ಹಾಲು, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪಕ್ಕೆ ವಿರೋಧ; ವಿಜಯಪುರದಲ್ಲಿ ಎಸ್‌ಯುಸಿಐಸಿ ಪ್ರತಿಭಟನೆ

Date:

ನವೆಂಬರ್ 1ರಿಂದ ಜಾರಿಗೆ ಬರುವಂತೆ ಜಾರಿಗೊಳಿಸಿರುವ, ಪ್ರತಿ ಲೀಟರ್‌ ಹಾಲಿಗೆ ₹8 ಬೆಲೆ ಏರಿಕೆ ಹಾಗೂ ಬಸ್ ಪ್ರಯಾಣ ದರ ಹೆಚ್ಚಳದ ಪ್ರಸ್ತಾಪವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಎಸ್‌ಯುಸಿಐ (ಕಮ್ಯುನಿಸ್ಟ್) ನೇತೃತ್ವದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಯುಸಿಐ(ಸಿ) ಜಿಲ್ಲಾ ಕಾರ್ಯದರ್ಶಿ ಬಿ. ಭಗವಾನ್ ರೆಡ್ಡಿ, “ಹಾಲು ಪ್ರತಿಯೊಂದು ಕುಟುಂಬದ ನಿತ್ಯಬಳಕೆಯ ಅತ್ಯಗತ್ಯ ಆಹಾರ ಪದಾರ್ಥವಾಗಿದೆ. ಮಕ್ಕಳು, ವಿದ್ಯಾರ್ಥಿಗಳು, ವೃದ್ಧರು ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರು ಹಾಲನ್ನು ಅವಲಂಬಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಹಾಲಿನ ಬೆಲೆ ಹೆಚ್ಚಳ ಮಾಡುವುದು ಜನಸಾಮಾನ್ಯರ ಬದುಕಿನ ಮೇಲೆ ನೇರ ಪರಿಣಾಮ ಬೀರುತ್ತದೆ. ಅದೇ ರೀತಿ ಬಸ್ ಪ್ರಯಾಣ ದರ ಏರಿಕೆಯಿಂದ ಪ್ರತಿದಿನ ಸಾರಿಗೆ ಅವಲಂಬಿಸುವ ಜನರು ಹಾಗೂ ಕಾರ್ಮಿಕರ ಜೇಬಿಗೆ ಕತ್ತರಿ ಬೀಳಲಿದೆ. ಸಾರಿಗೆ ಒಂದು ಸೇವಾ ಕ್ಷೇತ್ರವಾಗಿದ್ದು, ಅದನ್ನು ಕೇವಲ ಲಾಭದ ದೃಷ್ಟಿಯಿಂದ ನೋಡಬಾರದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ರಾಜ್ಯದಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹಾಲಿನ ದರದಲ್ಲಿ ಪ್ರತಿ ಲೀಟರ್‌ಗೆ ₹8 ಹೆಚ್ಚಳ ಹಾಗೂ ಬಸ್ ಪ್ರಯಾಣ ದರ ಏರಿಕೆಯ ಪ್ರಸ್ತಾಪ ಜನಸಾಮಾನ್ಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೊರಿಸಲಿದೆ. ಪ್ರತಿದಿನ ಹಾಲು ಖರೀದಿಸುವ ಲಕ್ಷಾಂತರ ಕುಟುಂಬಗಳ ಮಾಸಿಕ ವೆಚ್ಚ ಹೆಚ್ಚಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸರ್ಕಾರ ಹಾಲು ಉತ್ಪಾದಕರು ಮತ್ತು ಗ್ರಾಹಕರ ಹಿತವನ್ನು ಸಮಾನವಾಗಿ ಪರಿಗಣಿಸಬೇಕು. ಹೈನುಗಾರರಿಗೆ ಮೇವು, ಪಶು ಆಹಾರ ಸೇರಿದಂತೆ ಅಗತ್ಯ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸಬೇಕು. ಕೆಎಂಎಫ್‌ನಲ್ಲಿನ ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು. ಸಂಕಷ್ಟದಲ್ಲಿರುವ ಹೈನುಗಾರರ ಸಮಸ್ಯೆಗಳಿಗೆ ಪರ್ಯಾಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಗತಿಪರ ಸಂಘಟನೆಗಳ ವೇದಿಕೆಯ ಮುಖಂಡ ಅಕ್ರಂ ಮಾಶ್ಯಾಳ ಮಾತನಾಡಿ, “ಅಡುಗೆ ಅನಿಲ, ಅಡುಗೆ ಎಣ್ಣೆ, ಸಕ್ಕರೆ, ಬೇಳೆಕಾಳುಗಳು ಹಾಗೂ ತರಕಾರಿಗಳ ಬೆಲೆ ಏರಿಕೆಯಿಂದ ಈಗಾಗಲೇ ಬಡವರು, ಕಾರ್ಮಿಕರು, ರೈತರು ಮತ್ತು ಮಧ್ಯಮ ವರ್ಗದ ಕುಟುಂಬಗಳು ತತ್ತರಿಸಿವೆ. ಇಂತಹ ಸಂದರ್ಭದಲ್ಲಿ ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಳ ಗಾಯದ ಮೇಲೆ ಬರೆ ಎಳೆದಂತಾಗಲಿದೆ” ಎಂದರು.

