ಸಿಂದಗಿ | ಫೆ.26ಕ್ಕೆ ʼಬೆರಗು ಪ್ರಶಸ್ತಿʼ ಪ್ರದಾನ; 25 ಪುಸ್ತಕ ಬಿಡುಗಡೆ ಸಮಾರಂಭ

Date:

ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್ ಜಿ ಪದವಿ ಪೂರ್ವ ಕಾಲೇಜು ಸಭಾಭವನದಲ್ಲಿ ಫೆ.26ರಂದು ಬೆಳಗ್ಗೆ 10 ಗಂಟೆಗೆ ಬೆರಗು ಪ್ರಕಾಶನ ಕೊಡಮಾಡುವ ಈ ವರ್ಷದ ʼಬೆರಗು ಪ್ರಶಸ್ತಿʼ ಪ್ರದಾನ ಸಮಾರಂಭ ಹಾಗೂ 25 ಪುಸ್ತಕಗಳ ಬಿಡುಗಡೆ ಸಮಾರಂಭ ನಡೆಯಲಿದೆ.

- Advertisement -

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಅಶೋಕ ಮನಗೂಳಿ ಸಮಾರಂಭ ಉದ್ಘಾಟಿಸಲಿದ್ದು, ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷೆ ಮಾನಸ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಪ್ರಶಸ್ತಿ ಪುರಸ್ಕೃತ ಪುಸ್ತಕಗಳನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಬಿಡುಗಡೆ ಮಾಡುವವರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆನಿರ್ದೇಶಕ ಪ್ರೊ. ಎಚ್‌ ಟಿ ಪೋತೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಸಿಂದಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಎಸ್ ಎಸ್‌ ಹಳೇಮನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬೆರಗು ಪ್ರಕಾಶನ ಸಂಸ್ಥೆ ಅಧ್ಯಕ್ಷೆ ವಿಜಯಲಕ್ಷ್ಮೀ ಕತ್ತಿ, ಪ್ರಾಚಾರ್ಯ ಎ ಆ‌ರ್ ಹೆಗ್ಗನದೊಡ್ಡಿ ಗೌರವ ಉಪಸ್ಥಿತಿ ವಹಿಸಿಕೊಳ್ಳುವರು ಎಂದು ಬೆರಗು ಪ್ರಕಾಶನ ತಿಳಿಸಿದೆ.

ಇದನ್ನೂ ಓದಿ: ವಿಜಯಪುರ | ಮಹಿಳಾ ವಿವಿಯಲ್ಲಿ ರಾಜ್ಯಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

ಪ್ರಶಸ್ತಿಗೆ ಆಯ್ಕೆಯಾದವರ ವಿವರ:

ದಿವಂಗತ ಎಂ ಸಿ ಮನಗೂಳಿ ಸ್ಮರಣಾರ್ಥ ದತ್ತಿ ಅತ್ಯುತ್ತಮ ಪ್ರಕಾಶನ ಪ್ರಶಸ್ತಿ- ಅಂಕಿತ ಪ್ರಕಾಶನ ಬೆಂಗಳೂರು, ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿ- ಕಲಬುರಗಿಯ ಸಾಹಿತಿ ಶ್ರೀಶೈಲ ನಾಗರಾಳ, ಪ್ರೊ. ಎಚ್‌ ಟಿ ಪೋತೆ ರಾಜ್ಯಮಟ್ಟದ ಹಸ್ತಪ್ರತಿ ಪುರಸ್ಕಾರ ಪ್ರಶಸ್ತಿ-ಅನುವಾದಿತ ಕೃತಿ ‘ಯುದ್ಧಮೃದಂಗ'(ಲೇಖಕ ದೇವೂ ಮಾಕೊಂಡ ಸಿಂದಗಿ), ದಿವಂಗತ ಯಮುನಾ ಬಾಯಿ ರಾಜಣ್ಣಭೋವಿ ಸ್ಮರಣಾರ್ಥದತ್ತಿ ರಾಜ್ಯಮಟ್ಟದ ಬೆರಗು ಪುಸ್ತಕ ಪ್ರಶಸ್ತಿ- ಕೃತಿ ‘ಅಪ್ಪನ ಆಟೋಗ್ರಾಫ್’ (ಲೇಖಕ ಅನಂತ ಕುಣಿಗಲ್ ತುಮಕೂರು), ಶಂಕರ ಬೈಚಬಾಳ ರಾಜ್ಯಮಟ್ಟದ ಸೃಜನೇತರ ಸಾಹಿತ್ಯ ಪ್ರಶಸ್ತಿ- ಕೃತಿ ʼಸಮುದ್ರ ತೆರೆಸರಿಸಿʼ (ಲೇಖಕಿ ಪದ್ಮಿನಿ ನಾಗರಾಜು ಬೆಂಗಳೂರು), ಕೃತಿ-ಸುರದೇನು (ಲೇಖಕ ಮಹಾದೇವ ಬಸರಕೋಡ ಬಾಗಲಕೋಟೆ), ಪ್ರೊ. ಎಚ್ ಟಿ ಪೋತೆ ಸೃಜನಶೀಲ ಸಾಹಿತ್ಯ ಪ್ರಶಸ್ತಿ- ಕೃತಿ ʼಲಚಮವ್ವ ಮತ್ತು ಇತರೆ ಕತೆಗಳುʼ (ಲೇಖಕಿ ಸುಜಾತಾ ಚಲವಾದಿ ತಾಳಿಕೋಟೆ).

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ‘ಜಲಜೀವನ್ ಮಿಷನ್’ ಕಾಮಗಾರಿ ಪೂರ್ಣಗೊಳಿಸಲು ಡಿಸೆಂಬರ್‌ ಗಡುವು

ಗ್ರಾಮೀಣ ಭಾಗದಲ್ಲಿ ಬೇಸಿಗೆ ಸೇರಿದಂತೆ ಯಾವುದೇ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...