KEA ನೇಮಕಾತಿ ಅಧಿಸೂಚನೆಗೆ ವಿದ್ಯಾರ್ಥಿಗಳ ಆಕ್ರೋಶ: ಧರಣಿಗೆ ಸಿದ್ಧಲಿಂಗ ಬಾಗೇವಾಡಿ ಬೆಂಬಲ

Date:

ಕೃಷಿ ಇಲಾಖೆ ಕೃಷಿ ಅಧಿಕಾರಿ (ಎಒ) ಹಾಗೂ ಸಹಾಯಕ ಕೃಷಿ ಅಧಿಕಾರಿ (ಎಎಒ) ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿನ ದೋಷಗಳನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಕೃಷಿ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳ ಹೋರಾಟಕ್ಕೆ ಎಐಡಿವೈಒ (AIDYO) ರಾಜ್ಯ ಕಾರ್ಯದರ್ಶಿ ಸಿದ್ಧಲಿಂಗ ಬಾಗೇವಾಡಿ ಬೆಂಬಲ ವ್ಯಕ್ತಪಡಿಸಿದರು.

- Advertisement -

ವಿಜಯಪುರದ ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲೇಜಿನ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೇ 30, 2026ರಂದು ಪ್ರಕಟಿಸಿದ್ದ ಅಧಿಸೂಚನೆಯನ್ನು ನಂತರ ಎರಡು ಬಾರಿ ತಿದ್ದುಪಡಿ ಮಾಡಿರುವ ಕ್ರಮ ಪ್ರಶ್ನಾರ್ಹವಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“ತಿದ್ದುಪಡಿ ಅಧಿಸೂಚನೆಯಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಮಾನ್ಯತೆ ಪಡೆಯದ ಖಾಸಗಿ ರೈ ಟೆಕ್ನಾಲಜಿ ಯುನಿವರ್ಸಿಟಿಯ ಕೃಷಿ ಪದವೀಧರರು ಹಾಗೂ ಬಿ.ಇ. (ಬಯೋಟೆಕ್ನಾಲಜಿ) ಪದವೀಧರರಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿರುವುದು ನ್ಯಾಯಸಮ್ಮತವಲ್ಲ” ಎಂದು ಅವರು ಆಕ್ಷೇಪಿಸಿದರು.

“ಹಲವು ವರ್ಷಗಳ ಬಳಿಕ ಕೃಷಿ ಇಲಾಖೆಯಲ್ಲಿ 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ನಡೆಯುತ್ತಿರುವ ಸಂದರ್ಭದಲ್ಲಿ, 2022ರಲ್ಲಿ ರಾಜ್ಯ ಸರ್ಕಾರ ಪ್ರಕಟಿಸಿದ್ದ ವೃಂದ ಮತ್ತು ನೇಮಕಾತಿ (ಸಿ&ಆರ್) ಗೆಜೆಟ್‌ನಲ್ಲಿ ಇಲ್ಲದಿದ್ದ ಅರ್ಹತೆಗಳನ್ನು ಏಕಾಏಕಿ ಸೇರಿಸಿರುವುದು ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡಿದ ಸಾವಿರಾರು ಪದವೀಧರರಿಗೆ ಅನ್ಯಾಯವಾಗಿದೆ” ಎಂದು ಆರೋಪಿಸಿದರು.

“ನೇಮಕಾತಿ ಪ್ರಕ್ರಿಯೆ ಆರಂಭವಾದ ಬಳಿಕ ಅಧಿಸೂಚನೆಯಲ್ಲಿ ತಿದ್ದುಪಡಿ ಮಾಡಿರುವುದು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನ ಉಲ್ಲಂಘನೆಯಾಗಿದ್ದು, ನೇಮಕಾತಿಯ ಸ್ಥಾಪಿತ ವಿಧಾನಗಳು ಹಾಗೂ ನಿಯಮಾವಳಿಗಳಿಗೆ ವಿರುದ್ಧವಾಗಿದೆ. ಸರ್ಕಾರವೇ 2022ರಲ್ಲಿ ಹೊರಡಿಸಿದ್ದ ಗೆಜೆಟ್‌ನ ನಿಯಮಗಳನ್ನು ಹಾಗೂ ತಜ್ಞರ ಸಮಿತಿ ಶಿಫಾರಸುಗಳನ್ನು ಉಲ್ಲಂಘಿಸಿರುವುದು ಗಂಭೀರ ವಿಚಾರವಾಗಿದೆ” ಎಂದು ಅವರು ಹೇಳಿದರು.

ಸರ್ಕಾರವು ಕೂಡಲೇ ನೇಮಕಾತಿ ಅಧಿಸೂಚನೆಯಲ್ಲಿನ ಗೊಂದಲಗಳನ್ನು ನಿವಾರಿಸಿ, ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡಬೇಕು. ಜೊತೆಗೆ ಕೃಷಿ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಿದ್ಧಲಿಂಗ ಬಾಗೇವಾಡಿ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ

ಕಲಬುರಗಿ ನಗರದ ಎಸ್.ಬಿ.ಕಾಲೇಜು ಸಮೀಪದ ರಾಮನಗರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಯುವಕನೊಬ್ಬನನ್ನು...

12 ವರ್ಷಗಳ ಆಡಳಿತದ ಕೊಡುಗೆ: ಮೋದಿ ಜನ್ಮದಿನದಂದು ಸರ್ಕಾರಿ ಶಾಲೆ ಗಿಫ್ಟ್ ನೀಡಿದ ಸಿಜೆಪಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ, 'ಕಾಕ್ರೋಚ್ ಜನತಾ...

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...

ಬೀದರ್‌ | ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21ರಂದು ನಡೆಯಲಿರುವ ಧಮ್ಮ ಚಕ್ರ ಪ್ರವರ್ತನ...