ್ಮಿಸಬೇಕು. ಎಲ್ಲರ ಅಭಿಪ್ರಾಯ ಪಡೆದು ಮುಂದುವರೆಯಬೇಕು. ನಮ್ಮ ಊರಿನ ಶಾಲೆಯ ಗೌರವ ಹಾಗೂ ಸೌಂದರ್ಯ ಉಳಿಸಬೇಕು” ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಭಾರತೀಯ ದಲಿತ ಪ್ಯಾಂಥರ್ ವಿಜಯಪುರ ಜಿಲ್ಲಾಧ್ಯಕ್ಷ ರಾಮಸ್ವಾಮಿ ಕಡಿಮನಿ, ಲಕ್ಷ್ಮಣ ಚಳ್ಳಮರದ, ಗಂಗಾಧರ ಸೌದಾಗರ, ಬಾಬು ತಾಳಿಕೋಟಿ, ಶ್ರೀಶೈಲ ದೊಡ್ಡಮನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...

ಬೀದರ್‌ | ಸಿಇಸಿ ಜ್ಞಾನೇಶ ಕುಮಾರ್ ವಜಾ, ಎಸ್‌ಐಆರ್‌ ರದ್ದತಿಗೆ ಆಗ್ರಹ, ತಿರಂಗಾ ಮೆರವಣಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ರದ್ದುಗೊಳಿಸಬೇಕು, ಕೇಂದ್ರ ಮುಖ್ಯ...

ಶಿವಮೊಗ್ಗ | KSRTC ಬಸ್‌ನ ಟಯರ್ ಸ್ಫೋಟ; ಅನಾಹುತ ತಪ್ಪಿಸಿದ ಚಾಲಕ

ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಬಳಿ KSRTC ಬಸ್‌ನ ಮುಂಭಾಗದ ಟಯರ್ ಬ್ಲಾಸ್ಟ್...