ಸಿಂದಗಿ | ರಾಜಸ್ಥಾನ ಅತ್ಯಾಚಾರ ಪ್ರಕರಣ ಖಂಡನೆ: ಕಠಿಣ ಶಿಕ್ಷೆ ಆಗ್ರಹಿಸಿ ಪ್ರತಿಭಟನೆ

Date:

ರಾಜಸ್ಥಾನದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಸ್ಫೂರ್ತಿ ಮಹಿಳಾ ಸಂಘಗಳ ಒಕ್ಕೂಟ, ಜನವೇದಿಕೆ, ಸಿಂಧು ತಾಯಿ ಒಕ್ಕೂಟ, ಸಿಂದಗಿಯಲ್ಲಿ ಪ್ರತಿಭಟನೆ ನಡೆಸಿ, ಉಪ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

- Advertisement -

ಪ್ರತಿಭಟನಾಕಾರರು ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗೆ ಸರ್ಕಾರ ಅತ್ಯುನ್ನತ ಆದ್ಯತೆ ನೀಡಬೇಕು. ಪ್ರಕರಣದ ತನಿಖೆಯನ್ನು ತ್ವರಿತಗೊಳಿಸಿ ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸಂಘದ ಸದಸ್ಯೆಯರಾದ ನೀಲ್ಲಮ್ಮ ಯಾಡ್ರಾಮಿ ಮತ್ತು ಅಂಬಿಕಾ ಮಾಲಿಬಿರಾದಾರ ಮಾತನಾಡಿ, “ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ಯಾವುದೇ ಕಾರಣಕ್ಕೂ ಸಹಿಸಬಾರದು. ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಸಮಾಜಕ್ಕೆ ಸ್ಪಷ್ಟ ಸಂದೇಶ ನೀಡಬೇಕು. ಪರೀಕ್ಷಾ ಅಕ್ರಮಗಳಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗದಂತೆ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸ್ಫೂರ್ತಿ ಮಹಿಳಾ ಸಂಘಗಳ ಒಕ್ಕೂಟದ ಸದಸ್ಯೆ ಪ್ರತಿಭಾ ಚಳ್ಳಗಿ, “ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತ್ಯೇಕ ಮನವಿಯನ್ನೂ ಸಲ್ಲಿಸಲಾಗಿದೆ” ಎಂದು ತಿಳಿಸಿದರು.

ಪರೀಕ್ಷಾ ಅಕ್ರಮಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುತ್ತಿದ್ದು, ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆ ಕುಸಿಯುತ್ತಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.

ಮಹಿಳೆಯರ ಸುರಕ್ಷತೆ, ವಿದ್ಯಾರ್ಥಿನಿಯರ ರಕ್ಷಣೆ ಹಾಗೂ ನ್ಯಾಯಯುತ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ನಾಗರಿಕರೂ ಜಾಗೃತರಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಕರೆ ನೀಡಿದರು.

ಪ್ರತಿಭಟನೆಯಲ್ಲಿ ಸ್ಫೂರ್ತಿ ಮಹಿಳಾ ಸಂಘಗಳ ಒಕ್ಕೂಟ, ಸಿಂಧು ತಾಯಿ ಒಕ್ಕೂಟ, ಜನವೇದಿಕೆ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...