ರಾಜ್ಯಮಟ್ಟದ ಕಿರಿಯ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ವಿಜಯಪುರ ಜಿಲ್ಲಾ ತಂಡವನ್ನು ಆಯ್ಕೆ ಮಾಡುವ ಉದ್ದೇಶದಿಂದ ಜಿಲ್ಲಾ ಕಿರಿಯ ಅಥ್ಲೆಟಿಕ್ಸ್ ಕ್ರೀಡಾಪಟುಗಳ ಆಯ್ಕೆ(ಸೆಲೆಕ್ಷನ್) ಶಿಬಿರವನ್ನು ಆಗಸ್ಟ್ 2ರಂದು ಬೆಳಿಗ್ಗೆ 9.30ಕ್ಕೆ ನಗರದ ಡಾ. ಬಿ ಆರ್ ಅಂಬೇಡ್ಕರ ಕ್ರೀಡಾಂಗಣದ ಅಥ್ಲೆಟಿಕ್ಸ್ ಟ್ರ್ಯಾಕ್‌ನಲ್ಲಿ ಆಯೋಜಿಸಲಾಗಿದೆ.
ವಿಜಯಪುರ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಈ ಆಯ್ಕೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಆಗಸ್ಟ್ 12 ಮತ್ತು 13ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಿರಿಯ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಜಿಲ್ಲೆಯ ತಂಡವನ್ನು ಇದೇ ಶಿಬಿರದ ಮೂಲಕ ಅಂತಿಮಗೊಳಿಸಲಾಗುತ್ತದೆ.
ಜಿಲ್ಲೆಯ ಅರ್ಹ ಕಿರಿಯ ಅಥ್ಲೆಟಿಕ್ಸ್ ಕ್ರೀಡಾಪಟುಗಳು ಕಡ್ಡಾಯವಾಗಿ ಆಯ್ಕೆ ಶಿಬಿರದಲ್ಲಿ ಭಾಗವಹಿಸುವಂತೆ ಅಸೋಸಿಯೇಷನ್ ಮನವಿ ಮಾಡಿದೆ. ಶಿಬಿರಕ್ಕೆ ಆಗಮಿಸುವ ಕ್ರೀಡಾಪಟುಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗುವಂತೆ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕರಾವಳಿ ಭಾಗಗಳಲ್ಲಿ ಭಾರೀ ಮಳೆ: ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಹೆಚ್ಚಿನ ಮಾಹಿತಿಗಾಗಿ ಖಜಾಂಚಿ ಎಸ್ ಎಂ ಲೋಣಿ (7204115107), ಜಂಟಿ ಕಾರ್ಯದರ್ಶಿ ಜಿ ಬಿ ಬುಟಾಡ (9620365980), ಕೋಚ್ ಮಹಮ್ಮದ್ ಪೀರ್ಜಾದೆ (9739531383), ಕಿರಣ ರಾಠೋಡ (9591386706) ಹಾಗೂ ಗೌತಮ್ ಕಸಬಗಿ (8951263669) ಅವರನ್ನು ಸಂಪರ್ಕಿಸಬಹುದಾಗಿದೆ.




