ಡಾ. ಬಿ ಆರ್ ಅಂಬೇಡ್ಕರ್ರವರು ʼಜ್ಞಾನದ ದೈತ್ಯ ಶಕ್ತಿʼಯಾಗಿದ್ದರು. ಎಲ್ಲ ವರ್ಗಗಳ ಸಮಾನತೆಯ ಪ್ರತಿಪಾದಕರಾಗಿದ್ದರು ಎಂದು ಗೊಳಸಂಗಿ ಗ್ರಾಮದ ಚನ್ನಮಲ್ಲಪ್ಪ ಚನ್ನವೀರಪ್ಪ ಹೆಬ್ಬಾಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲ ಪ್ರೊ. ಎಸ್ ಆರ್ ಕುಂಬಾರ ಅವರು ಅಭಿಪ್ರಾಯಪಟ್ಟರು.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ಚನ್ನಮಲ್ಲಪ್ಪ ಚನ್ನವೀರಪ್ಪ ಹೆಬ್ಬಾಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ʼಮನೆ ಮನೆಗೆ, ಮನೆ ಮನಕೆ ಡಾ. ಬಾಬಾ ಸಾಹೇಬರು’ ಅಭಿಯಾನದಲ್ಲಿ ಮಾತನಾಡಿದರು.
ಪ್ರೊ. ಸತೀಶ್ ಪಾಟೀಲ್ ಮಾತನಾಡಿ, “ಭಾರತದ ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿ ಸಂವಿಧಾನ ಶಿಲ್ಪಿ ಎಂಬ ಗೌರವಕ್ಕೆ ಪಾತ್ರರಾದ ಅಂಬೇಡ್ಕರ್ ಅವರು ʼಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವʼ ಎಂಬ ಮಾನವೀಯ ಅಂಶಗಳನ್ನು ಪ್ರತಿಪಾದಿಸುವ ಮೂಲಕ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ್ದಾರೆ” ಎಂದು ಹೇಳಿದರು.
ಗೊಳಸಂಗಿ ಕಾಲೇಜಿನ ಸಭಾ ಭವನದಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ಬೆಳಗಾವಿ, ಡಾ. ಬಿ ಆರ್ ಅಂಬೇಡ್ಕರ್ ಅಧ್ಯಯನ ಪೀಠ ಬೆಳಗಾವಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ, ಕ್ರೀಡಾ ಘಟಕ, ಮಹಿಳಾ ಕೋಶ ಹಾಗೂ ಐಕ್ಯೂಎಸಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆ ಮನೆಗಳಿಗೆ, ಪ್ರತಿಯೊಬ್ಬರ ಮನಕ್ಕೆ ತಲುಪಿಸುವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಇದನ್ನೂ ಓದಿ> ಬೀದರ್ | ತಳ ಸಮುದಾಯಗಳಿಗೆ ಅಸ್ಮಿತೆಯನ್ನು ರೂಪಿಸಿದ ಬಾಬಾಸಾಹೇಬ್ : ಶಿವಾಜಿ ಮೇತ್ರೆ
ಕಾರ್ಯಕ್ರಮದಲ್ಲಿ ಕಾಲೇಜಿನ, ಐ ಕ್ಯೂ ಎ ಸಿ ಘಟಕದ ಸಂಚಾಲಕರು ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಶ್ರೀಶೈಲ ಬಬಲಾದ, ಎನ್ಎಸ್ಎಸ್ ಘಟಕ ಹಾಗೂ ರೆಡ್ ಕ್ರಾಸ್ ವಿಭಾಗದ ಸಂಚಾಲಕ ಪ್ರೊ. ನಂಜುಂಡಸ್ವಾಮಿ, ಸಾಂಸ್ಕೃತಿಕ ಘಟಕ ಹಾಗೂ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಪ್ರೊ. ಮಾಸ್ಟ್ ಅಮಾಪೂರ ಕೂಡ್ಲಿಗಪ್ಪ ಇದ್ದರು.




