ನಾಲ್ಕು ವರ್ಷವಾದರೂ ಪೂರ್ಣಗೊಳ್ಳದ ಸ್ಲಂ ಬೋರ್ಡ್ ಮನೆಗಳು; ತಾಳಿಕೋಟೆಯಲ್ಲಿ ಮೌನ ಧರಣಿ

Date:

ವಿಜಯಪುರ ಜಿಲ್ಲೆ ತಾಳಿಕೋಟೆ ಪಟ್ಟಣದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ (ಸ್ಲಂ ಬೋರ್ಡ್) ವತಿಯಿಂದ ಕೈಗೊಳ್ಳಲಾಗುತ್ತಿರುವ ವಸತಿ ಯೋಜನೆಯ ಕಾಮಗಾರಿ ನಾಲ್ಕು ವರ್ಷ ಕಳೆದರೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ, ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇನೆ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ–ಚಂದ್ರಕಾಂತ ಕಾಂದ್ರೋಳಿ ಬಣದ ವತಿಯಿಂದ ಮಂಗಳವಾರ ತಹಸೀಲ್ದಾರ್ ಕಚೇರಿ ಎದುರು ಶಾಂತಿಯುತ ಮೌನ ಧರಣಿ ನಡೆಸಲಾಯಿತು.

- Advertisement -

ಬಡ ಹಾಗೂ ವಸತಿರಹಿತ ಕುಟುಂಬಗಳಿಗೆ ಮನೆ ಒದಗಿಸುವ ಉದ್ದೇಶದಿಂದ ಆರಂಭಿಸಲಾದ ಯೋಜನೆ ವಿಳಂಬವಾಗಿರುವುದರಿಂದ ಫಲಾನುಭವಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೆಲವರು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದು, ಇನ್ನೂ ಕೆಲವರು ಪರ್ಯಾಯ ಸ್ಥಳಗಳಲ್ಲಿ ಜೀವನ ನಡೆಸುವಂತಾಗಿದೆ. ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಸಿವು, ಹಕ್ಕು ಮತ್ತು ‘ದೇವರ ಹೆಣ’

ಹಸಿದವನಿಗೆ ಮಾಂಸವನ್ನು ನಿರಾಕರಿಸುವುದು ಕೇವಲ ದ್ವೇಷವಲ್ಲ, ಅದು ತನ್ನ ಜಾತಿಯ ಪಾವಿತ್ರ್ಯವನ್ನು ಹಸಿದ ಹೊಟ್ಟೆಯ ಮೇಲೆ ಹೇರುವ ಕ್ರೌರ್ಯ. ಇಂದಿನ ಗೋರಕ್ಷಣೆಯ ರಾಜಕಾರಣ ಹಿನ್ನೆಲೆಯಲ್ಲಿ ಈ 'ದೇವರ ಹೆಣ' ಕಥೆಯ ಒಳನೋಟ ಇನ್ನಷ್ಟು...

ಅಡ್ಡಂಡ ಕಾರ್ಯಪ್ಪನವರ ನಾಟಕದ ವಿವಾದ: ಗೋಡ್ಸೆ ವೈಭವೀಕರಣದ ಹಿಂದೆ...

ಗೋಡ್ಸೆಯನ್ನು ವೈಭವೀಕರಿಸುವ ರಾಜಕೀಯವನ್ನು ಕೇವಲ ಒಬ್ಬ ವ್ಯಕ್ತಿಯ ಅಭಿಮಾನ ಅಥವಾ ಇತಿಹಾಸದ ಪರ್ಯಾಯ ಓದು ಎಂದು ಸೀಮಿತಗೊಳಿಸಲಾಗದು. ಅದರ ಮೂಲಕ ಗಾಂಧೀಜಿಯವರನ್ನು ಸಾರ್ವಜನಿಕ ಸ್ಮೃತಿಯಿಂದ ದೂರಮಾಡಿ, ಅವರ ಹತ್ಯೆಯನ್ನು ಸಮರ್ಥಿಸಬಹುದಾದ ವಾತಾವರಣ ನಿರ್ಮಿಸುವ...

ಗೋಮಾಂಸ ನಿಷೇಧವಿರಲಿ, ‘ಬೀಫ್ ತಿನ್ನಬೇಡಿ’ ಎಂದು ಹೇಳಿಲ್ಲ ಮನುಸ್ಮೃತಿ!

ಗುಜರಾತ್‌ ಕೋರ್ಟ್‌ ಮನುಸ್ಮೃತಿಯನ್ನು ಗೋರಕ್ಷಣೆಯ ಏಕೈಕ ಆಧಾರವೆಂದು ಬಿಂಬಿಸಲು ಹೊರಟಾಗ, ಮನುಸ್ಮೃತಿಯು ತಾನೇ ಸೃಷ್ಟಿಸಿದ ಈ ವೈರುಧ್ಯಗಳನ್ನೂ ನಾವು ಎತ್ತಿ ತೋರಿಸಬೇಕಾಗುತ್ತದೆ. ಮನುಸ್ಮೃತಿ ನೇರವಾಗಿ 'ಬೀಫ್ ತಿನ್ನಬೇಡಿ' ಎಂದೂ ಹೇಳಿಲ್ಲ, 'ತಿನ್ನಿ' ಎಂದೂ...

ಅಪೂರ್ಣ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು, ವಿಳಂಬಕ್ಕೆ ಕಾರಣರಾದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು, ಫಲಾನುಭವಿಗಳಿಗೆ ಮನೆ ಹಸ್ತಾಂತರಿಸಬೇಕು ಮತ್ತು ಯೋಜನೆಯ ಪ್ರಗತಿ ಹಾಗೂ ಪೂರ್ಣಗೊಳಿಸುವ ಗಡುವಿನ ಕುರಿತು ಲಿಖಿತ ಭರವಸೆ ನೀಡಬೇಕು ಎಂದು ಆಗ್ರಹಿಸಿದರು.

Advertisements

ಸಂಬಂಧಪಟ್ಟ ಮೇಲಧಿಕಾರಿಗಳು ಯೋಜನೆಯ ಸಂಪೂರ್ಣ ಮಾಹಿತಿ ನೀಡಿ, ಕಾಮಗಾರಿ ಪೂರ್ಣಗೊಳಿಸುವ ಕುರಿತು ಲಿಖಿತ ಭರವಸೆ ನೀಡುವವರೆಗೂ ಧರಣಿ ಮುಂದುವರಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ಅಂಬೇಡ್ಕರ್ ಸೇನೆಯ ಜಿಲ್ಲಾ ಉಪಾಧ್ಯಕ್ಷ ಬಸು ಈ. ಕಟ್ಟಿಮನಿ, ತಾಲೂಕು ಅಧ್ಯಕ್ಷ ಗೋಪಾಲ ಕಟ್ಟಿಮನಿ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಚಂದ್ರಕಾಂತ ಕಾಂದ್ರೋಳಿ ಬಣದ ಕಾರ್ಯದರ್ಶಿ ಶಂಕರ ಸಾಸನೂರ ಸೇರಿದಂತೆ ಮುಖಂಡರು ಧರಣಿಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮಸ್ಕಿಯಲ್ಲಿ ₹2.50 ಕೋಟಿ ವೆಚ್ಚದಲ್ಲಿ ಸಾಲುಮರದ ತಿಮ್ಮಕ್ಕ ಟೀ ಪಾರ್ಕ್ ನಿರ್ಮಾಣ

ಐತಿಹಾಸಿಕ ಮಸ್ಕಿ ಪಟ್ಟಣದ ಸೌಂದರ್ಯ ಹೆಚ್ಚಿಸುವುದರ ಜತೆಗೆ ಸಾರ್ವಜನಿಕರಿಗೆ ಉತ್ತಮ ಪರಿಸರ...

ಗದಗ | ಕಳ್ಳತನ ಪ್ರಕರಣ; ಆರೋಪಿಗಳ ಬಂಧಿಸಿ ₹2.48 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ

ಲಕ್ಷ್ಮೇಶ್ವರ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರೈತರನ್ನು...

ಕೋಲಾರ | ಕಲ್ಲುಕುಟುಕರ 3ಎಫ್ ಫಲಾನುಭವಿಗಳಿಗೆ ವಿನಾಕಾರಣ ತೊಂದರೆ ನೀಡದಿರಿ: ಬೋವಿ ಸಂಘ ಆಗ್ರಹ

ಬಡ ಕಲ್ಲುಕುಟುಕರ 3ಎಫ್ ಫಲಾನುಭವಿಗಳಿಗೆ ವಿನಾಕಾರಣ ತೊಂದರೆ ನೀಡುತ್ತಿರುವವರ ವಿರುದ್ಧ ಕಾನೂನು...