ಸಿಂದಗಿ | ರಾಷ್ಟ್ರಧ್ವಜ ದೇಶದ ಸ್ವಾತಂತ್ರ್ಯ, ಸಾರ್ವಭೌಮತ್ವದ ಪ್ರತೀಕ: ಎ ಆರ್ ಹೆಗ್ಗಣದೊಡ್ಡಿ

Date:

ರಾಷ್ಟ್ರಧ್ವಜವು ದೇಶದ ಸ್ವಾತಂತ್ರ್ಯ, ಸಾರ್ವಭೌಮತ್ವ, ಏಕತೆ, ಸಂಸ್ಕೃತಿ ಹಾಗೂ ಮೌಲ್ಯಗಳನ್ನು ಪ್ರತಿಬಿಂಬಿಸುವ ಶ್ರೇಷ್ಠ ರಾಷ್ಟ್ರೀಯ ಸಂಕೇತವಾಗಿದೆ ಎಂದು ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಎಚ್ ಜಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎ ಆರ್ ಹೆಗ್ಗಣದೊಡ್ಡಿ ಹೇಳಿದರು.

- Advertisement -

ವಿಜಯಪುರದ ಭಾರತ್ ಸೇವಾದಳ ಜಿಲ್ಲಾ ಸಮಿತಿ, ಸಿಂದಗಿ ತಾಲೂಕು ಸಮಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಎಚ್ ಜಿ ಪದವಿಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದೊಂದಿಗೆ ಕಾಲೇಜಿನ ಸಭಾಭವನದಲ್ಲಿ ಆಯೋಜಿಸಿದ್ದ ʼರಾಷ್ಟ್ರಧ್ವಜ ಅಂಗೀಕಾರ ದಿನಾಚರಣೆʼ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ಸ್ವಾತಂತ್ರ್ಯ ಹೋರಾಟಗಾರ ಪಿಂಗಳಿ ವೆಂಕಯ್ಯ ವಿನ್ಯಾಸಗೊಳಿಸಿದ ಭಾರತದ ರಾಷ್ಟ್ರಧ್ವಜವನ್ನು 1947ರ ಜುಲೈ 22ರಂದು ಸಂವಿಧಾನ ಸಭೆ ಅಧಿಕೃತವಾಗಿ ಅಂಗೀಕರಿಸಿತು. ಸ್ವತಂತ್ರ ರಾಷ್ಟ್ರಕ್ಕೆ ತನ್ನದೇ ಆದ ರಾಷ್ಟ್ರೀಯ ಗುರುತು ಅಗತ್ಯವಾಗಿದ್ದು, ಅದರ ಪ್ರಮುಖ ಸಂಕೇತವೇ ರಾಷ್ಟ್ರಧ್ವಜವಾಗಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾರತ್ ಸೇವಾದಳದ ವಲಯ ಸಂಘಟಕ ನಾಗೇಶ್ ಡೋಣೂರ ಅವರು ರಾಷ್ಟ್ರಧ್ವಜದ ಇತಿಹಾಸ, ಧ್ವಜ ನೀತಿ ಸಂಹಿತೆ ಹಾಗೂ ಧ್ವಜ ಬಳಕೆಯ ನಿಯಮಗಳ ಕುರಿತು ಮಾಹಿತಿ ನೀಡಿದರು. ಜತೆಗೆ ರಾಷ್ಟ್ರಧ್ವಜವನ್ನು ಸರಿಯಾದ ರೀತಿಯಲ್ಲಿ ಕಟ್ಟುವುದು, ಹಾರಿಸುವುದು ಹಾಗೂ ಮಡಚುವ ವಿಧಾನವನ್ನು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಪ್ರಾಯೋಗಿಕವಾಗಿ ಪ್ರದರ್ಶಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಯುವಜನರಲ್ಲಿ ಮೆದುಳು ಸಂಬಂಧಿತ ಕಾಯಿಲೆಗಳ ಏರಿಕೆ ಆತಂಕಕಾರಿ: ತಜ್ಞರ ಎಚ್ಚರಿಕೆ

ಕಾರ್ಯಕ್ರಮದಲ್ಲಿ ಸೇವಾದಳ ಜಿಲ್ಲಾ ಸಮಿತಿ ಸದಸ್ಯ ಎಸ್.ಡಿ. ಕುಂಬಾರ, ತಾಲೂಕು ಸಂಘಟಕ ಡಿ.ಸಿ. ಜಾಧವ್, ಸಂಪನ್ಮೂಲ ಶಿಕ್ಷಕ ಆರ್.ಆರ್. ನಿಂಬಾಳ್ಕರ್, ಎಚ್.ಜಿ. ಮಹಿಳಾ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯೆ ರೋಹಿಣಿ ನ್ಯಾಮಗೌಡ ಸೇರಿದಂತೆ ಹಲವರು ಇದ್ದರು.

ಉಪನ್ಯಾಸಕಿ ಐಶ್ವರ್ಯ ಹೊಸಮನಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಎಂ.ಎನ್. ಅಜ್ಜಪ್ಪ ಸ್ವಾಗತಿಸಿದರು. ಉಪನ್ಯಾಸಕ ಹಾಗೂ ಸೇವಾದಳ ಘಟಕದ ಅಧಿಕಾರಿ ಸತೀಶ್ ಬಸರಕೋಡ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಜಾ ಸೇವನೆ ಆರೋಪ: 19 ವರ್ಷದ ಯುವಕನ ಬಂಧನ

ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾಕೀಜಾ ಸಮೀಪದ ಸಾರ್ವಜನಿಕ ಸ್ಥಳದಲ್ಲಿ...

ಕಲಬುರಗಿ | 20 ಪ್ರಕರಣಗಳ ಆರೋಪಿಗೆ ಗುಂಡಾ ಕಾಯ್ದೆ ಅಡಿ ಬಂಧನ

ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಸೇರಿದಂತೆ...

ವಿಜಯಪುರ |ಆಲಮಟ್ಟಿಯಿಂದ ನೀರು ಹರಿಸುವುದನ್ನು ನಿಲ್ಲಿಸಿ; ಇಲ್ಲದಿದ್ದರೆ ಜಲಾಶಯಕ್ಕೆ ಇಳಿದು ಪ್ರತಿಭಟನೆ:ಅರವಿಂದ ಕುಲಕರ್ಣಿ ಎಚ್ಚರಿಕೆ

ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಪ್ರತಿದಿನ...

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...