ಸಿಂದಗಿ | ಮಹಿಳೆಯರು ಸಂವಿಧಾನಬದ್ಧ ಹಕ್ಕುಗಳ ಅರಿವು ಹೊಂದಬೇಕು: ವಕೀಲ ವಿನಾಯಕ ಬಡಗೇರ

Date:

ಗ್ರಾಮೀಣ ಮಹಿಳೆಯರು ತಮ್ಮ ಸಂವಿಧಾನಬದ್ಧ ಹಕ್ಕುಗಳ ಬಗ್ಗೆ ಸಂಪೂರ್ಣ ಅರಿವು ಹೊಂದಬೇಕು. ಅನ್ಯಾಯದ ವಿರುದ್ಧ ಧೈರ್ಯವಾಗಿ ಹೋರಾಡಬೇಕು ಎಂದು ವಕೀಲ ವಿನಾಯಕ ಬಡಗೇರ ಹೇಳಿದರು.

- Advertisement -

ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ, ಸಿಂದಗಿ ವತಿಯಿಂದ ಶುಕ್ರವಾರ ಆಯೋಜಿಸಿದ ಗ್ರಾಮೀಣ ಸ್ವ-ಉದ್ಯೋಗ ಹಾಗೂ ಮಹಿಳಾ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಮಹಿಳೆಯರ ಸಂವಿಧಾನಬದ್ಧ ಹಕ್ಕುಗಳು, ಗೃಹ ಹಿಂಸೆ ತಡೆ ಕಾಯಿದೆ, ವರದಕ್ಷಿಣೆ ನಿಷೇಧ ಕಾಯಿದೆ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಾನೂನು ನೆರವು ಪಡೆಯುವ ವಿಧಾನ, ಉಚಿತ ಕಾನೂನು ಸೇವೆಗಳ ಲಭ್ಯತೆ ಹಾಗೂ ಮಹಿಳೆಯರ ರಕ್ಷಣೆಗೆ ಜಾರಿಯಲ್ಲಿರುವ ವಿವಿಧ ಕಾನೂನುಗಳ ಕುರಿತು ಅವರು ಸಮಗ್ರ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಭೂಮಿ ಹೋರಾಟಗಾರ ಅಬ್ದುಲ್ ಅಜೀಜ್ ಯಾಡ್ರಾಮಿ ಮಾತನಾಡುತ್ತಾ, “ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸ್ವ-ಉದ್ಯೋಗ ಅತ್ಯಂತ ಅಗತ್ಯವಾಗಿದೆ” ಎಂದರು. ಕೃಷಿ ಆಧಾರಿತ ಉದ್ಯಮ, ಹೈನುಗಾರಿಕೆ, ಕುರಿ ಸಾಕಾಣಿಕೆ, ಸಾವಯವ ಕೃಷಿ, ಮಹಿಳಾ ಸ್ವ-ಸಹಾಯ ಸಂಘಗಳ ಮೂಲಕ ಆದಾಯ ಗಳಿಕೆ ಹಾಗೂ ಸರ್ಕಾರದ ವಿವಿಧ ಸ್ವ-ಉದ್ಯೋಗ ಯೋಜನೆಗಳ ಕುರಿತು ಮಾಹಿತಿ ನೀಡಿದರು. “ಮಹಿಳೆಯರು ತಮ್ಮ ಕೌಶಲ್ಯವನ್ನು ಬಳಸಿಕೊಂಡು ಸ್ವಂತ ಉದ್ಯಮ ಆರಂಭಿಸುವ ಮೂಲಕ ಕುಟುಂಬದ ಆರ್ಥಿಕ ಸ್ಥಿತಿಯನ್ನು ಬಲಪಡಿಸಬಹುದು” ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿಸ್ಟರ್ ಪ್ರಿಯಾಂಕ ಮಾತನಾಡುತ್ತಾ, “ಮಹಿಳೆಯರು ಶಿಕ್ಷಣ, ಕಾನೂನು ಅರಿವು ಹಾಗೂ ಆರ್ಥಿಕ ಸ್ವಾವಲಂಬನೆಯ ಮೂಲಕ ಸಮಾಜದಲ್ಲಿ ಉತ್ತಮ ಸ್ಥಾನಮಾನ ಗಳಿಸಬೇಕು. ಮಹಿಳಾ ಸಂಘಗಳ ಮೂಲಕ ನಾಯಕತ್ವ ಬೆಳೆಸಿಕೊಂಡು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಗ್ರಾಮೀಣ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ 120 ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯೆಯರು ಭಾಗವಹಿಸಿ, ಕಾನೂನು ಅರಿವು ಹಾಗೂ ಸ್ವ-ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು. ಗ್ರಾಮೀಣ ಮಹಿಳೆಯರಲ್ಲಿ ಕಾನೂನು ಜಾಗೃತಿ ಮತ್ತು ಆತ್ಮವಿಶ್ವಾಸ ಮೂಡಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವದುರ್ಗದಲ್ಲಿ ರಕ್ತನಿಧಿ ಕೇಂದ್ರ ಲೋಕಾರ್ಪಣೆ; 100ಕ್ಕೂ ಹೆಚ್ಚು ಜನರಿಂದ ಸ್ವಯಂಪ್ರೇರಿತ ರಕ್ತದಾನ

ಪಟ್ಟಣದಲ್ಲಿ ರಕ್ತನಿಧಿ ಕೇಂದ್ರವನ್ನು ಲೋಕಾರ್ಪಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ 100ಕ್ಕೂ ಹೆಚ್ಚು...

ರಾಯಚೂರು | ಗಾಂಜಾ ಮಾರಾಟ ಪ್ರಕರಣ: ಮೂವರು ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹25 ಸಾವಿರ ದಂಡ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ...

ರಾಯಚೂರು | ಮದರಕಲ್ ಅಂಬಾ ಮಠದ ವಿರುದ್ಧ ಸುಳ್ಳು ಆರೋಪ: ಅಮರೇಶ್ ಪಾಟೀಲ್

ದೇವದುರ್ಗ ತಾಲ್ಲೂಕು ಮದರಕಲ್‌ ಗ್ರಾಮದ ಅವದೂತ ರಾಜಯೋಗಿ ಸಂತ ನಾಮದೇವಗೌಡ ಶರಣರ...

ಉಡುಪಿ | ಕರಾವಳಿ ಇಲ್ಲದೆ ಕರ್ನಾಟಕದ ಅಸ್ಮಿತೆ ಇಲ್ಲ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ

"ಕರಾವಳಿ ಇಲ್ಲದೆ ಕರ್ನಾಟಕ ಪೂರ್ಣವಾಗುವುದಿಲ್ಲ. ಈ ಭಾಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ...