ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಯುವಕರಿಗೆ ಆದರ್ಶವಾಗಬೇಕು. ಸಾಮಾಜಿಕ ನ್ಯಾಯಕ್ಕಾಗಿ ಅವರು ನಡೆಸಿದ ಹೋರಾಟ ಅಪೂರ್ವಾದದ್ದು. ಶಿಕ್ಷಣ ಮತ್ತು ಸಮಾನತೆ ಸಾಧಿಸಲು ಅಂಬೇಡ್ಕರ್ ಪಟ್ಟ ಪರಿಶ್ರಮ ಮಹತ್ವದ್ದಾಗಿದೆ ಎಂದು ಸಂಗಮ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾದ ಫಾದರ್ ಸಂತೋಷ್ ಅಭಿಪ್ರಾಯಿಸಿದರು.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೋಟಗಿ ತಾಂಡಾದಲ್ಲಿ ಸ್ವಸಹಾಯ ಗುಂಪಿನ ವತಿಯಿಂದ ಹಮ್ಮಿಕೊಂಡಿದ್ದ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದನ್ನೂ ಓದಿ>ಸಿಂದಗಿ | ಸರ್ಕಾರ ಪುಸ್ತಕ ಓದುವ ಸಂಸ್ಕೃತಿ ಪೋಷಿಸಬೇಕು: ಕಂಬತ್ತಳ್ಳಿ
“ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವ ಮೂಲಕ ಆತ್ಮವಿಶ್ವಾಸದಿಂದ ಬದುಕು ಮನ್ನಡೆಸಬೇಕು. ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರು ಆರ್ಥಿಕವಾಗಿ ಬಲಿಷ್ಠರಾಗುವುದರ ಜೊತೆಗೆ ಸಾಮಾಜಿಕವಾಗಿ ಸಬಲರಾಗಬಹುದು” ಎಂದು ತಿಳಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಮಹಿಳೆಯರು ಹಾಗೂ ಯುವತಿಯರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಮಹಿಳೆಯರು ಅಂಬೇಡ್ಕರ್ ಘೋಷಣೆಗಳನ್ನು ಕೂಗಿ ಅವರ ಆದರ್ಶಗಳನ್ನು ಸ್ಮರಿಸಿದರು. SHG ಗುಂಪಿನ ಮಹಿಳೆಯರು ಮತ್ತು ಯುವತಿಯರು ಅಂಬೇಡ್ಕರ್ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ತೊಟ್ಟರು.