ಇದನ್ನೂ ಓದಿ: ವಿಜಯಪುರ |ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ನ.30ರವರೆಗೆ ಅವಕಾಶ

ಕಾರ್ಮಿಕ ಸಂಘಟನೆಯ ಜಿಲ್ಲಾ ಮುಖಂಡ ಎಚ್ ಟಿ ಮಲ್ಲಿಕಾರ್ಜುನ ಮಾತನಾಡಿ, “ಉತ್ಪಾದನಾ ವೆಚ್ಚ ಕಡಿಮೆ ಮಾಡುವ ಬದಲಿಗೆ ದರ ಹೆಚ್ಚಳವನ್ನೇ ಪರಿಹಾರವೆಂದು ಪರಿಗಣಿಸಿದರೆ ಜನರು ಹಣದುಬ್ಬರದ ವಿಷಚಕ್ರಕ್ಕೆ ಸಿಲುಕಬೇಕಾಗುತ್ತದೆ. ಹಾಲು ಮಕ್ಕಳಿಂದ ಹಿಡಿದು ಎಲ್ಲರಿಗೂ ಅಗತ್ಯವಾದ ಪೌಷ್ಟಿಕ ಆಹಾರವಾಗಿದ್ದು, ಸರ್ಕಾರ ತನ್ನ ಬೆಲೆ ಏರಿಕೆ ನಿರ್ಧಾರದಿಂದ ತಕ್ಷಣ ಹಿಂದೆ ಸರಿಯಬೇಕು” ಎಂದು ಒತ್ತಾಯಿಸಿದರು.

ಎಸ್‌ಯುಸಿಐ(ಸಿ) ಸದಸ್ಯ ಭರತ್ ಕುಮಾರ ಎಚ್.ಟಿ., ಸತ್ಯಶೋಧಕ ಅಣ್ಣ ಭಾವು ಸಾಟೆ ಸಂಘಟನೆಯ ಸೋಮು ರಣದೀವೆ ಹಾಗೂ ಎಐಎಂಎಂಎಸ್‌ನ ಜಿಲ್ಲಾ ನಾಯಕಿ ಶಿವಬಾಳಮ್ಮ ಕೊಂಡಗೂಳಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದರು.

ಎಸ್‌ಯುಸಿಐ(ಸಿ) ಸದಸ್ಯ ಸಿದ್ದಲಿಂಗ ಬಾಗೇವಾಡಿ ಪ್ರತಿಭಟನಾ ಸಭೆ ನಡೆಸಿಕೊಟ್ಟರು. ಹಿರಿಯರಾದ ಬಾಬುರಾವ್ ಬೀರಕಬ್ಬಿ, ಪೀಠಾ ಜಮಾದಾರ, ಗಂಗಪ್ಪ ಕವಡಿ, ಮಾದೇವಪ್ಪ ಲಿಗಾಡೆ, ಸಂಘಟನಾಕಾರರಾದ ಶ್ರೀಕಾಂತ ಕೊಂಡಗೂಳಿ, ಶಿವರಂಜನಿ ಎಸ್.ಬಿ. ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜವಳಿ ಉತ್ಪನ್ನಗಳ ರಫ್ತು ಹೆಚ್ಚಿಸಲು ಕೊಡಗಿನಲ್ಲಿ ಕಾರ್ಯಾಗಾರ

ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದೊಂದಿಗೆ ಉತ್ಪಾದಿಸಿ ವಿದೇಶಗಳಿಗೆ ರಫ್ತು ಮಾಡುವ...

ಅಂಕೋಲಾ | ಲಾರಿಯನ್ನು ಅಡ್ಡಗಟ್ಟಿ ಚಾಲಕನಿಗೆ ಬೆದರಿಕೆ: 7 ಮಂದಿ ವಿರುದ್ಧ ದೂರು ದಾಖಲು

ಜೆಲ್ಲಿ ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಕ್ರೇಟಾ ಕಾರಿನಲ್ಲಿ ಬಂದ ಐವರು ಅಡ್ಡಗಟ್ಟಿ,...

ಮಂಡ್ಯ | ಸಕಾಲಕ್ಕೆ ಸರ್ಕಾರಿ ಬಸ್ ಕಲ್ಪಿಸುವಂತೆ ಗ್ರಾಮಸ್ಥರ ಆಗ್ರಹ

ಗ್ರಾಮೀಣ ಭಾಗಗಳಲ್ಲಿ ಸರ್ಕಾರಿ ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸದೆ ಇರುವುದರಿಂದ ವಿದ್ಯಾರ್ಥಿಗಳು,...

ಕಲಬುರಗಿ SIR | ಬದುಕಿದ್ದರೂ ಮತದಾರರ ಪಟ್ಟಿಯಲ್ಲಿ ಅಸ್ತಿತ್ವವೇ ಇಲ್ಲ; ಅರ್ಹರ ಮತದಾನದ ಹಕ್ಕಿಗೆ ಕತ್ತರಿ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು...